ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ಇಲ್ಲಿನ ಟಿ.ಸಿದ್ದಲಿಂಗಯ್ಯ ವೃತ್ತದಲ್ಲಿ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್ ರಮೇಶ್ ಮಾತನಾಡಿ, ರಾಜ್ಯ ಸರ್ಕಾರ ಈ ಪ್ರಕರಣದ ನೇರ ಹೊಣೆ ಹೊರಬೇಕು. ಉಳಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ, ಆರ್‌ಸಿಬಿ ಫ್ರಾಂಚೆಸಿಗಳೂ ಪ್ರಕರಣದಲ್ಲಿ ಹೊಣೆ ಹೊರಬೇಕು. ಇವೆಲ್ಲವುಗಳ ನಿರ್ಲಕ್ಷ್ಯದಿಂದಲೇ ಅಮಾಯಕರು ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಸಮಗ್ರ ತನಿಖೆಯಾಗಬೇಕು. ಸಾವನ್ನಪ್ಪಿದ ಯುವಜನರ ಕುಟುಂಬಗಳಿಗೆ ನೀಡಿರುವ ಪರಿಹಾರ ಮೊತ್ತವನ್ನು ಹೆಚ್ಚಿಸಬೇಕು. ಮುಂದೆ ರಾಜ್ಯದಲ್ಲಿ ಎಂದಿಗೂ ಈ ರೀತಿಯ ಘಟನಾವಳಿಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಆಗ್ರಹಿಸಿದರು.ಸಂಘಟನಾ ಕಾರ್ಯದರ್ಶಿ ಅರವಿಂದಪ್ಪ, ದೊಡ್ಡೇಗೌಡ, ರಾಜ್ಯ ಸಂಚಾಲಕ ಪಿ ವಾಸು, ನರೇಂದ್ರ, ಜಿಲ್ಲಾ ಯುವ ಘಟಕದ ಅಧ್ಯಕ್ಷ ರಂಜಿತ್, ತಾಲೂಕು ಘಟಕದ ಅಧ್ಯಕ್ಷ ವಿನಯ್, ಶಿವಣ್ಣ, ಉಪಾಧ್ಯಕ್ಷ ಅಂಬರೀಶ್, ಅಶ್ವಥ್ ನಾರಾಯಣ್, ಪ್ರದೀಪ್ ಕುಮಾರ್, ತಾಲೂಕು ಕಾರ್ಮಿಕ ಘಟಕದ ಅಧ್ಯಕ್ಷ ಶಿವಶಂಕರ ರೆಡ್ಡಿ. ಮುಖಂಡ ಶಿವಶಂಕರ್ ಹಾಗೂ ಸಂಘಟನೆಯ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.