- ಒಂದು ಲಕ್ಷ ಸಸಿಗಳ ನೆಡುವ ಕಾರ್ಯಕ್ರಮ ಉದ್ಘಾಟನೆ- - - ಚನ್ನಗಿರಿ: ಮರ-ಗಿಡಗಳು ಸಮೃದ್ಧಿಯಾಗಿದ್ದರೆ ಕಾಲಮಾನಕ್ಕೆ ತಕ್ಕಂತೆ ಮಳೆ-ಬೆಳೆಯಾಗಿ ಪ್ರಕೃತಿಯಲ್ಲಿ ಸಮತೋಲನ ಇರುವುದು ಎಂದು ಸ್ಥಳೀಯ ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ವಿಶ್ವನಾಥ ವಿ. ಮೂಗತಿ ಹೇಳಿದರು.
ಪಟ್ಟಣದ ನ್ಯಾಯಾಲಯ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕು ಅರಣ್ಯ ಇಲಾಖೆ, ಪುರಸಭೆ, ತಾಲೂಕು ಪಂಚಾಯಿತಿ, ತಾಲೂಕು ಆಡಳಿತ ಆಶ್ರಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲೂಕಿನಲ್ಲಿ ಒಂದು ಲಕ್ಷ ಸಸಿ ನೆಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಉತ್ತಮವಾದ ಮಳೆ ಬರಬೇಕಾದರೆ ಮರ-ಗಿಡಗಳು ಹೆಚ್ಚಿನ ಪ್ರಮಾಣದಲ್ಲಿ ಬೆಳೆಸಿ, ವೃಕ್ಷಗಳಾಗುವಂತೆ ಅವುಗಳನ್ನು ಸಂರಕ್ಷಣೆ ಮಾಡಬೇಕು. ಇಲ್ಲವಾದರೆ ಪ್ರಕೃತಿ ಪರಿಸರದಲ್ಲಿ ಏರು-ಪೇರುಗಳಾಗುವ ಸಾಧ್ಯತೆಗಳಿವೆ. ಪ್ರತಿಯೊಬ್ಬ ಪ್ರಜೆಯೂ ಒಂದೊಂದು ಮರ-ಗಿಡಗಳನ್ನು ಬೆಳೆಸಬೇಕು ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಎಂ.ರಾಜಪ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಿದ್ದಲಿಂಗಯ್ಯ ಗಂಗಾಧರ ಮಠ್, ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶಮಶ್ರೀವತ್ಸ, ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಮಹಾಲಕ್ಷ್ಮೀ, ತಾಪಂ ಕಾರ್ಯನಿರ್ವಾಹಕಾಧಿಕಾರಿ ಬಿ.ಕೆ.ಉತ್ತಮ, ಬಿಇಒ ಜಯಪ್ಪ, ತಹಸೀಲ್ದಾರ್ ಎರ್ರಿಸ್ವಾಮಿ, ಮುಖ್ಯಾಧಿಕಾರಿ ವಾಸೀಂ, ವಲಯ ಅರಣ್ಯಾಧಿಕಾರಿ ಮಧುಸೂಧನ್, ಅಭಿಯಂತರ ಹಾಲೇಶ್, ವಕೀಲರ ಸಂಘದ ಉಪಾಧ್ಯಕ್ಷ ಬಾಬುಜಾನ್, ಕಾರ್ಯದರ್ಶಿ ಎಂ.ಎಸ್.ಜಗದೀಶ್, ಖಜಾಂಚಿ ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.- - - -5ಕೆಸಿಎನ್‌ಜಿ2:
ಚನ್ನಗಿರಿ ನ್ಯಾಯಾಲಯ ಆವರಣದಲ್ಲಿ ವಿಶ್ವ ಪರಿಸರ ದಿನ ಅಂಗವಾಗಿ ತಾಲೂಕಿನಲ್ಲಿ ಒಂದು ಲಕ್ಷ ಸಸಿ ನೆಡುವ ಕಾರ್ಯಕ್ರಮವನ್ನು ನ್ಯಾಯಾಧೀಶ ವಿಶ್ವನಾಥ ವಿ. ಮೂಗತಿ ಉದ್ಘಾಟಿಸಿದರು.