ಜನರ ಆರೋಗ್ಯ ದೃಷ್ಟಿಯಿಂದ ಶೀಘ್ರದಲ್ಲೇ ಟ್ರಾಮಾ ಕೇರ್ ಸೆಂಟರ್ ಪ್ರಾರಂಭ: ಶಾಸಕ ಕೆ.ಎಂ.ಉದಯ್

KannadaprabhaNewsNetwork |  
Published : Oct 13, 2025, 02:00 AM IST
12ಕೆಎಂಎನ್ ಡಿ20 | Kannada Prabha

ಸಾರಾಂಶ

ಬದಲಾದ ರಾಜಕೀಯ ಸನ್ನಿವೇಶದಿಂದ ತೆರೆಯಲು ಸಾಧ್ಯವಾಗಿಲ್ಲ. ಈಗಾಗಲೇ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ನಾನು ಕೂಡ ಅವರ ಜೊತೆಗೂಡಿ ಸಭೆ ನಡೆಸಿದ್ದು, ಒಮ್ಮತದ ನಿರ್ಣಯವಾಗಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ಜನರ ಆರೋಗ್ಯದ ದೃಷ್ಟಿಯಿಂದ ನಗರದಲ್ಲಿ ಟ್ರಾಮಾಕೇರ್ ಸೆಂಟರ್ ತೆರೆಯಲು ಸಚಿವರ ಸಭೆಯಲ್ಲಿ ತೀರ್ಮಾನವಾಗಿದೆ. ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಭಾನುವಾರ ಹೇಳಿದರು.

ನಗರದ ಶ್ರೀಗುರುಶಾಂತಪ್ಪ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಪ್ರಯೋಗಾಲಯ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ನಗರದಲ್ಲಿ ಟ್ರಾಮಾಕೇರ್ ಸೆಂಟರ್ ಆರಂಭಿಸಲು ಮಾಜಿ ಸಿಎಂ ಎಸ್.ಎಂ.ಕೃಷ್ಣರ ಆಡಳಿತಾವಧಿಯಲ್ಲಿ ತೀರ್ಮಾನವಾಗಿತ್ತು ಎಂದರು.

ಬದಲಾದ ರಾಜಕೀಯ ಸನ್ನಿವೇಶದಿಂದ ತೆರೆಯಲು ಸಾಧ್ಯವಾಗಿಲ್ಲ. ಈಗಾಗಲೇ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ನಾನು ಕೂಡ ಅವರ ಜೊತೆಗೂಡಿ ಸಭೆ ನಡೆಸಿದ್ದು, ಒಮ್ಮತದ ನಿರ್ಣಯವಾಗಿದೆ ಎಂದರು.

ಬೆಂಗಳೂರು - ಮೈಸೂರು ಮಧ್ಯೆದ ಮದ್ದೂರಿನಲ್ಲೆ ಟ್ರಾಮಾ ಕೇರ್ ಸೆಂಟರ್ ತೆರೆಯಲು ಸರ್ಕಾರದ ಮಟ್ಟದಲ್ಲಿ ಎಲ್ಲಾ ಪ್ರಕ್ರಿಯೆಗಳು ನಡೆಯುತ್ತಿವೆ. ಶೀಘ್ರದಲ್ಲೇ ಅನುಮೋದನೆ ದೊರೆಯಲಿದೆ. ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ರಕ್ತ ಪರೀಕ್ಷೆ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ಉಚಿತವಾಗಿ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂಬ ದೃಷ್ಟಿಯಿಂದ ಸಾರ್ವಜನಿಕ ಆಸ್ಪತ್ರೆಯಲ್ಲಿ 50 ಲಕ್ಷ ರು ವೆಚ್ಚದಲ್ಲಿ ಪ್ರಯೋಗಾಲಯವನ್ನು ನಿರ್ಮಿಸಲಾಗುತ್ತಿದೆ ಎಂದರು.

ತಾಲೂಕು ಹಾಗೂ ನಗರ ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಸೌಲಭ್ಯಗಳಿಲ್ಲ. ಹೀಗಾಗಿ ನಾನು ಶಾಸಕನಾದ ಬಳಿಕ ಆಸ್ಪತ್ರೆಯ ಮೂಲ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡುತ್ತಿದ್ದೇನೆ. ಈಗಾಗಲೇ ಆಸ್ಪತ್ರೆ ಆಧುನೀಕರಣ ಕಾಮಗಾರಿ 1.30 ಕೋಟಿ ರು ವೆಚ್ಚದಲ್ಲಿ ಕಾಮಗಾರಿ ಪ್ರಗತಿಯಲ್ಲಿದ್ದು, ಇಂದು ಪ್ರಯೋಗಾಲಯ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಇಷ್ಟು ದಿನಗಳ ಕಾಲ ಖಾಸಗಿ ಲ್ಯಾಬೋರೇಟರಿಗಳಲ್ಲಿ ನಡೆಯುತ್ತಿದ್ದ ದಂಧೆಗೆ ಇನ್ನು ಮುಂದೆ ಕಡಿವಾಣ ಬೀಳಲಿದೆ ಎಂದರು.

ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿಬ್ಬಂದಿ, ನುರಿತ ತಜ್ಞ ವೈದ್ಯರ ಕೊರತೆ ಸೇರಿದಂತೆ ಹಲವು ಸಮಸ್ಯೆಗಳಿವೆ. ಈಗಾಗಲೇ ಹಂತ ಹಂತವಾಗಿ ಆಧುನೀಕರಣ ಕಾಮಗಾರಿಗೆ ಒತ್ತು ನೀಡುತ್ತಿದ್ದು, ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ಶ್ರೀಗುರುಶಾಂತಪ್ಪ ಸಾರ್ವಜನಿಕ ಆಸ್ಪತ್ರೆ ಎಂದು ವೈದ್ಯರ ಚೀಟಿಯಲ್ಲಿ ನಮೂದಿಸಬೇಕೆಂದು ಆರೋಗ್ಯ ರಕ್ಷಾ ಸಮಿತಿ ಸದಸ್ಯ ಗಿರೀಶ್ ಅವರು ಶಾಸಕರಿಗೆ ಮನವಿ ಸಲ್ಲಿಸಿದರು. ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷೆ ಕೋಕಿಲ ಅರುಣ್, ಉಪಾಧ್ಯಕ್ಷ ಟಿ.ಆರ್.ಪ್ರಸನ್ನಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ವನಿತಾ, ಸದಸ್ಯರಾದ ಸಿದ್ದರಾಜು, ಕಮಲ್ ನಾಥ್, ಟಿಎಚ್ಓ ರವಿಶಂಕರ್, ಟಿಎಪಿಸಿಎಂಎಸ್ ಉಪಾಧ್ಯಕ್ಷ ರಾಘವಾ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ರಾಜೇಂದ್ರ, ಸಿದ್ದರಾಜು, ತಾಲೂಕು ಎಸ್ಸಿ ಘಟಕದ ಅಧ್ಯಕ್ಷ ಮಹದೇವಯ್ಯ ಮುಖಂಡರಾದ ವಿಜಯ್ ಕುಮಾರ್, ನಿತಿನ್, ಮಹಲಿಂಗು ಮತ್ತಿತರರು ಇದ್ದರು.

PREV

Recommended Stories

ಬಂಡಿಗಣಿಯಲ್ಲಿಂದು ಸರ್ವಧರ್ಮ ಮಹಾಸಂಗಮ: ಸಿಎಂ ಭಾಗಿ
ಆರೆಸ್ಸೆಸ್‌ ಬೆಳವಣಿಗೆ ಕೆಲ ಶಕ್ತಿ, ಸಂಘಟನೆಗಳಿಗೆ ಸಹಿಸಲಾಗ್ತಿಲ್ಲ: ಅರುಣಕುಮಾರ