ಸಾರ್ವಜನಿಕರನ್ನು ಗೌರವದಿಂದ ಕಾಣಿ: ಲೋಕಾಯುಕ್ತ ಎಸ್ಪಿ

KannadaprabhaNewsNetwork |  
Published : Jan 17, 2025, 12:46 AM IST
ಕಾರ್ಯಕ್ರಮದಲ್ಲಿ ಲೋಕಾಯುಕ್ತ ಎಸ್ಪಿ ಕುಮಾರ್ ಚಂದ್ರ ಮಾತನಾಡಿದರು. | Kannada Prabha

ಸಾರಾಂಶ

Treat the public with respect

ಶಿರಸಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಸಮಾರಂಭ

ಕನ್ನಡಪ್ರಭ ವಾರ್ತೆ ಶಿರಸಿ

ಸಾರ್ವಜನಿಕರು ಕಚೇರಿಗಳಿಗೆ ಭೇಟಿ ನೀಡಿದಾಗ ಅವರನ್ನು ಗೌರವಯುತವಾಗಿ ಕಾಣಬೇಕು. ಅಲೆದಾಡಿಸಬಾರದು ಎಂದು ಅಧಿಕಾರಿಗಳಿಗೆ ಲೋಕಾಯುಕ್ತ ಎಸ್ಪಿ ಕುಮಾರ್ ಚಂದ್ರ ಎಚ್ಚರಿಕೆ ನೀಡಿದರು.ನಗರದ ತಹಸೀಲ್ದಾರ್ ಕಾರ್ಯಾಲಯದಲ್ಲಿ ಜಿಲ್ಲಾ ಲೋಕಾಯುಕ್ತದಿಂದ ಸಾರ್ವಜನಿಕರಿಂದ ಮಾಹಿತಿ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಸರ್ಕಾರಿ ಕಚೇರಿಗಳಲ್ಲಿ ಲೋಕಾಯುಕ್ತ ವಿವರದ ಫಲಕಗಳ ಹಾಕಬೇಕಿದ್ದರೂ ಹಲವು ಕಚೇರಿಗಳಲ್ಲಿ ಹಾಕಿದ್ದು ಕಂಡುಬರುತ್ತಿಲ್ಲ. ಕಡ್ಡಾಯವಾಗಿ ಫಲಕ ಹಾಕಬೇಕು ಎಂದು ಸೂಚಿಸಿದರು.

ಮಹಿಳೆಯೊಬ್ಬರು ಹೆಸ್ಕಾಂ ಕುರಿತು ದೂರು ನೀಡಿದಾಗ ಅಧಿಕಾರಿ ಇಲ್ಲದಿರುವುದನ್ನು ಆಕ್ಷೇಪಿಸಿದ ಅವರು ತಕ್ಷಣ ಅವರನ್ನು ದೂರವಾಣಿ ಮೂಲಕ ಸಭೆಗೆ ಕರೆಸಿ ಒಂದು ವಾರದೊಳಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.ದಾಸನಕೊಪ್ಪದ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿ ೩ ವರ್ಷವಾದರೂ ಸರ್ವೆ ಮಾಡಿಕೊಡದಿರುವುದರ ಕುರಿತಂತೆ ಲೋಕಾಯುಕ್ತ ಗಮನಕ್ಕೆ ತಂದರು. ತಕ್ಷಣ ಸರ್ವೇ ಮಾಡುವಂತೆ ಆದೇಶಿಸಲಾಯಿತು. ಜನರೊಂದಿಗೆ ಬೇಜವಾಬ್ದಾರಿಯಿಂದ ವರ್ತಿಸುವ ಹಾಗೂ ಅಕ್ರಮಗಳ ಕುರಿತು ದೂರು ಬಂದರೆ ಯಾವುದೇ ಮಾಹಿತಿ ನೀಡದೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.ಲೋಕಾಯುಕ್ತ ಸಿಪಿಐ ವಿನಾಯಕ ಬಿಲ್ಲವ, ತಹಸೀಲ್ದಾರ್ ಶ್ರೀಧರ್ ಮುಂದಲಮನಿ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!