ಅರ್ಜಿದಾರರೊಂದಿಗೆ ಮಾನವೀಯತೆಯಿಂದ ವರ್ತಿಸಿ

KannadaprabhaNewsNetwork |  
Published : Sep 28, 2026, 02:00 AM IST
ಹೊಸಪೇಟೆ ನಗರದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ ಕಾರ್ಯಕ್ರಮವನ್ನು ತಹಸೀಲ್ದಾರ್ ಶೃತಿ ಎಂ. ಮಳ್ಳಪ್ಪಗೌಡ್ರು ಉದ್ಘಾಟಿಸಿದರು. | Kannada Prabha

ಸಾರಾಂಶ

ಕರ್ತವ್ಯ ಲೋಪವೆಸಗಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು

ಹೊಸಪೇಟೆ: ಅರ್ಜಿ ಸಲ್ಲಿಸಲು ಬರುವ ಸಾರ್ವಜನಿಕರೊಂದಿಗೆ ಗ್ರಾಮ ಒನ್ ಸಿಬ್ಬಂದಿ ಹಾಗೂ ಅಧಿಕಾರಿಗಳು ಮಾನವೀಯತೆಯಿಂದ ವರ್ತಿಸಬೇಕು. ಕರ್ತವ್ಯ ಲೋಪವೆಸಗಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್ ಶೃತಿ ಎಂ. ಮಳ್ಳಪ್ಪಗೌಡ್ರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ತಾಲೂಕಾಡಳಿತದಿಂದ ಶನಿವಾರ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಹೋಬಳಿ ಮಟ್ಟದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿ ಮಾತನಾಡಿದರು.

ತಹಸೀಲ್ದಾರ್ ಶೃತಿ ಎಂ. ಮಳ್ಳಪ್ಪಗೌಡ್ರು, ಹಲವು ಮನವಿಗಳಿಗೆ ತಕ್ಷಣವೇ ಸ್ಪಂದಿಸಿದರು.

ಕಾರ್ಯಕ್ರಮದಲ್ಲಿ ಒಟ್ಟು 270 ಅರ್ಜಿ ಸ್ವೀಕೃತವಾಗಿದ್ದು, ಅದರಲ್ಲಿ ಮನೆ, ನಿವೇಶನಕ್ಕೆ ಸಂಬಂಧಿಸಿದಂತೆ 220, ಪಡಿತರ ಚೀಟಿಗಾಗಿ 10 ಹಾಗೂ ಪಿಂಚಣಿಗೆ ಸಂಬಂಧಿಸಿದಂತೆ 5 ರಿಂದ 6 ಅರ್ಜಿಗಳು ಬಂದಿವೆ ಎಂದು ಮಾಹಿತಿ ನೀಡಿದರು.

ತಕ್ಷಣ ಪಡಿತರ ಚೀಟಿ: ಅಹವಾಲು ಸ್ವೀಕರಿಸಿದ ಸಂದರ್ಭದಲ್ಲಿ ಮಾರುತಿ ಕಾಲನಿಯ ದೃಷ್ಟಿವಿಕಲಚೇತನ ವ್ಯಕ್ತಿಯೊಬ್ಬರ ಮನೆ ಬೆಂಕಿಗಾಹುತಿಯಾಗಿ ಯಾವುದೇ ಗುರುತಿನ ಚೀಟಿ ಇಲ್ಲದೆ ಸಂಕಷ್ಟದಲ್ಲಿದ್ದರು. ಅವರಿಗೆ ಕಣ್ಣಿನ ಶಸ್ತ್ರಚಿಕಿತ್ಸೆಯ ಅಗತ್ಯವಿರುವುದನ್ನು ಮನಗಂಡ ತಹಸೀಲ್ದಾರ್, ವೈದ್ಯಕೀಯ ಕಾರಣಕ್ಕಾಗಿ ತಕ್ಷಣವೇ ಪಡಿತರ ಚೀಟಿ ಒದಗಿಸಲು ಅಧಿಕಾರಿಗಳಿಗೆ ಸ್ಥಳದಲ್ಲೇ ನಿರ್ದೇಶನ ನೀಡಿದರು.

ನಗರಸಭೆಯ ಪೌರಾಯುಕ್ತ ಎರಗುಡಿ ಶಿವಕುಮಾರ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಂಜಿನಿಯರ್ ವಿಜಯ್ ಕುಮಾರ್ ಹಾಗೂ ತಾಲೂಕು ವೈದ್ಯಾಧಿಕಾರಿ ಡಾ.ವಿನೋದ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೋಷಿತರಿಗೆ ನೆಲೆಗಟ್ಟು ಕಲ್ಪಿಸಿದ ಶರಣರ ಕಾಯಕ ತತ್ವ
ಕಲ್ಯಾಣ ಕರ್ನಾಟಕ ಪ್ರತಿಭಾವಂತ ಕಲಾದವಿದರು