ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಸಂಸ್ಥೆ ಜಿಲ್ಲಾ ನಿರ್ದೇಶಕರಾದ ಯೋಗೇಶ್ ಕಾರ್ಯಾಗಾರಕ್ಕೆ ಚಾಲನೆ ನೀಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉದ್ದೇಶಗಳು, ಕಾರ್ಯಕ್ರಮಗಳು, ಸಮುದಾಯ ಅಭಿವೃದ್ಧಿ, ಸ್ವಸಹಾಯ ಸಂಘಗಳ ಪಾತ್ರ, ಕೃಷಿ ಅಭಿವೃದ್ಧಿ, ಮಾನವ ಸಂಪನ್ಮೂಲ ಅಭಿವೃದ್ಧಿ, ಪ್ರಗತಿ ನಿಧಿ, ಜನಜಾಗೃತಿ, ನಮ್ಮೂರು ನಮ್ಮ ಕೆರೆ, ಜ್ಞಾನದೀಪ ಶಾಲಾ ಶಿಕ್ಷಣ, ಸುಜ್ಞಾನ ನಿಧಿ, ಶಿಷ್ಯವೇತನ ಯೋಜನೆ, ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ಮೊದಲಾದ ವಿವಿಧ ಯೋಜನೆಗಳ ಕುರಿತು ಸವಿಸ್ತಾರವಾದ ಮಾಹಿತಿ ನೀಡಿದರು.
ಮುಖ್ಯವಾಗಿ ಒಕ್ಕೂಟದ ಪದಾಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಹೇಗೆ ಸಮರ್ಪಕವಾಗಿ ನಿರ್ವಹಿಸಬೇಕು ಎಂಬುದರ ಕುರಿತು ಮಾರ್ಗದರ್ಶನ ನೀಡಿದರು.ಯೋಜನಾಧಿಕಾರಿ ಪ್ರಸಾದ್ ಮಾತನಾಡಿ, ಪ್ರಗತಿ ರಕ್ಷಾ ಕವಚ, ಬಡ್ಡಿದರ, ವಾರದ ಸಭೆ, ಒಕ್ಕೂಟ ಸಭೆ, ಮರುಪಾವತಿ ಚೀಟಿ ಅನುಷ್ಠಾನ, ಆರೋಗ್ಯ ರಕ್ಷಾ ಹಾಗೂ ಸಂಪೂರ್ಣ ಸುರಕ್ಷಾ ವಿಮಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ಇಂದು ಸ್ವಯಂ ಸೇವಕರಿಂದ ಪಥ ಸಂಚಲನ
ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಸ್ಥಾಪನೆಯಾಗಿ ನೂರುವರ್ಷ ತುಂಬಿದ ಹಿನ್ನೆಲೆಯಲ್ಲಿ ಅ.26 ರಂದು ಪಟ್ಟಣದಲ್ಲಿ ಸ್ವಯಂ ಸೇವಕರಿಂದ ಪಥ ಸಂಚಲನ ನಡೆಯಲಿದೆ.
ಪಥಸಂಚಲನದಲ್ಲಿ ಭಾಗವಹಿಸುವ ನೂತನ ಕಾರ್ಯಕರ್ತರಿಗೆ ಅಗತ್ಯವಾದ ಸಮವಸ್ತ್ರ, ದಂಡ ಮತ್ತು ಟೋಪಿಗಳ ಮಾರಾಟಕ್ಕಾಗಿ ಗಣವೇಷ ಮಾರಾಟ ಮಳಿಗೆ ತೆರೆಯಲಾಗಿದೆ.
150ಕ್ಕೂ ಹೆಚ್ಚು ಸ್ವಯಂ ಸೇವಕರು ಪಥಸಂಚಲನದಲ್ಲಿ ಭಾಗವಹಿಸಲಿದ್ದು, ಸುಗಮ ಪಥಸಂಚಲನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾವುದೇ ಅಹಿತರ ಘಟನೆಗಳು ನಡೆಯದಂತೆ ಪಟ್ಟಣ ಪೋಲಿಸರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.