ತೀರ್ಥಹಳ್ಳಿ: ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮೂಲಕ ತಮ್ಮ ಆರೋಗ್ಯವನ್ನೂ ಲೆಕ್ಕಿಸದೇ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರನ್ನು ಸತ್ಕರಿಸಿ ಗೌರವಿಸುವುದು ಅತ್ಯಂತ ಪುಣ್ಯದ ಕಾರ್ಯವಾಗಿದೆ ಎಂದು ಪಪಂ ಪ್ರಭಾರ ಅಧ್ಯಕ್ಷೆ ಗೀತಾ ರಮೇಶ್ ಹೇಳಿದರು.
ಈ ವರ್ಷದ ಜಾತ್ರೆಗೆ ನಿರೀಕ್ಷೆಗೂ ಮೀರಿದ ಜನರು ಸೇರಿದ್ದರೂ, ಸ್ವಚ್ಛತೆ, ಕುಡಿಯುವ ನೀರಿನ ಸೌಲಭ್ಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳಿಗೆ ಕಿಂಚಿತ್ತು ಕೊರತೆಯಾಗದಂತೆ ಕಾರ್ಯನಿರ್ವಹಣೆ ಮಾಡಿರುವುದು ಪ್ರಶಂಸನೀಯವಾಗಿದೆ. ಜಾತ್ರೆಯ ಯಶಸ್ಸಿನಲ್ಲಿ ಪೌರ ಕಾರ್ಮಿಕರ ಶ್ರಮವೂ ಕಾರಣವಾಗಿದೆ ಎಂದು ಹೇಳಿದರು.ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಗಣಪತಿ ಮಾತನಾಡಿ, ನಾಗರಿಕ ವ್ಯವಸ್ಥೆಗೆ ಮೂಲ ಕಾರಣ ಪೌರ ಕಾರ್ಮಿಕರ ನಿಸ್ವಾರ್ಥವಾದ ಸೇವೆ ಎಂಬುದನ್ನು ಮರೆಯುವಂತಿಲ್ಲಾ. ವರ್ಷ ಪೂರ್ತಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಈ ವರ್ಗದ ನೌಕರರಿಗೆ ಈಚೆಗೆ ಸರ್ಕಾರದಿಂದ ಒಂದಿಷ್ಟು ಸೌಲಭ್ಯಗಳು ದೊರೆಯುತ್ತಿದೆಯಾದರೂ, ಆರೋಗ್ಯ ರಕ್ಷಣೆ ಬಗ್ಗೆ ಹೆಚ್ಚಿನ ಸೌಲಭ್ಯವನ್ನು ಒದಗಿಸುವಲ್ಲಿ ಸರ್ಕಾರ ನಿರ್ಣಯ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.ಪಪಂ ಮುಖ್ಯಾಧಿಕಾರಿ ಡಿ.ರಾಜು, ಸದಸ್ಯರುಗಳಾದ ಸೊಪ್ಪುಗುಡ್ಡೆ ರಾಘವೇಂದ್ರ, ಶಬನಂ, ಸಂದೇಶ್ ಜವಳಿ, ಜ್ಯೋತಿ ಮೋಹನ್, ಜಯಪ್ರಕಾಶ್ ಶೆಟ್ಟಿ, ರವೀಶ್‍ಭಟ್, ರತ್ನಾಕರ ಶೆಟ್ಟಿ, ರಾಘವೇಂದ್ರ ಶೆಟ್ಟಿ, ಜ್ಯೋತಿಗಣೇಶ್, ಮಂಜುಳಾ ನಾಗೇಂದ್ರ, ವಿಲಿಯಂ ಮಾರ್ಟಿಸ್, ಡಾ.ಅನಿಲ್ ಇದ್ದರು.