ಕನ್ನಡಪ್ರಭ ವಾರ್ತೆ ಉಡುಪಿ
ಸಮಿತಿ ಸಂಚಾಲಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ, ಮೌನ ಪ್ರಾರ್ಥನೆ ಸಲ್ಲಿಸಿದ ಬಳಿಕ ಅರಣ್ಯ ಅಧಿಕಾರಿಗಳು, ನಾಗರಿಕ ಸಮಿತಿಯ ಕಾರ್ಯಕರ್ತರು, ಪ್ರಾಣಿಪ್ರಿಯರು, ಸಾರ್ವಜನಿಕರು ಅರ್ಜನನ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭ ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ, ಉಪವಲಯ ಅರಣ್ಯಾಧಿಕಾರಿಗಳಾದ ಗುರುರಾಜ್, ಜೀವನದಾಸ್, ಗಸ್ತು ಅರಣ್ಯ ಪಾಲಕರಾದ ಕೇಶವ ಪೂಜಾರಿ, ಚರಣ್ ರಾಜ್, ಮಂಜುನಾಥ್, ಅಭಿಲಾಶ್, ಅರಣ್ಯ ಸಿಬ್ಬಂದಿ ಜೋಯ್ ಹಾಗೂ ಜೋಸ್ ಆಲೂಕಾಸ್ ಆಭರಣ ಮಳಿಗೆಯ ವ್ಯವಸ್ಥಾಪಕ ರಾಜೇಶ್ ಎನ್.ಆರ್., ಪ್ರಾಣಿ ದಯಾ ಸಂಘದ ಮಂಜುಳಾ, ಸಾಮಾಜಿಕ ಕಾರ್ಯಕರ್ತ ತಾರಾನಾಥ ಮೇಸ್ತ ಶಿರೂರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.