ಪತ್ರಿಕೋದ್ಯಮ ಹಾಗೂ ನಿಸ್ವಾರ್ಥ ಸಾಮಾಜಿಕ ಸೇವೆಯ ಮೂಲಕ ಗುರುತಿಸಿಕೊಂಡಿರುವ ''''ಪ್ರಜಾವಾಣಿ'''' ಪತ್ರಿಕೆಯ ಹಿರಿಯ ಪತ್ರಕರ್ತ ಹಾಗೂ ಸಮಾಜ ಸೇವಕ ಸುಕುಮಾರ್ ಮುನಿಯಾಲ್ ಅವರನ್ನು ಟೀಮ್ ಮಲೆನಾಡು ಹ್ಯೂಮೇನಿಟೆರಿಯನ್ ಟ್ರಸ್ಟ್ ಬೆಳ್ವೆ ವತಿಯಿಂದ ಗೌರವಿಸಿ, ಸನ್ಮಾನಿಸಲಾಯಿತು.
ಕನ್ನಡಪ್ರಭವಾರ್ತೆ ಬೆಳ್ವೆ
ಪತ್ರಿಕೋದ್ಯಮ ಹಾಗೂ ನಿಸ್ವಾರ್ಥ ಸಾಮಾಜಿಕ ಸೇವೆಯ ಮೂಲಕ ಗುರುತಿಸಿಕೊಂಡಿರುವ ''''''''ಪ್ರಜಾವಾಣಿ'''''''' ಪತ್ರಿಕೆಯ ಹಿರಿಯ ಪತ್ರಕರ್ತ ಹಾಗೂ ಸಮಾಜ ಸೇವಕ ಸುಕುಮಾರ್ ಮುನಿಯಾಲ್ ಅವರನ್ನು ಟೀಮ್ ಮಲೆನಾಡು ಹ್ಯೂಮೇನಿಟೆರಿಯನ್ ಟ್ರಸ್ಟ್ ಬೆಳ್ವೆ ವತಿಯಿಂದ ಗೌರವಿಸಿ, ಸನ್ಮಾನಿಸಲಾಯಿತು.
ಬೆಳ್ವೆಯಲ್ಲಿ ನಡೆದ ಸರಳ ಹಾಗೂ ಅರ್ಥಪೂರ್ಣ ಕಾರ್ಯಕ್ರಮದಲ್ಲಿ, ಟ್ರಸ್ಟ್‌ನ ಅಧ್ಯಕ್ಷ ಅಬ್ದುಲ್ ಶುಕುರ್ ಬೆಳ್ವೆ ಅವರು ಸುಕುಮಾರ್ ಮುನಿಯಾಲ್ ಅವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸುಕುಮಾರ್ ಮುನಿಯಾಲ್ ಅವರು ಪತ್ರಿಕೋದ್ಯಮದ ಜೊತೆಗೆ ಸಮಾಜದ ವಿವಿಧ ತೊಂದರೆಗಳಲ್ಲಿ ಸ್ಪಂದಿಸುತ್ತಾ ಬಂದಿರುವ ಸೇವಾ ಮನೋಭಾವ ಮಾದರಿಯಾಗಿದೆ ಎಂದು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಕೋಶಾಧಿಕಾರಿ ಮೊಹಮ್ಮದ್ ಆಸೀಫ್ ಅಲ್ಬಾಡಿ, ಟ್ರಸ್ಟಿ ಅರಾಫತ್ ಅಲ್ಬಾಡಿ ಹಾಗೂ ಹಿರಿಯ ಪತ್ರಕರ್ತ ಸಂಜೀವ ಆರ್ಡಿ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.