ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯಿಂದ ದಶಲಕ್ಷ ಗಿಡ ನೆಡುವ ಅಭಿಯಾನ
ದಶಲಕ್ಷ ಗಿಡ ನೆಡುವ ಅಭಿಯಾನದ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ 77 ಹಳ್ಳಿಗಳಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.
ಜಿಲ್ಲಾ ಸಂಚಾಲಕ ಮಹಾಬಲೇಶ್ವರ ನಾಯ್ಕ ಬೇಡ್ಕಣಿ ಪ್ರಕಟಣೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ. ಅರಣ್ಯವಾಸಿಗಳಿಂದ ಗಿಡ ನೆಡುವುದು ಪರಿಸರ ಜಾಗೃತಿಯ ಸಂಕೇತ. ಅರಣ್ಯವಾಸಿಗಳು ಅರಣ್ಯಭೂಮಿ ಸಾಗುವಳಿ ಜತೆಯಲ್ಲಿ ಪರಿಸರ ಉಳಿಸಿ, ಬೆಳೆಸುವ ಉದ್ದೇಶದಿಂದ ಈ ಅಭಿಯಾನ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.ದಶಲಕ್ಷ ಗಿಡ ನೆಡುವ ಅಭಿಯಾನ ಮುಂದಿನ ೨೧ ದಿನಗಳ ವರೆಗೆ ಜಿಲ್ಲಾದ್ಯಂತ ಗ್ರಾಮೀಣ ಭಾಗದಲ್ಲಿ ನಡೆಯಲಿದೆ. ಸಹಸ್ರಾರು ಅರಣ್ಯವಾಸಿಗಳು ಮನೆ ಮನೆಯಲ್ಲಿ ಗಿಡ ನೆಡುವ ಕಾರ್ಯ ನಡೆಸಲಿದ್ದಾರೆ. ಅರಣ್ಯವಾಸಿಗಳು ಭೂಮಿ ಹಕ್ಕಿನ ಹೋರಾಟಕ್ಕೆ ನೀಡುವ ಪ್ರಾಮುಖ್ಯತೆಯಷ್ಟೇ, ಪರಿಸರ ಉಳಿಸಿ ಬೆಳೆಸುವುದಕ್ಕೂ ಆದ್ಯತೆ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
21ಎಸ್ಡಿಪಿ4-