ಕನ್ನಡಪ್ರಭ ವಾರ್ತೆ ತುಮಕೂರು
ಕಾರದ ವೀರಬಸವ ಸ್ವಾಮೀಜಿಗಳ ಸಮ್ಮುಖದಲ್ಲಿ, ವಿವಿಧ ಪೂಜಾ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಕಾರದ ಶೀವಯೋಗಿಗಳು ಲಿಂಗೈಕ್ಯರಾಗಿ 116 ವರ್ಷಗಳು ಕಳೆದಿದ್ದು, ಮಠದ ಆವರಣದಲ್ಲಿ ನಿರ್ಮಾಣ ಮಾಡಿರುವ ಅವರ ಗದ್ದುಗೆಯ ಲೋಕಾರ್ಪಣೆ ಕಾರ್ಯಕ್ರಮದ ಪ್ರಯುಕ್ತ ಮೂರು ದಿನಗಳ ಕಾಲ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಬೆಳಗ್ಗೆಯಿಂದಲೇ ಕಳಸಾರಾಧನೆ, ನೂತನ ವಿಮಾನಗೋಪುರದ ಕಳಸಕ್ಕೆ ಹಾಗೂ 108 ಶಿವಲಿಂಗಗಳಿಗೆ ಸಂಸ್ಕಾರಾದಿ ಕಾರ್ಯಗಳು, ಕರ್ತೃ ಗದ್ದುಗೆಗೆ ಧನಾದಿವಾಸ, ಪುಷ್ಪಾದಿವಾಸ, ಕರ್ತೃಗದ್ದುಗೆಗೆ ಮಹಾನ್ಯಾಸ ಪೂರ್ವಕ ರುದ್ರಾಭಿಷೇಕ, ಕ್ಷೀರಾಭಿಷೇಕ, ಮಹಾಭಿಷೇಕ ಮಹಾ ಮಂಗಳಾರತಿ ನೆರವೇರಿದವು.ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಬೆಟ್ಟದಹಳ್ಳಿ ಗವಿಮಠದ ಚಂದ್ರಶೇಖರ ಸ್ವಾಮೀಜಿ, ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಕುಂಚಿಟಿಗರ ಸಂಸ್ಥಾನದ ಡಾ.ಹನುಮಂತನಾಥ ಸ್ವಾಮೀಜಿ, ರೇವಣ ಸಿದ್ದೇಶ್ವರ ಮಠದ ಬಿಂದುಶೇಖರ ಸ್ವಾಮೀಜಿ ಸೇರಿ ವಿವಿಧ ಮಠಗಳ ಸ್ವಾಮೀಜಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರದ ಶಿವಯೋಗಿಗಳ ಸೇವಾ ಸಮಿತಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ಉಪಾಧ್ಯಕ್ಷ ಷಣ್ಮುಖಪ್ಪ, ಕಾರ್ಯದರ್ಶಿ ಎಂ.ಎಸ್.ಉಮೇಶ್, ಖಜಾಂಚಿ ಟಿ.ಡಿ.ರಮೇಶ್, ನಿರ್ದೇಶಕರಾದ ಟಿ.ಆರ್.ಸದಾಶಿವಯ್ಯ, ಟಿ.ಎಸ್.ಗಟ್ಟಿ, ಟಿ.ಸಿ.ಕಿಶೋರ್, ಮೃತ್ಯುಂಜಯಪ್ಪ, ನಂಜುಂಡಸ್ವಾಮಿ, ಶಿವಶಂಕರ್, ಸಿ.ಎ.ಬಸವರಾಜು, ಚನ್ನಬಸವಣ್ಣ, ಮುಖಂಡರಾದ ದಿಲೀಪ್‌ಕುಮಾರ್, ಚಂದ್ರಶೇಖರಬಾಬು, ಬಿ.ಬಿ.ಮಹದೇವಯ್ಯ,ಗೂಳೂರು ಶಿವಕುಮಾರ್, ರಘು ಹೆಬ್ಬಾಕ,ಅಂಬರೀಶ್, ನವೀನ್‌ಕುಮಾರ್, ಹರೀಶ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.