ವಿಜಯಪುರ: ಪಟ್ಟಣ ಸಮೀಪದ ದೊಡ್ಡ ಮುದ್ದೇನಹಳ್ಳಿ ಗ್ರಾಮದಲ್ಲಿ ಗುರುವಾರ ಸಂಜೆ ಬೀಸಿದ ಭೀಕರ ಬಿರುಗಾಳಿಗೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ, ಸಾಲಾಗಿ 8 ವಿದ್ಯುತ್ ಕಂಬಗಳು ನೆಲಸಮಗೊಂಡಿವೆ. ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡು ಕತ್ತಲಲ್ಲಿ ಕಾಲ ಕಳೆಯುವಂತಾಗಿದೆ. ವಿದ್ಯುತ್ ಇಲ್ಲದೆ ಮನೆಯಲ್ಲಿ ಫ್ಯಾನ್‌ಗಳಿಲ್ಲದೆ ಉಸಿರುಕಟ್ಟುವ ವಾತಾವರಣ ನಿರ್ಮಾಣವಾಗಿದೆ. ದಿನನಿತ್ಯದ ಎಲೆಕ್ಟ್ರಾನಿಕ್ ಉಪಕರಣಗಳನ್ನು ಚಾರ್ಜ್ ಮಾಡಿಕೊಳ್ಳಲು ಸಾಧ್ಯವಾಗದೆ ಸಂವಹನಕ್ಕೂ ತೊಂದರೆಯಾಗಿದೆ. ಕೃಷಿ ಪಂಪ್‌ಸೆಟ್‌ಗಳು ಸ್ಥಗಿತಗೊಂಡಿವೆ. ೨೪ ಗಂಟೆಗಳಿಂದ ನೀರಿಲ್ಲದೆ ಬೆಳೆಗಳು ಬಾಡುತ್ತಿವೆ. ಬೆಸ್ಕಾಂ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ, ಬಿದ್ದಿರುವ ಕಂಬಗಳನ್ನು ತೆರವುಗೊಳಿಸಿ ಹೊಸ ಕಂಬಗಳನ್ನು ಅಳವಡಿಸಿ ವಿದ್ಯುತ್ ಸರಬರಾಜಿಗೆ ಸುಗಮಗೊಳಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.