ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕು ಆರೋಗ್ಯಾಧಿಕಾರಿ ಡಾ.ಸಿ.ಎ.ಅರವಿಂದ್ ತರಬೇತಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಡೆಂಘೀ ನಿರ್ಮೂಲನೆ ಮಾಡಲು ಆರೋಗ್ಯ ಇಲಾಖೆ ಜತೆಗೆ ಪೌರ ಕಾರ್ಮಿಕರ ಸಹಕಾರ ಬಹಳ ಅಗತ್ಯವಾಗಿದೆ ಎಂದರು.
ಡೆಂಘೀ ಜ್ವರವು ವೈರಸ್‌ನಿಂದ ಉಂಟಾಗುವ ಕಾಯಿಲೆ. ಇದು ಸೋಂಕು ಹೊಂದಿದ ಇಂಡೀಸ್ ಈಜಿಪ್ಟಿ ಸೊಳ್ಳೆ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಮನೆಗಳಲ್ಲಿ ಶೇಖರಿಸಿಡುವ ನೀರಿನ ತಾಣಗಳಾದ ಡ್ರಮ್, ಬ್ಯಾರೆಲ್, ಸಿಮೆಂಟ್ ತೊಟ್ಟಿ, ಮಡಿಕೆ ಹಾಗೂ ತ್ಯಾಜ್ಯ ವಸ್ತುಗಳಾದ ತೆಂಗಿನ ಚಿಪ್ಪು ಒಡೆದ ಬಾಟಲಿ ಹಾಗೂ ಟೈರ್‌ಗಳಲ್ಲಿ ಶೇಖರವಾಗುವ ಶುದ್ಧ ನೀರಿನಲ್ಲಿ ಸಾಮಾನ್ಯವಾಗಿ ಸಂತಾನಾಭಿವೃದ್ಧಿ ಮಾಡುತ್ತವೆ ಎಂದರು.ಈ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಮನುಷ್ಯರಿಗೆ ಕಚ್ಚುವುದರಿಂದ ಎಚ್ಚರಿಕೆ ವಹಿಸಬೇಕು. ಸ್ವಚ್ಛತೆ ಕಾಪಾಡಬೇಕು. ಡೆಂಘೀ ಜ್ವರಕ್ಕೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇಲ್ಲ. ರೋಗದ ಲಕ್ಷಣಗಳಿಗೆ ಅನುಗುಣವಾಗಿ ತಜ್ಞ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆಯಬಹುದು ಎಂದರು.