ಚಾಮರಾಜನಗರ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷ ನಿರಂಜನ್‌ಕುಮಾರ್‌ ಗೆ ಸನ್ಮಾನ

KannadaprabhaNewsNetwork |  
Published : Jan 17, 2024, 01:47 AM IST
ಬಿಜೆಪಿ ನೂತನ ಅಧ್ಯಕ್ಷ  ನಿರಂಜನ್‌ಕುಮಾರ್‌ ಗೆ ಸನ್ಮಾನ  | Kannada Prabha

ಸಾರಾಂಶ

ಚಾಮರಾಜನಗರ ಜಿಲ್ಲೆಯ ಬಿಜೆಪಿ ಪಕ್ಷದ ನೂತನ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಸಿ.ಎಸ್. ನಿರಂಜನ್ ಕುಮಾರ್ ರವರನ್ನು ಬಿಜೆಪಿ ಒಬಿಸಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಜನಧ್ವನಿ ಬಿ ವೆಂಕಟೇಶ್ ಸನ್ಮಾನಿಸಿ ಶುಭ ಕೋರಿದರು.

ಕನ್ನಡಪ್ರಭ ವಾರ್ತೆ ಹನೂರು

ಚಾಮರಾಜನಗರ ಜಿಲ್ಲೆಯ ಬಿಜೆಪಿ ಪಕ್ಷದ ನೂತನ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಸಿ.ಎಸ್. ನಿರಂಜನ್ ಕುಮಾರ್ ರವರನ್ನು ಬಿಜೆಪಿ ಒಬಿಸಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಜನಧ್ವನಿ ಬಿ ವೆಂಕಟೇಶ್ ಸನ್ಮಾನಿಸಿ ಶುಭ ಕೋರಿದರು.

ಜನಧ್ವನಿ ಬಿ ವೆಂಕಟೇಶ್ ಮಾತನಾಡಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಧಾನ ಮಂತ್ರಿಯಾಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ, ಈಗಾಗಲೇ ದೇಶಾದ್ಯಂತ ನರೇಂದ್ರ ಮೋದಿ ರವರ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಮತ್ತೊಮ್ಮೆ ಅವರನ್ನು ಆಯ್ಕೆ ಮಾಡಲು ಜನ ಕಾತುರದಿಂದ ಕಾಯುತ್ತಿದ್ದಾರೆ. ನೂತನ ಅಧ್ಯಕ್ಷ ನಿರಂಜನ್ ಕುಮಾರ್ ರವರು ಗುಂಡ್ಲುಪೇಟೆ ಶಾಸಕರಾಗಿ 5 ವರ್ಷ ಆಡಳಿತ ನಡೆಸಿರುವ ಅನುಭವವಿದೆ, ಇವರನ್ನು ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ಮಾಡಿರುವುದರಿಂದ ಈ ಬಾರಿಯೂ ಚಾಮರಾಜನಗರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಜಯಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಇವರು ಜಿಲ್ಲೆಯ ನಾಯಕರುಗಳು, ಮುಖಂಡರುಗಳ ಜೊತೆ ನಿಕಟ ಸಂಪರ್ಕ ಹೊಂದಿದ್ದು ಇವರ ಅಧ್ಯಕ್ಷತೆಯಲ್ಲಿ ಮುಂಬರುವ ಲೋಕಸಭೆ ಜಿಪಂ, ತಾಪಂ, ವಿಧಾನ ಪರಿಷತ್ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ ಎಂದರು. ಈ ವೇಳೆ ಮಾಜಿ ಶಾಸಕ ಎಸ್ ಬಾಲರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಗಲ ಶಿವಕುಮಾರ್, ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ನಟರಾಜ್ ಗೌಡ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತಿವೇಗ ಎಂದರೆ ನಿರ್ಲಕ್ಷ್ಯದ ಚಾಲನೆ ಅಲ್ಲ: ಹೈಕೋರ್ಟ್‌
‘ಜಾಹೀರಾತಲ್ಲಿ ಗಾಂಧೀಜಿ ಬಳಕೆ ಗಾಂಧೀಜಿಯರ ಮೌಲ್ಯಗಳ ಹತ್ಯೆ’