ಹಿರಿಯರೊಂದಿಗೆ ಪ್ರೀತಿ, ವಿಶ್ವಾಸದಿಂದ ನಡೆದುಕೊಳ್ಳಿ-ನ್ಯಾಯಾಧೀಶ ಬಿರಾದಾರ

KannadaprabhaNewsNetwork |  
Published : Sep 29, 2026, 02:15 AM IST
ಹಾವೇರಿ ನಗರದ ಚನ್ನಬಸಪ್ಪ ಮಾಗಾವಿ ಪ್ರೌಢ ಶಾಲೆಯಲ್ಲಿ ಆಯೋಜಿಸಲಾದ ಹಿರಿಯ ನಾಗರೀಕರ ಕ್ರೀಡಾಕೂಟ, ಸಾಂಸ್ಕçತಿಕ, ಯೋಗ ಹಾಗೂ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟಿಸಲಾಯಿತು. | Kannada Prabha

ಸಾರಾಂಶ

ಹಿರಿಯರೊಂದಿಗೆ ಪ್ರೀತಿ ಹಾಗೂ ವಿಶ್ವಾಸದಿಂದ ನಡೆದುಕೊಳ್ಳಬೇಕು ಹಾಗೂ ಅವರಿಗೆ ಗೌರವ ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿರಾದಾರ ದೇವಿಂದ್ರಪ್ಪಾ ಎನ್. ಅವರು ಹೇಳಿದರು.

ಹಾವೇರಿ: ಹಿರಿಯರೊಂದಿಗೆ ಪ್ರೀತಿ ಹಾಗೂ ವಿಶ್ವಾಸದಿಂದ ನಡೆದುಕೊಳ್ಳಬೇಕು ಹಾಗೂ ಅವರಿಗೆ ಗೌರವ ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿರಾದಾರ ದೇವಿಂದ್ರಪ್ಪಾ ಎನ್. ಅವರು ಹೇಳಿದರು.

ನಗರದ ಚನ್ನಬಸಪ್ಪ ಮಾಗಾವಿ ಪ್ರೌಢಶಾಲೆಯಲ್ಲಿ ಭಾನುವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಹಿರಿಯ ನಾಗರೀಕರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ನಿವೃತ್ತ ನೌಕರರ ಸಂಘದ ಸಹಯೋಗದಲ್ಲಿ ವಿಶ್ವ ಹಿರಿಯ ನಾಗರೀಕರ ದಿನಾಚರಣೆಯ ಅಂಗವಾಗಿ ಆಯೋಜಿಸಲಾದ ಹಿರಿಯ ನಾಗರೀಕರ ಕ್ರೀಡಾಕೂಟ, ಸಾಂಸ್ಕೃತಿಕ, ಯೋಗ ಹಾಗೂ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ತಂದೆ -ತಾಯಿಗಳ ಪಾಲನೆ ಪೋಷಣೆ ಹಾಗೂ ಹಿರಿಯ ನಾಗರಿಕರ ಸಂರಕ್ಷಣಾ ಕಾಯ್ದೆ-2007 ಮತ್ತು ಹಿರಿಯ ನಾಗರಿಕರ ಪ್ರತ್ಯೇಕ ಕಾನೂನು ಇದ್ದು, ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಶೈಲಜಾ ಎಚ್.ವಿ., ಜಿಲ್ಲಾ ನಿವೃತ್ತ ನೌಕರರ ಸಂಘ ಅಧ್ಯಕ್ಷ ನಿವೃತ್ತ ಕೃಷಿ ಅಧಿಕಾರಿ ಎಸ್. ಬಿ. ಅಣ್ಣಿಗೇರಿ, ಪುಷ್ಪಾ, ಶಿಕ್ಷಕ ಗುರುರಾಜ ಛಲವಾದಿ ಮತ್ತು ಮಮತಾ ನಂದಿಹಳ್ಳಿ ಇತರರು ಉಪಸ್ಥಿತರಿದ್ದರು. ಜಿಲ್ಲಾ ಹಿರಿಯ ನಾಗರಿಕರು ಮತ್ತು ವಿಕಲಚೇತನರ ಕಲ್ಯಾಣಾಧಿಕಾರಿ ಆಶು ನದಾಫ್ ಅವರು ಸ್ವಾಗತಿಸಿದರು.

ವಿವಿಧ ಚಟುವಟಿಕೆ: ಕಾರ್ಯಕ್ರಮದ ನಂತರ ಹಿರಿಯ ನಾಗರಿಕರಿಗೆ ವಿವಿಧ ಕ್ರೀಡೆಗಳಾದ ಗುಂಡು ಎಸೆತ, ಬಕೆಟನಲ್ಲಿ ಬಾಲ್ ಎಸೆಯುವುದು, ಮ್ಯೂಜಿಕಲ್ ಚೈರ್ ಹಾಗೂ ಏಕಪಾತ್ರಭಿನಯ, ಗಾಯನ ಸ್ಪರ್ದೆಗಳು ಜರುಗಿದವು. ಯೋಗ, ಪ್ರಾಣಾಯಾಮ, ಧ್ಯಾನ ಕುರಿತು ತರಬೇತಿ ನೀಡಲಾಯಿತು. ಆರೋಗ್ಯ ಇಲಾಖೆಯಿಂದ ಉಚಿತ ತಪಾಸಣಾ ಶಿಬಿರ ಜರುಗಿತು. ಈ ಎಲ್ಲ ಕಾರ್ಯಕ್ರಮಗಳಲ್ಲಿ ಹಿರಿಯ ನಾಗರಿಕರು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬದಲಾದ ಜೀವನಶೈಲಿ ಅನಾರೋಗ್ಯಕ್ಕೆ ಕಾರಣ: ಡಾ. ಹಿರೇಮಠ
ರಾಷ್ಟ್ರೀಯ ಏಕತೆ ಬೆಸೆಯುವ ಭಾಷೆ ಹಿಂದಿ: ಡಾ. ಹುಸೇನಸಾಬ