ಪಿಲಿಕುಳದಲ್ಲಿ ಗಿಡ ನೆಡುವಿಕೆ ಮತ್ತು ಸ್ವಚ್ಛತಾ ಅಭಿಯಾನ

KannadaprabhaNewsNetwork |  
Published : Sep 30, 2026, 02:45 AM IST
ಪಿಳಿಕುಳದಲ್ಲಿ ಗಿಡ ನೆಡುವಿಕೆ ಮತ್ತು ಸ್ವಚ್ಛತಾ ಅಭಿಯಾನ ನಡೆಯಿತು | Kannada Prabha

ಸಾರಾಂಶ

ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆಯ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ‘ಸ್ವಚ್ಛ ಪಿಲಿಕುಳ - ಹಸಿರು ಪಿಲಿಕುಳ’ ಸಂದೇಶದೊಂದಿಗೆ ಗಿಡ ನೆಡುವಿಕೆ ಮತ್ತು ಸ್ವಚ್ಛತಾ ಅಭಿಯಾನವನ್ನು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪ್ರವೇಶ ದ್ವಾರದ ಬಳಿಯ ಪಾರ್ಕಿಂಗ್‌ ಪ್ರದೇಶದಲ್ಲಿ ಹಮ್ಮಿಕೊಳ್ಳಲಾಯಿತು.

ಕನ್ನಡಪ್ರಭ : ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆಯ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ‘ಸ್ವಚ್ಛ ಪಿಲಿಕುಳ - ಹಸಿರು ಪಿಲಿಕುಳ’ ಸಂದೇಶದೊಂದಿಗೆ ಗಿಡ ನೆಡುವಿಕೆ ಮತ್ತು ಸ್ವಚ್ಛತಾ ಅಭಿಯಾನವನ್ನು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪ್ರವೇಶ ದ್ವಾರದ ಬಳಿಯ ಪಾರ್ಕಿಂಗ್‌ ಪ್ರದೇಶದಲ್ಲಿ ಹಮ್ಮಿಕೊಳ್ಳಲಾಯಿತು.

ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‍ಮೆಂಟ್‍ನ ಸಿಎಸ್‍ಆರ್ ಕ್ಲಬ್ ಹಾಗೂ ಎನ್.ಎಸ್.ಎಸ್. ಯೋಜನೆಯಡಿ ಎಂಜಿನಿಯರಿಂಗ್ ಮತ್ತು ಎಂ.ಬಿ.ಎ. ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪ್ರವೇಶ ಆವರಣದಲ್ಲಿ ವಿವಿಧ ಪಶ್ಚಿಮ ಘಟ್ಟದ ಸಸ್ಯ ಪ್ರಭೇದಗಳ ಸಸಿಗಳನ್ನು ನೆಟ್ಟು, ಅವುಗಳ ಸಂರಕ್ಷಣೆ ಹಾಗೂ ಪರಿಸರ ಸಮತೋಲನದಲ್ಲಿ ಸಸ್ಯಗಳ ಮಹತ್ವದ ಕುರಿತು ಅರಿವು ಮೂಡಿಸಿದರು.

ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ವೈಜ್ಞಾನಿಕ ಅಧಿಕಾರಿ ರಾಮಕೃಷ್ಣ ಮರಾಟಿ, ಪಿಲಿಕುಳದ ಹಿನ್ನೆಲೆ ಹಾಗೂ ಜೀವವೈವಿಧ್ಯ ಸಂರಕ್ಷಣೆ ಮತ್ತು ಪರಿಸರ ಶಿಕ್ಷಣದಲ್ಲಿ ಪಿಲಿಕುಳದ ಮಹತ್ವ ವಿವರಿಸಿದರು. ಪರಿಸರ ಸಂರಕ್ಷಣೆಯ ಕಾರ್ಯದಲ್ಲಿ ಕೈಜೋಡಿಸಿದ ಸಹ್ಯಾದ್ರಿ ಕಾಲೇಜಿನ ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವಿದ್ಯಾರ್ಥಿಗಳು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪ್ರವೇಶ ಆವರಣ ಹಾಗೂ ಸಂಸ್ಕೃತಿ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಂಡರು. ಆ ಮೂಲಕ ಪಿಲಿಕುಳದ ಪರಿಸರವನ್ನು ಸ್ವಚ್ಛವಾಗಿ, ಹಸಿರಾಗಿ ಹಾಗೂ ಸುಂದರವಾಗಿ ಕಾಪಾಡುವ ಕುರಿತು ಜಾಗೃತಿ ಮೂಡಿಸಲಾಯಿತು.

ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‍ಮೆಂಟ್‍ನ ಮೂಲಭೂತ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಪ್ರಶಾಂತ್ ರಾವ್, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ರಶ್ಮಿತಾ, ಆಡಳಿತಾಧಿಕಾರಿ ನಿಖಿಲ್, ಸಹಾಯಕ ಪ್ರಾಧ್ಯಾಪಕ ಅವಿನ್ ಎರಿಕ್ ಕುಟಿನ್ಹೊ, ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಡಾ.ನಿತಿನ್, ಉದಯಕುಮಾರ್ ಶೆಟ್ಟಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೆಎಲ್‌ಇ ಫಿಸಿಯೋಥೆರಪಿ ವಿಭಾಗಕ್ಕೆ ಪ್ರಶಸ್ತಿ ಗೌರವ
ಸರ್ಕಾರ ಮಾಡಲಾಗದ ಸಾಧನೆ ಎಕ್ಸೆಲ್ ವಿದ್ಯಾ ಸಂಸ್ಥೆ ಮಾಡಿವೆ: ಭೋಜೆ ಗೌಡ