ಕನ್ನಡ ರಾಜ್ಯೋತ್ಸವ ಆಚರಿಸದ ಸಾರಿಗೆ ಇಲಾಖೆ: ಕರವೇಯಿಂದ ಬಸ್ ತಡೆದು ಪ್ರತಿಭಟನೆ

KannadaprabhaNewsNetwork |  
Published : Nov 02, 2026, 03:30 AM IST
ಪೋಟೊ-೧ ಎಸ್.ಎಚ್.ಟಿ. ೨ಕೆ- ಕನ್ನಡ ರಾಜ್ಯೋತ್ಸವ ಆಚರಣೆ ಮಾಡದ ಸಾರಿಗೆ ಇಲಾಖೆ ಅಧಿಕಾರಿಗಳ ಕ್ರಮ ಖಂಡಿಸಿ ಕರವೇ ಕಾರ್ಯಕರ್ತರು ಬಸ್ ತಡೆದು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ನಾಡಿನ ಹೆಮ್ಮೆಯ ಕನ್ನಡ ರಾಜ್ಯೋತ್ಸವ ದಿನವನ್ನು ಆಚರಿಸದೆ ನಿರ್ಲಕ್ಷ್ಯ ತೋರಿದ ಸಾರಿಗೆ ಇಲಾಖೆಯ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಬಸ್ ತಡೆದು ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಶಿರಹಟ್ಟಿ

ನಾಡಿನ ಹೆಮ್ಮೆಯ ಕನ್ನಡ ರಾಜ್ಯೋತ್ಸವ ದಿನವನ್ನು ಆಚರಿಸದೆ ನಿರ್ಲಕ್ಷ್ಯ ತೋರಿದ ಸಾರಿಗೆ ಇಲಾಖೆಯ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಬಸ್ ತಡೆದು ಪ್ರತಿಭಟನೆ ನಡೆಸಿದರು.

ಕರವೇ ಮುಖಂಡ ರಫೀಕ ಕೆರಿಮನಿ ಮಾತನಾಡಿ, ನ. ೧ರಂದು ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದರೆ, ಸಾರಿಗೆ ಇಲಾಖೆಯ ಅಧಿಕಾರಿಗಳು ಬಸ್ ನಿಲ್ದಾಣದ ಕಚೇರಿಯಲ್ಲಿ ರಾಜ್ಯೋತ್ಸವ ಆಚರಣೆಗೆ ಯಾವುದೇ ಸಿದ್ಧತೆ ಕೈಗೊಳ್ಳದೆ ಇರುವುದು ಕನ್ನಡಪರ ಸಂಘಟನೆಗಳ ಅಸಮಾಧಾನಕ್ಕೆ ಕಾರಣವಾಗಿದ್ದು, ಕನ್ನಡ ಭಾಷೆ, ನೆಲ, ಜಲ ಹಾಗೂ ಸಂಸ್ಕೃತಿಯ ರಕ್ಷಣೆಯ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ ಎಂದರು.

ಸರ್ಕಾರಿ ಇಲಾಖೆಗಳು ಕನ್ನಡ ನಾಡಿನ ಹಬ್ಬವನ್ನು ಗೌರವದಿಂದ ಆಚರಿಸಬೇಕಾದ ಅಗತ್ಯವಿದೆ. ಸಾರಿಗೆ ಇಲಾಖೆಯ ನಿರ್ಲಕ್ಷ್ಯ ಖಂಡಿಸಿ ಕರವೇ ಕಾರ್ಯಕರ್ತರು ಬಸ್ ತಡೆದು ಘೋಷಣೆನ್ನು ಕೂಗಿದರು. ಕನ್ನಡ ರಾಜ್ಯೋತ್ಸವ ಆಚರಿಸದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಇಂತಹ ನಿರ್ಲಕ್ಷ್ಯ ಮರುಕಳಿಸದಂತೆ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಿಂದ ಕೆಲಕಾಲ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಪ್ರಯಾಣಿಕರು ತೊಂದರೆ ಅನುಭವಿಸಿದರು.

ಪ್ರತಿಭಟನೆಯ ವೇಳೆ ನಿಲ್ದಾಣದಲ್ಲಿ ಹತ್ತಾರು ಬಸ್‌ಗಳನ್ನು ತಡೆದು ನಿಲ್ಲಿಸಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಲಾಯಿತು. ಬಳಿಕ ಸ್ಥಳಕ್ಕೆ ಆಗಮಿಸಿದ ಡಿಪೋ ವ್ಯವಸ್ಥಾಪಕರು ಕನ್ನಡ ಧ್ವಜಗಳನ್ನು ತರಿಸಿಕೊಟ್ಟರು. ಕರವೇ ಕಾರ್ಯಕರ್ತರೇ ಬಸ್‌ಗಳಿಗೆ ಕನ್ನಡ ಧ್ವಜಗಳನ್ನು ಕಟ್ಟುವ ಮೂಲಕ ಕನ್ನಡ ರಾಜ್ಯೋತ್ಸವದ ಸಂಭ್ರಮಕ್ಕೆ ಚಾಲನೆ ನೀಡಿದರು. ನಂತರ ಪ್ರತಿಭಟನೆ ಹಿಂಪಡೆದು, ಮುಂದಿನ ದಿನಗಳಲ್ಲಿ ಇಂತಹ ನಿರ್ಲಕ್ಷ್ಯ ಮರುಕಳಿಸದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ವೀರೇಶ ಪಸಾರದ, ಗೌಸ ಕಲಾವಂತ, ಮುತ್ತಣ್ಣ ಮುಂಡವಾಡ, ದೇವೆಂದ್ರ ಸಿಂಧೆ, ಮನ್ಸೂರಲಿ ಮಕಾಂದಾರ, ಮಲ್ಲೀಕ ಜಾನ, ಈರಣ್ಣ ಬಾಗೇವಾಡಿ, ಇಮ್ರಾನ್ ಬಾವಿಕಟ್ಟಿ ಮುಂತಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜ್ಞಾನೇಶ್ ಕುಮಾರ್‌ ಜೈಲಿಗಟ್ಟುತ್ತೇವೆ : ರಾಹುಲ್‌ ಗುಡುಗು
ಕನ್ನಡ ಬಾವುಟಕ್ಕೆ ನಾಡಧ್ವಜ ಸ್ಥಾನಮಾನ: ಸಿಎಂ