ದೆಹಲಿ ಬುಡಕಟ್ಟು ಸಾಂಸ್ಕೃತಿಕ ಸಮಾವೇಶಕ್ಕೆ ಕೊಡಗಿನ ಗಿರಿಜನರು

KannadaprabhaNewsNetwork |  
Published : May 22, 2026, 02:45 AM IST
ಚಿತ್ರ :  22ಎಂಡಿಕೆ4 : ದೆಹಲಿ ಬುಡಕಟ್ಟು ಸಾಂಸ್ಕೃತಿಕ ಸಮಾವೇಶಕ್ಕೆ ತೆರಳಲಿರುವ  ಕೊಡಗಿನ ಗಿರಿಜನರು. | Kannada Prabha

ಸಾರಾಂಶ

ಮೇ 24ರಂದು ನವದೆಹಲಿಯಲ್ಲಿ ನಡೆಯಲಿರುವ ಅಖಿಲ ಭಾರತ ಬುಡಕಟ್ಟು ಜನಾಂಗದ ಬೃಹತ್ ಸಮಾವೇಶದಲ್ಲಿ ಭಾಗವಹಿಸಲು ಕೊಡಗಿನಿಂದ 110 ಗಿರಿಜನ ಪ್ರತಿನಿಧಿಗಳ ಹೊರಟಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಮೇ 24ರಂದು ನವದೆಹಲಿಯಲ್ಲಿ ನಡೆಯಲಿರುವ ಅಖಿಲ ಭಾರತ ಬುಡಕಟ್ಟು ಜನಾಂಗದ ಬೃಹತ್ ಸಮಾವೇಶದಲ್ಲಿ ಭಾಗವಹಿಸಲು ಕೊಡಗಿನಿಂದ 110 ಗಿರಿಜನ ಪ್ರತಿನಿಧಿಗಳ ಹೊರಟಿದ್ದಾರೆ. ಈ ನಿಟ್ಟಿನಲ್ಲಿ ಗೊಣಿಕೊಪ್ಪ ದುರ್ಗಾ ಭೋಜಿ ಹಾಲ್ ನಲ್ಲಿ ಗಿರಿಜನ ಸುರಕ್ಷಾ ವೇದಿಕೆ ಕೊಡಗು ಜಿಲ್ಲಾ ಘಟಕದ ಸಂಚಾಲಕ ಪಣಿಯರವರ ಭಾಗ್ಯ ಮೋಹನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಭಾಗ್ಯ ಮೋಹನ್, ಮಹಾನ್ ಜನನಾಯಕ ಬಿರ್ಸಾ ಮುಂಡಾರವರ 150ನೇ ಜನ್ಮ ಜಯಂತಿ ಅಂಗವಾಗಿ ದೆಹಲಿಯಲ್ಲಿ ಆಯೋಜಿಸಲಾಗುತ್ತಿರುವ ಈ ಮಹಾ ಸಂಗಮದಲ್ಲಿ ದೇಶದ ಐದು ನೂರಕ್ಕೂ ಹೆಚ್ಚು ಗಿರಿಜನ ಸಮುಧಾಯಗಳಿಂದ ಮೂರು ಲಕ್ಷಕ್ಕೂ ಅಧಿಕ ಗಿರಿಜನ ಪ್ರತಿನಿಧಿಗಳು ಭಾಗವಹಿಸುತ್ತಿದ್ದು, ಕೊಡಗು ಜಿಲ್ಲೆಯ 6 ಗಿರಿಜನ ಜನಾಂಗದ 110 ಪ್ರತಿನಿಧಿಗಳು ಸೇರಿದಂತೆ ರಾಜ್ಯದ 1250 ಪ್ರತಿನಿಧಿಗಳು ವಿಶೇಷ ರೈಲಿನ ಮೂಲಕ ದೆಹಲಿಗೆ ತೆರಳುತ್ತಿದ್ದಾರೆಂದು ತಿಳಿಸಿದರು.

ಗಿರಿಜನ ಸಮುದಾಯಗಳ ಸಾಂಸ್ಕೃತಿಕ ಅಸ್ತಿತ್ವ, ಧಾರ್ಮಿಕ ಪರಂಪರೆ, ಹಾಗೂ ಸಾಮಾಜಿಕ ಮಾಲ್ಯಗಳನ್ನು ರಾಷ್ಟ್ರೀಯ ವೇದಿಕೆಯಲ್ಲಿ ಪರಿಚಯಿಸುವ ಅಪರೂಪದ ಅವಕಾಶ ಇದಾಗಲಿದೆ , ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ದೆಹಲಿಯ ಐದು ವಿಭಿನ್ನ ಪ್ರದೇಶಗಳಿಂದ ಭವ್ಯ ಸಾಂಸ್ಕೃತಿಕ ಶೋಭಾಯಾತ್ರೆ ನಡೆಯಲಿದ್ದು ಗಿರಿಜನ ಬುಡಕಟ್ಟು ಸಮುದಾಯಗಳ ವೈವಿಧ್ಯಮಯ ವೇಷಭೂಷಣ, ಕಲಾ ಪರಂಪರೆ, ಜನಪದ ಸಂಸ್ಕೃತಿ ಹಾಗೂ ಜೀವನ ಶೈಲಿಯನ್ನು ದೇಶದ ಮುಂದೆ ತೆರೆದಿಡಲಿದೆ ಬಳಿಕ ಕೆಂಪು ಕೋಟೆ ಮೈದಾನದಲ್ಲಿ ಶೋಭಾಯಾತ್ರೆ ಒಂದಾಗಲಿದೆ ಎಂದು ವಿವರಿಸಿದರು.

ನಂತರ ಬೃಹತ್ ಸಾರ್ವಜನಿಕ ಸಭೆ ನಡೆಯಲಿದೆ. ಕೇಂದ್ರ ಸಚಿವ ಅಮಿತ್ ಶಾ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಆಗಮಿಸಿದ ಗಿರಿಜನ ಮುಖಂಡರು, ಚಿಂತಕರು ಸ್ವಾಮಿಜಿಗಳು ಕಲಾವಿದರು ಹಾಗೂ ಸಮಾಜದ ಪ್ರತಿನಿಧಿಗಳು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಗಿರಿಜನ ಮುಖಂಡರಾದ ಸಿದ್ದಪ್ಪನವರು ಮಾತನಾಡಿ ಸ್ವಾತಂತ್ರ್ಯ ನಂತರ ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಇಷ್ಟೊಂದು ಬೃಹತ್ ಪ್ರಮಾಣದಲ್ಲಿ ಒಂದೆಡೆ ಗಿರಿಜನ ಪ್ರತಿನಿಧಿಗಳು ಸಮಾಗಮವಾಗುತ್ತಿರುವುದು ವಿಷೇಶವಾಗಿದ್ದು, ದೇಶದಲ್ಲಿ ಅಂದಾಜು 700ಕ್ಕೂ ಹೆಚ್ಚು ಬುಡಕಟ್ಟು ಜನಾಂಗದವರಿದ್ದು ಇವರಲ್ಲಿ ಹಲವರು ಇನ್ನೂ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಈ ನಿಟ್ಟಿನಲ್ಲಿ ಈ ಸಂಸ್ಕೃತಿ, ಪರಂಪರೆ ಹಾಗೂ ಹಕ್ಕುಗಳ ರಕ್ಷಣೆಗಾಗಿ ಸಂಘಟಿತ ಸಮಾವೇಶದ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯುವ ಪ್ರಯತ್ನವಾಗಿದೆ ಎಂದರು.

ಪ್ರಾಂತ ವನವಾಸಿ ಕಲ್ಯಾಣ ಅಧ್ಯಕ್ಷರಾದ ಚಕ್ಕೇರ ಮನು ಕಾವೇರಪ್ಪ ಅವರು ದೇಹಲಿಯ ಸಮಾವೇಶದಲ್ಲಿ ಭಾಗವಹಿಸುವ ಎಲ್ಲಾ ಪ್ರತಿನಿಧಿಗಳಿಗೂ ಶುಭ ಹಾರೈಸಿದರು. ಜೇನುಕುರುಬ ಸಮುದಾಯದ ಪ್ರತಿನಿಧಿಗಳಾದ ಆರ್. ಕೆ ಚಂದ್ರ ,ದೇವರಕಾಡು ನಿತ್ಯ, ಸೋಲಿಗರ ಉಮೇಶ್, ಅಂಚೆತಿಟ್ಟು ಸಂಜೀವ, ಮರಾಠಿ ಸಮುದಾಯದ ಪರಮೇಶ್ವರ್, ವಾಲ್ಮೀಕಿ ಸಮುದಾಯದ ಮುತ್ತುರಾಜ್, ಪ್ರಮುಖರಾದ ಅಮ್ಮುಣಿ, ಚೋಮು, ಶಶಿಕಲಾ, ಜಯಲಕ್ಷ್ಮಿ, ಭೋಜ ,ರಿಧೀಶ್ ,ಮುಂತಾದವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದಿನಿಂದ ಮಾವು, ಹಲಸು ಮೇಳ
ಉದ್ಯೋಗ ಆಧರಿತ ಶಿಕ್ಷಣ ಕಾರ್ಯಾಗಾರ