)
ಕನ್ನಡಪ್ರಭವಾರ್ತೆ ಬೆಂಗಳೂರು
ಪಾದಚಾರಿ ಮೊಹಮ್ಮದ್ ಅಪ್ರೋಜ್ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ನಡೆದು ಹೋಗುತ್ತಿದ್ದ ವಿದ್ಯಾರ್ಥಿನಿ ಸೇರಿದಂತೆ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟ್ರಾನ್ಸ್‌ಫಾರ್ಮರ್ ಸ್ಫೋಟಗೊಳ್ಳುತ್ತಿದ್ದಂತೆಯೇ ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಮೀಪದಲ್ಲೇ ಸಂಚರಿಸುತ್ತಿದ್ದ ಕಾರಿನ ಡ್ಯಾಶ್ ಬೋರ್ಡ್ ಕ್ಯಾಮೆರಾದಲ್ಲಿ ಘಟನೆಯ ದೃಶ್ಯಾವಳಿ ಸೆರೆಯಾಗಿದೆ. ಸ್ಫೋಟದ ಶಬ್ದಕ್ಕೆ ಪಾದಚಾರಿಗಳು ಹಾಗೂ ವಾಹನ ಸವಾರರು ಬೆಚ್ಚಿಬಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಯಲಹಂಕ ಠಾಣೆ ಪೊಲೀಸರು ಹಾಗೂ ಬೆಸ್ಕಾಂ ಸಿಬ್ಬಂದಿ ಬಂದು ಪರಿಶೀಲನೆ ನಡೆಸಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಬಿದ್ದಿದ್ದ ಉಪಕರಣಗಳನ್ನು ಕೊಂಡೊಯ್ದು ಪರಿಶೀಲನೆಗೆ ಒಳಪಡಿಸಿದ್ದಾರೆ.ಘಟನೆಗೆ ಇಲಿ ಕಾರಣ?ಟ್ರಾನ್ಸ್‌ಫಾರ್ಮರ್ ಒಳಗೆ ಇಲಿ ಸೇರಿಕೊಂಡಿತ್ತು. ಇಲಿ ವೈರ್ ತುಂಡರಿಸಿದ್ದರಿಂದ ಶಾರ್ಟ್ ಸರ್ಕಿಟ್ ಸಂಭವಿಸಿ ಸ್ಫೋಟ ಸಂಭವಿಸಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಘಟನೆಗೆ ನಿಖರವಾದ ಕಾರಣ ಪತ್ತೆಹಚ್ಚಲು ಪರಿಶೀಲನೆ ನಡೆಸಲಾಗುತ್ತಿದೆ. ಸ್ಥಳದಲ್ಲಿ ಯಾವುದೇ ಸ್ಫೋಟದ ವಸ್ತುಗಳು ಪತ್ತೆಯಾಗಿಲ್ಲ. ಆದರೂ ಪರಿಶೀಲನೆ ನಡೆಸಲಾಗುತ್ತಿದೆ. ಅಕ್ಕಪಕ್ಕದಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಾವಳಿ ಸಂಗ್ರಹಿಸಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇನ್ನು ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೆನ್ನಿಗಾನಹಳ್ಳಿಯ ಕೊಕಾಕೋಲಾ ಗೋದಾಮು ಬಳಿ ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಸ್ಪೋಟಗೊಂಡು ನಾಲ್ವರು ತೀವ್ರವಾಗಿ ಗಾಯಗೊಂಡಿದ್ದರು. ಸ್ಫೋಟದ ರಭಸಕ್ಕೆ ಪಕ್ಕದಲ್ಲೇ ನಿಲ್ಲಿಸಿದ್ದ ದ್ವಿಚಕ್ರ ವಾಹನವೊಂದು ಸಂಪೂರ್ಣ ಕರಕಲಾಗಿತ್ತು.