ಆರಂಭದಲ್ಲೇ ಕ್ಯಾನ್ಸರ್ ಪತ್ತೆಯಾದರೆ ಚಿಕಿತ್ಸೆಯಿಂದ: ಡಾ. ಮರಿಯಂಬಿ

KannadaprabhaNewsNetwork |  
Published : Feb 05, 2025, 12:32 AM IST
ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಬಳ್ಳಾರಿ ಜಿಲ್ಲಾಸ್ಪತ್ರೆ ಆವರಣದಿಂದ ಹಮ್ಮಿಕೊಂಡಿದ್ದ ಜನಜಾಗೃತಿ ಜಾಥಾಗೆ ಡಿಎಚ್‌ಒ ಡಾ.ಯಲ್ಲಾ ರಮೇಶ್ ಬಾಬು ಚಾಲನೆ ನೀಡಿದರು.  | Kannada Prabha

ಸಾರಾಂಶ

ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಬಳ್ಳಾರಿ ಜಿಲ್ಲಾ ಆಸ್ಪತ್ರೆ ಆವರಣದಿಂದ ಜನಜಾಗೃತಿ ಜಾಥಾ ನಡೆಯಿತು.

ಬಳ್ಳಾರಿ: ಸಾರ್ವಜನಿಕರು ಬೀಡಿ ಸೇದುವುದು, ತಂಬಾಕು ಗುಟ್ಕಾ ಜಗಿಯುವುದು, ಮದ್ಯ ಸೇವನೆ ಸೇರಿದಂತೆ ದುಶ್ಚಟಗಳಿಂದ ದೂರವಿರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ‘ವಿಶಿಷ್ಟತೆಯಿಂದ ಏಕತೆ’ ಎಂಬ ಘೋಷವಾಕ್ಯದೊಂದಿಗೆ “ವಿಶ್ವ ಕ್ಯಾನ್ಸರ್ ದಿನಾಚರಣೆ” ಅಂಗವಾಗಿ ಜಿಲ್ಲಾ ಆಸ್ಪತ್ರೆ ಆವರಣದಿಂದ ಹಮ್ಮಿಕೊಂಡಿದ್ದ ಜನಜಾಗೃತಿ ಜಾಥಾಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಕ್ಯಾನ್ಸರ್ ನಲ್ಲಿ ಸುಮಾರು ವಿಧಗಳಿವೆ. ಅವುಗಳಲ್ಲಿ ಚರ್ಮದ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್, ಪ್ರಾಸ್ಟೇಟ್ ಕ್ಯಾನ್ಸರ್, ಕೊಲೊರೆಕ್ಟಲ್ ಕ್ಯಾನ್ಸರ್, ಮೆಲನೋಮ, ಲಿಂಫೋಮ ಕ್ಯಾನ್ಸರ್ ಮತ್ತು ಮೂತ್ರಪಿಂಡದ ಕ್ಯಾನ್ಸರ್‌ಗಳಿವೆ. ಆದರೆ, ಬಾಯಿ, ಗರ್ಭಾಶಯ ಮತ್ತು ಸ್ತನ ಕ್ಯಾನ್ಸರ್ ಹೆಚ್ಚಾಗಿ ಕಂಡು ಬರುತ್ತವೆ ಎಂದು ತಿಳಿಸಿದರು.

ಕ್ಯಾನ್ಸರ್ ಖಾಯಿಲೆಯ ಬಗ್ಗೆ ಜಾಗೃತಿ ಮತ್ತು ಅರಿವು ಹೊಂದಬೇಕು. ಕ್ಯಾನ್ಸರ್ ಚಿಕಿತ್ಸೆಗೆ ಬಿಮ್ಸ್‌ನಲ್ಲಿ ಚಿಕಿತ್ಸಾ ಸೌಲಭ್ಯವಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಜಿಲ್ಲಾ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾರ್ಯಕ್ರಮ ಅಧಿಕಾರಿ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮರಿಯಂಬಿ ವಿ.ಕೆ. ಪ್ರಾಸ್ತಾವಿಕವಾಗಿ ಮಾತನಾಡಿ, ಇಂದು ಅಧುನಿಕ ಜೀವನ ಶೈಲಿ, ತಂಬಾಕು ಬಳಕೆಯಿಂದ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಪ್ರಸುತ್ತ ಆಧುನಿಕ ತಂತ್ರಜ್ಞಾನದಿಂದ ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲಿ ಪತ್ತೆ ಮಾಡಬೇಕು. ಖಚಿತ ಪಟ್ಟಲ್ಲಿ ಸಂಪೂರ್ಣವಾಗಿ ಚಿಕಿತ್ಸೆ ನೀಡಿ ಗುಣಮುಖಗೊಳಿಸಬಹುದು ಎಂದು ಡಾ. ಮರಿಯಂಬಿ ತಿಳಿಸಿದರು.

ಮುಂದಿನ ದಿನಗಳಲ್ಲಿ ಜಿಲ್ಲಾಸ್ಪತ್ರೆಯಲ್ಲಿಯೇ ಕೀಮೋಥೆರಫಿ ಸೌಲಭ್ಯ ಆರಂಭವಾಗಲಿದೆ. ಮಾರ್ಚ್ ತಿಂಗಳಲ್ಲಿ ಗೃಹ ಆರೋಗ್ಯ ಕರ್ನಾಟಕ ಕಾರ್ಯಕ್ರಮದಡಿ ಮನೆ-ಮನೆ ಭೇಟಿ ನೀಡಿ ಸಾಂಕ್ರಮಿಕ ರೋಗಗಳ ತಪಾಸಣೆ ಕೈಗೊಳ್ಳಲಾಗುವುದು. ಸಾರ್ವಜನಿಕರು ಜಾಗರೂಕರಾಗಿ ಕ್ಯಾನ್ಸರ್ ಲಕ್ಷಣಗಳಿನುಸಾರವಾಗಿ ತಪಾಸಣೆಗೆ ಒಳಪಟ್ಟು ಕ್ಯಾನ್ಸರ್ ಮುಕ್ತ ಸಮಾಜ ನಿರ್ಮಿಸಲು ಕೈಜೋಡಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಎನ್. ಬಸರೆಡ್ಡಿ, ಕ್ಯಾನ್ಸರ್ ತಜ್ಞರಾದ ಡಾ. ವಿಘ್ನೇಶ್ ಎಸ್., ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಇಂದ್ರಾಣಿ, ಜಿಲ್ಲಾ ಕುಟುಂಬ ಕಲ್ಯಾಣ ಅನುಷ್ಠಾನಾಧಿಕಾರಿ ಡಾ. ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ. ವೀರೇಂದ್ರ ಕುಮಾರ್, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ. ಆರ್. ಅಬ್ದುಲ್ಲಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ ಸೇರಿದಂತೆ ಜಾಥಾದಲ್ಲಿ ವಿಮ್ಸ್ ನರ್ಸಿಂಗ್ ವಿದ್ಯಾರ್ಥಿಗಳು, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿಯ ಅಧಿಕಾರಿಗಳು ಮತ್ತು ಸಮುದಾಯ ಆರೋಗ್ಯ ಅಧಿಕಾರಿಗಳು ಆಶಾ ಕಾರ್ಯಕರ್ತೆಯರು, ನಗರ ಪ್ರಾಥಮಿಕ ಆರೋಗ್ಯ ಸಿಬ್ಬಂದಿ ಭಾಗವಹಿಸಿದ್ದರು.

ಅರಿವು ಮೂಡಿಸಿದ ಜಾಥಾ

ಜನ ಜಾಗೃತಿ ಜಾಥಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಿಂದ ಆರಂಭಗೊಂಡು ಸಂಗಂ ವೃತ್ತ, ರಾಘವೇಂದ್ರ ಚಿತ್ರ ಮಂದಿರ ವೃತ್ತ, ಮೀನಾಕ್ಷಿ ವೃತ್ತ, ಜಿಲ್ಲಾಧಿಕಾರಿಗಳ ಕಚೇರಿ ಮಾರ್ಗವಾಗಿ ಮರಳಿ ಗಡಿಗಿ ಚೆನ್ನಪ್ಪ ವೃತ್ತ ಮೂಲಕ ಪುನಃ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದ ವರೆಗೆ ಮರಳಿತು. ದಾರಿಯುದ್ದಕ್ಕೂ ಘೋಷಣೆ ಹಾಕುತ್ತ ಕ್ಯಾನ್ಸರ್ ರೋಗದ ಕುರಿತು ಅರಿವು ಮೂಡಿಸಲಾಯಿತು. ಇದೇ ವೇಳೆ ಕ್ಯಾನ್ಸರ್ ಕುರಿತ ಜಾಗೃತಿ ಭಿತ್ತಿಪತ್ರಗಳನ್ನು ಗಣ್ಯರು ಬಿಡುಗಡೆಗೊಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!