ಕನ್ನಡಪ್ರಭ ವಾರ್ತೆ ಚಾಮರಾಜನಗರ
ವಿ.ಶ್ರೀನಿವಾಸಪ್ರಸಾದ್ ಅಭಿಮಾನಿ ಬಳಗದ ವತಿಯಿಂದ ಮೇ ೨೦ರಂದು ಸಂಸದರಾಗಿದ್ದ ವಿ.ಶ್ರೀನಿವಾಸ ಪ್ರಸಾದ್ ಅವರಿಗೆ ನುಡಿನಮನ "ನಿಮಗಿದೋ ಶ್ರದ್ಧಾಂಜಲಿ " ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಭಿಮಾನಿ ಬಳಗದ ಅಯ್ಯನಪುರ ಶಿವಕುಮಾರ್ ಹೇಳಿದರು.ನಗರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮೇ ೨೦ ರಂದು ಬೆಳಗ್ಗೆ ೧೧ ಗಂಟೆಗೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯುವ ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ವಹಿಸಲಿದ್ದಾರೆ. ಮೈಸೂರಿನ ಉರಿಲಿಂಗಿಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಮೈಸೂರು ವಿಶ್ವಮೈತ್ರಿ ಬುದ್ದವಿಹಾರದ ಡಾ.ಕಲ್ಯಾಣಸಿರಿ ಭಂತೇಜಿ ಉಪಸ್ಥಿತರಿರುವರು. ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ವಿ.ಶ್ರೀನಿವಾಸಪ್ರಸಾದ್ ಅವರ ಧರ್ಮಪತ್ನಿ ಭಾಗ್ಯಲಕ್ಷ್ಮಿ ಉಪಸ್ಥಿತರಿರಲಿದ್ದಾರೆ. ಮೈಸೂರು ವಿವಿಯ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಸಿ.ನಾಗಣ್ಣ ನುಡಿ ನಮನ ಸಲ್ಲಿಸುವರು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಗಣೇಶ್ ಪ್ರಸಾದ್, ಎ.ಆರ್. ಮಂಜುನಾಥ್, ದರ್ಶನ್ ಧ್ರುವನಾರಾಯಣ್, ಅನಿಲ್ ಚಿಕ್ಕಮಾದು, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಮಾಜಿ ಶಾಸಕರಾದ ಎಸ್. ಜಯಣ್ಣ, ಯತೀಂದ್ರ ಸಿದ್ದರಾಮಯ್ಯ, ಆರ್.ನರೇಂದ್ರ, ಜಿ.ಎನ್. ನಂಜುಂಡಸ್ವಾಮಿ, ಬಿ.ಹರ್ಷವರ್ಧನ್, ಎಸ್.ಬಾಲರಾಜ್, ಎಸ್. ನಿರಂಜನಕುಮಾರ್, ವಿಧಾನಪರಿಷತ್ ಸದಸ್ಯ ಡಾ.ತಿಮ್ಮಯ್ಯ, ಮುಖಂಡರಾದ ಸುನೀಲ್‌ಬೋಸ್, ಬಿಎಸ್‌ಪಿ ಅಧ್ಯಕ್ಷ ನಾಗಯ್ಯ ಇತರ ಮುಖಂಡರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದರು.ಈ ಕಾರ್ಯಕ್ರಮಕ್ಕೆ ಶ್ರೀನಿವಾಸ್ ಪ್ರಸಾದ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿಕೊಡಬೇಕು ಎಂದು ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಬಿ.ಕೆ. ರವಿಕುಮಾರ್, ಆರ್. ಮಹದೇವ್, ಹೊಂಗನೂರು ಚಂದ್ರು, ನಲ್ಲೂರು ಸೋಮೇಶ್, ಮಹಮ್ಮದ್ ಅಸ್ಗರ್ ಮುನ್ನಾ, ಪುಟ್ಟಸ್ವಾಮಿ, ಬಸಪ್ಪನಪಾಳ್ಯ ನಟರಾಜು ಇದ್ದರು.