ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ, ಗುಣಮಟ್ಟದ ಸೇವೆ ನೀಡಿ

KannadaprabhaNewsNetwork |  
Published : Oct 25, 2026, 01:15 AM IST
ಸ | Kannada Prabha

ಸಾರಾಂಶ

ಚಿಕ್ಕಮಗಳೂರುಸರ್ಕಾರಿ ಆಸ್ಪತ್ರೆಗಳಿಗೆ ಬರುವ ಬಡ ರೋಗಿಗಳೊಂದಿಗೆ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಸೌಜನ್ಯದಿಂದ ವರ್ತಿಸಿ, ಕಾಳಜಿಯಿಂದ ಚಿಕಿತ್ಸೆ ನೀಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಯು.ಟಿ. ಖಾದರ್ ಫರೀದ್ ಹೇಳಿದರು.

ಸಚಿವ ಯು.ಟಿ. ಖಾದರ್‌ ಸಲಹೆ । ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಬಡ ರೋಗಿಗಳೊಂದಿಗೆ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಸೌಜನ್ಯದಿಂದ ವರ್ತಿಸಿ, ಕಾಳಜಿಯಿಂದ ಚಿಕಿತ್ಸೆ ನೀಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಯು.ಟಿ. ಖಾದರ್ ಫರೀದ್ ಹೇಳಿದರು.

ನಗರದ ಜಿಪಂನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಶನಿವಾರ ನಡೆದ ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಡವರು ಖಾಸಗಿ ಆಸ್ಪತ್ರೆಗಳಿಗೆ ಹಣ ಸುರಿಯದಂತೆ ಸರ್ಕಾರ ಉಚಿತವಾಗಿ ಗುಣ ಮಟ್ಟದ ಆರೋಗ್ಯ ಸೇವೆ ಒದಗಿಸುತ್ತಿದ್ದು, ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವುದು ಆರೋಗ್ಯ ಸಿಬ್ಬಂದಿ ಕರ್ತವ್ಯ. ಆರೋಗ್ಯ ಇಲಾಖೆ ತಳಮಟ್ಟದ ಸಿಬ್ಬಂದಿಯೇ ಸರ್ಕಾರದ ನೈಜ ಮುಖವಾಣಿ. ಸಾರ್ವಜನಿಕರೊಂದಿಗೆ ಸೌಜನ್ಯದಿಂದ ನಡೆದುಕೊಂಡು ಉತ್ತಮ ಸೇವೆ ನೀಡಿದರೆ ಸರ್ಕಾರ ಮತ್ತು ಜನಪ್ರತಿನಿಧಿಗಳಿಗೆ ಒಳ್ಳೆಯ ಹೆಸರು ಬರುತ್ತದೆ. ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದರೆ ಜನರು ಸರ್ಕಾರವನ್ನು ದೂರುತ್ತಾರೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿ ಅರಿತು ಜನಪರವಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದರು.ಜಿಲ್ಲೆಯ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ನರ್ಸ್‌ಗಳು, ಲ್ಯಾಬ್ ಟೆಕ್ನಿಷಿಯನ್‌ಗಳು, ಫಾರ್ಮ ಸಿಸ್ಟ್‌ಗಳು ಹಾಗೂ ಡಿ ಗ್ರೂಪ್ ನೌಕರರ ಹುದ್ದೆಗಳ ಕುರಿತು ಚರ್ಚಿಸಿದ ಸಚಿವರು, ನರ್ಸ್ ಮತ್ತು ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿ ಹಾಗೂ ಕೌನ್ಸೆಲಿಂಗ್ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ ಆದೇಶ ಹೊರಡಿಸುವಂತೆ ತಿಳಿಸಿದರು.ಜಿಲ್ಲೆಯ 51 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಫಾರ್ಮಸಿಸ್ಟ್‌ಗಳ ಕೊರತೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ರೋಗಿಗಳಿಗೆ ಔಷಧ ವಿತರಣೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಬೇಕು. ಹಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಯನ್ನು ನಿಯಮಾನುಸಾರ ಖಾಯಂಗೊಳಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸ ಲಾಗಿದೆ. ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದರು.ತಾಲೂಕು ವೈದ್ಯಾಧಿಕಾರಿಗಳು ಕಚೇರಿ ಕೆಲಸಕ್ಕೆ ಮಾತ್ರ ಸೀಮಿತವಾಗದೆ ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಿಂಗಳಿಗೆ ಕನಿಷ್ಠ ಎರಡು ಬಾರಿ ಭೇಟಿ ನೀಡಿ ಪರಿಶೀಲಿಸಬೇಕು. ಭೇಟಿ ಪುಸ್ತಕದಲ್ಲಿ ಪ್ರಗತಿ ಕುರಿತು ಕಡ್ಡಾಯವಾಗಿ ದಾಖಲಿ ಸಬೇಕು. ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು, ಪಂಚಾಯಿತಿ ಸದಸ್ಯರು ಹಾಗೂ ದಾನಿಗಳನ್ನು ಒಳಗೊಂಡ ಸಮು ದಾಯ ಸಭೆಗಳನ್ನು ನಡೆಸಿ ಆಸ್ಪತ್ರೆಗಳ ನೈರ್ಮಲ್ಯ ಮತ್ತು ಮೂಲಸೌಕರ್ಯ ಸುಧಾರಿಸಬೇಕು ಎಂದು ನಿರ್ದೇಶನ ನೀಡಿದರು.ಡಿ ಗ್ರೂಪ್ ನೌಕರರ ಕೊರತೆ ನೆಪದಲ್ಲಿ ಆಸ್ಪತ್ರೆ ಅಸ್ವಚ್ಛತೆ ಬೇಡ. ವೈದ್ಯರು ಮತ್ತು ಸಿಬ್ಬಂದಿ ತಂಡವಾಗಿ ಕಾರ್ಯನಿರ್ವಹಿಸಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಈ ವರ್ಷ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ನೈರ್ಮಲ್ಯ ಕಾಪಾಡುವ ಮಾದರಿ ಕ್ಲಿನಿಕ್ ಹಾಗೂ ಆಸ್ಪತ್ರೆಗಳಿಗೆ ಸರ್ಕಾರದಿಂದ ವಿಶೇಷ ಪ್ರಶಸ್ತಿ ಮತ್ತು ಗೌರವ ನೀಡಲಾಗುವುದು ಎಂದು ತಿಳಿಸಿದರು.ಸಭೆಯಲ್ಲಿ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ, ರಾಜ್ಯ ಪರಿಸರ ಮೌಲ್ಯಮಾಪನ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ಎನ್. ಮಹೇಶ್, ಶಾಸಕರಾದ ಎಚ್.ಡಿ. ತಮ್ಮಯ್ಯ, ನಯನಾ ಮೋಟಮ್ಮ, ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಭದ್ರಾ ಕಾಡಾ ಅಧ್ಯಕ್ಷ ಡಾ. ಅಂಶುಮಂತ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ, ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೃಷಿಯಲ್ಲಿ ಗೆದ್ದ ಸಿರಿಗೆರೆಯ ಎಂಟೆಕ್ ಪದವೀಧರ!
ಎನ್‌ಸಿಡಿ ತಪಾಸಣೆಯಲ್ಲಿ ಚಿಕ್ಕಮಗಳೂರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ: ಯು.ಟಿ. ಖಾದರ್ ಅಭಿನಂದನೆ