ಕನ್ನಡಪ್ರಭ ವಾರ್ತೆ,ತುಮಕೂರು
ನಗರದ ಶ್ರೀ ಸಿದ್ದಗಂಗಾ ಮಹಿಳಾ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಶ್ರೀ ಸಿದ್ದಗಂಗಾ ಮಹಿಳಾ ಪದವಿ ಪೂರ್ವ ಕಾಲೇಜು, ಸಿದ್ದಗಂಗಾ ಪದವಿ ಪೂರ್ವ ಕಾಲೇಜು(ಬಾಲಕರ), ಪಿ.ಬಿ. ರಸ್ತೆಯ ಸಿದ್ದಗಂಗಾ ಪದವಿ ಪೂರ್ವ ಕಾಲೇಜು ಹಾಗೂ ಬೆಂಗಳೂರಿನ ನಾಗಾರ್ಜುನ ಎಜುಕೇರ್ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ನೀಟ್, ಜೆಇಇ ಹಾಗೂ ಕೆ.ಸೆಟ್ ತರಬೇತಿ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಪಿಯುಸಿ ಬಹು ಮುಖ್ಯವಾದ ಘಟ್ಟ. ಈ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಮುಂದಿನ ಶೈಕ್ಷಣಿಕ ಗುರಿಯನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳಿಗೆ ಪಿಯುಸಿ ಬಳಿಕ ವೃತ್ತಿಪರ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಳ್ಳಲು ಸುಲಭವಾಗಲಿ ಎಂಬ ಉದ್ದೇಶದಿಂದ ಬೆಂಗಳೂರಿನ ನಾಗಾರ್ಜುನ ಎಜುಕೇರ್ ಸಂಸ್ಥೆಯ ಸಹಯೋಗದಲ್ಲಿ ನೀಟ್, ಜೆಇಇ ಹಾಗೂ ಕೆ-ಸೆಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸೂಕ್ತ ತರಬೇತಿಯನ್ನು ನೀಡಲು ಮುಂದಾಗಿದ್ದೇವೆ ಎಂದರು.ನಮ್ಮ ದೇಶದಲ್ಲಿ ಪದವೀಧರರು, ಪದವಿ ಪೂರ್ವ, ಸ್ನಾತಕೋತ್ತರ ಪದವೀಧರರ, ತಾಂತ್ರಿಕ ಶಿಕ್ಷಣವಂತರು ಬಹಳಷ್ಟು ಮಂದಿ ಇದ್ದಾರೆ. ಇವರೆಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಇಂತಹ ತರಬೇತಿಗಳನ್ನು ಪಡೆದು ಬರೆದಿದ್ದಾರೆ. ಹಾಗಾಗಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಗುಣಮಟ್ಟದ ತರಬೇತಿ ಕೋರ್ಸ್ ನೀಡಲಾಗುತ್ತಿದೆ ಎಂದರು.
ನಾಗಾರ್ಜುನ ಎಜುಕೇರ್ ನಿರ್ದೇಶಕರಾದ ಮನೋಹರ್ ನಾರೋಜಿ ಮಾತನಾಡಿ, ಕಳೆದ ಎರಡೂವರೆ ತಿಂಗಳಿಂದ ನಮ್ಮ ಸಂಸ್ಥೆ ವತಿಯಿಂದ ನೀಟ್, ಜೆಇಇ ಕೋರ್ಸ್ ಪ್ರಾರಂಭಿಸುವ ಸಂಬಂಧ ಸಾಕಷ್ಟು ಚರ್ಚೆ ಮಾಡಿ ಇಂದು ತರಗತಿ ಉದ್ಘಾಟನೆಗೊಂಡಿದೆ ಎಂದು ಅವರು ಹೇಳಿದರು.
ನಾಗಾರ್ಜುನ ಎಜುಕೇರ್ ಸಂಸ್ಥೆ ಬೆಂಗಳೂರಿನಲ್ಲಿ ನೀಟ್, ಜೆಇಇ ಮತ್ತು ಕೆ-ಸೆಟ್ ಅತ್ಯುತ್ತಮ ತರಬೇತಿ ನೀಡಿ ಉತ್ತಮ ಫಲಿತಾಂಶ ತಂದು ಕೊಡುತ್ತಿದೆ. ಹಾಗಾಗಿ ನಮ್ಮ ಕಾಲೇಜಿನ ಮಕ್ಕಳಿಗೂ ಇದರ ಪ್ರಯೋಜನ ದೊರೆಯಲಿ ಎಂಬ ಉದ್ದೇಶದಿಂದ ಈ ತರಬೇತಿಯನ್ನು ಆರಂಭಿಸಲಾಗುತ್ತಿದೆ ಎಂದರು.
ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಎಸ್‌ಎಸ್.ಇ.ಎಸ್. ಕಾರ್ಯನಿರ್ವಾಹಕ ನಿರ್ದೇಶಕರಾದ ಜಯವಿಭವಸ್ವಾಮಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ವಿಫುಲವಾದ ಅವಕಾಶಗಳಿವೆ. ಈ ಅವಕಾಶ ಗ್ರಾಮೀಣ ಮಕ್ಕಳಿಗೂ ಸಿಗಲಿ ಎಂಬ ಉದ್ದೇಶದಿಂದ ಈ ತರಬೇತಿಯ ಕೋರ್ಸ್ಗಳನ್ನು ಆರಂಭಿಸಲಾಗಿದೆ ಎಂದರು.