ಕನ್ನಡಪ್ರಭ ವಾರ್ತೆ ಕನಕಪುರ
ಬಹುಜನ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ನೀಲಿ ರಮೇಶ್ ಮಾತನಾಡಿ, ಸಮಾಜದಲ್ಲಿ ಎಲ್ಲರೂ ಮಹಿಳೆಯರನ್ನು ಸಮಾನತೆಯಿಂದ ಕಾಣಬೇಕು. ಮಹಿಳೆಯರ ಮೇಲೆ ಶೋಷಣೆ ದೌರ್ಜನ್ಯಗಳು ನಿಲ್ಲಬೇಕು, ಇಂದು ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯ ಪಾತ್ರ ಬಹಳ ಮುಖ್ಯವಾಗಿದ್ದು, ಮಹಿಳೆಯರು ಸಾಮಾಜಿಕ, ಶೈಕ್ಷಣಿಕವಾಗಿ ರಾಜಕೀಯವಾಗಿ ಇನ್ನೂ ಹೆಚ್ಚಿನ ಸಾಧನೆ ಮಾಡಲು ದಿಟ್ಟ ಮನಸ್ಸಿನಿಂದ ಮುಂದೆ ಬರಬೇಕು ಎಂದು ತಿಳಿಸಿದರು.
ಕಾಂಗ್ರೆಸ್ ಮುಖಂಡೆ ಪದ್ಮ ಹಾಗೂ ನಗರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕಿ ರತ್ನಮ್ಮ ಮಾತನಾಡಿ, ಮಹಿಳೆಯರು ಸಮಾಜದ ಎಲ್ಲಾ ಕ್ಷೇತ್ರಗಳಲೂ ಪುರುಷರಿಗೆ ಸಮಾನಾಗಿ ಕೆಲಸ ನಿರ್ವಹಿಸುವುದರ ಜೊತೆಗೆ ಕುಟುಂಬ ನಿರ್ವಹಣೆಯನ್ನು ಸರಿದೂಗಿಸಿಕೊಂಡು ಹೋಗುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.ನಗರಸಭೆಯ ನಾಮ ನಿರ್ದೇಶನ ಸದಸ್ಯ ರಾಘವೇಂದ್ರ, ಬಹುಜನ ಜಾಗೃತಿ ವೇದಿಕೆಯ ಪದಾಧಿಕಾರಿಗಳಾದ ಬರಡನಹಳ್ಳಿಯ ಬಿ ಎಸ್ ಹರೀಶ್, ಕುರುಪೇಟೆಯ ಕೆ ಶಿವಕುಮಾರ್, ಕೋಟೆ ಹನುಮಂತರಾಜು, ಪ್ರತಾಪ್, ಪ್ರೇಮ, ಆಶಾ ಉಪಸ್ಥಿತರಿದ್ದರು.