ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಕಣಿವೆಕೊಪ್ಪಲು ಗ್ರಾಮದ, ಟಿಎಪಿಸಿಎಂಎಸ್ ಮಾಜಿ ನಿರ್ದೇಶಕ, ವಕೀಲರೂ ಆದ ಕಣಿವೆ ಯೋಗೇಶ್(49) ಅವರು ಪಾಂಡವಪುರ- ಕೆ.ಆರ್.ಪೇಟೆ ಮುಖ್ಯರಸ್ತೆಯಲ್ಲಿ ಚಿನಕುರಳಿ ಕಡೆಯಿಂದ ಪಾಂಡವಪುರ ಕಡೆಗೆ ಕಾರ್‌ನಲ್ಲಿ ಬರುತ್ತಿದ್ದಾಗ ಮೈಸೂರು ಕಡೆಯಿಂದ ವೇಗವಾಗಿ ಬಂದ ಸಾರಿಗೆ ಬಸ್ ನೇರವಾಗಿ ಕಾರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.ವಿಷಯ ತಿಳಿದು ಸಾರ್ವಜನಿಕರು ಆಗಮಿಸಿ ಸಾರಿಗೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ಡಿಪೋ ಮ್ಯಾನೇಜರ್ ಅವರನ್ನು ಸ್ಥಳಕ್ಕೆ ಕರೆಸಬೇಕು. ಅಧಿಕಾರಿ ಸ್ಥಳಕ್ಕೆ ಬರುವವರೆಗೂ ಮೃತದೇಹ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದರು.
ನಂತರ ಕೆಎಸ್ ಆರ್‌ಟಿಸಿ ಅಧಿಕಾರಿ ಬಂದು ಪರಿಹಾರ ನೀಡುವುದಾಗಿ ಭರವಸೆ ನೀಡಿದ ಬಳಿಕ ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಯಿತು. ವರ್ಷದ ಹಿಂದಷ್ಟೇ ಪುತ್ರಿ ಮತ್ತು ತಂದೆಯನ್ನು ಕಳೆದುಕೊಂಡಿದ್ದ ಕಣಿವೆ ಯೋಗೇಶ್ ಬಾಳಿನಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಮೃತರಿಗೆ ಪತ್ನಿ ತಾಪಂ ಮಾಜಿ ಸದಸ್ಯೆ ಗೀತಾ, ಓರ್ವ ಪುತ್ರ ಇದ್ದಾನೆ.ಪಾಂಡವಪುರ ತಾಲೂಕು ವಕೀಲರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಜೆಡಿಎಸ್ ಪಕ್ಷದಲ್ಲಿ ದಲಿತ ಸಮುದಾಯದ ಪ್ರಭಾವಿ ಮುಖಂಡ ಎನಿಸಿದ್ದರು. ಯೋಗೇಶ್ ನಿಧನ ಹಿನ್ನೆಲೆಯಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್, ಜಿಪಂ ಮಾಜಿ ಸದಸ್ಯ ಸಿ.ಅಶೋಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣಬಾಲಕಿಯರಿಬ್ಬರು ಮನೆಯಲ್ಲಿ ಪತ್ರ ಬರೆದಿಟ್ಟು ನಾಪತ್ತೆಯಾಗಿರುವ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ 16 ಹಾಗೂ 14 ವರ್ಷದ ಅಪ್ರಾಪ್ತ ಹೆಣ್ಣು ನಾಪತ್ತೆಯಾಗಿದ್ದಾರೆ.