ಕೆ. ಶಿವರಾಂಗೆ ಶ್ರದ್ಧಾಂಜಲಿ

KannadaprabhaNewsNetwork |  
Published : Mar 03, 2024, 01:30 AM IST
ಚಿತ್ರ 1  ಸುದ್ದಿ 1  ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿಇತ್ತೀಚೆಗೆ ನಿಧನರಾದ ಮಾಜಿ ಐಎಎಸ್ ಅಧಿಕಾರಿ ಹಾಗೂ ಚಲನಚಿತ್ರ ನಟ ಕೆ ಶಿವರಾಮ್ ಅವರಿಗೆ ಶ್ರದ್ದಂಜಲಿ ಏರ್ಪಡಿಸಲಾಗಿತ್ತು | Kannada Prabha

ಸಾರಾಂಶ

ಇತ್ತೀಚಿಗೆ ನಿಧನರಾದ ನಿವೃತ್ತ ಐಎಎಸ್ ಅಧಿಕಾರಿ, ಚಿತ್ರ ನಟ ಕೆ. ಶಿವರಾಂ ನಿಧನದ ಹಿನ್ನಲೆಯಲ್ಲಿ ಅವರಿಗೆ ದಲಿತ ಸಂಘರ್ಷ ಸಮಿತಿ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು

ಕನ್ನಡಪ್ರಭ ವಾರ್ತೆ ಹನೂರು

ಇತ್ತೀಚಿಗೆ ನಿಧನರಾದ ನಿವೃತ್ತ ಐಎಎಸ್ ಅಧಿಕಾರಿ, ಚಿತ್ರ ನಟ ಕೆ. ಶಿವರಾಂ ನಿಧನದ ಹಿನ್ನಲೆಯಲ್ಲಿ ಅವರಿಗೆ ದಲಿತ ಸಂಘರ್ಷ ಸಮಿತಿ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು. ಪಟ್ಟಣದ ಲೋಕೋಪಯೋಗಿ ವಸತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಕೆ.ಶಿವರಾಂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಲಾಯಿತು. ಈ ವೇಳೆ ದಲಿತ ಸಂಘರ್ಷ ಸಮಿತಿ ಮೈಸೂರು ವಿಭಾಗಿಯ ಸಂಚಾಲಕ ದೊಡ್ಡಿಂದುವಾಡಿ ಸಿದ್ದರಾಜು ಮಾತನಾಡಿ, ಕನ್ನಡದಲ್ಲಿ ಮೊಟ್ಟಮೊದಲ ಬಾರಿಗೆ ಐಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿವಿಧ ಜಿಲ್ಲೆಗಳಲ್ಲಿ ದಕ್ಷ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಕೆ. ಶಿವರಾಂ ನಿಧನದಿಂದ ನಾಡಿಗೆ ನಷ್ಟ ಉಂಟಾಗಿದೆ ಅದರಲ್ಲೂ ದಲಿತ ಸಮುದಾಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ಅಧಿಕಾರದ ಅವಧಿಯಲ್ಲಿ ಶೋಷಿತ, ದಲಿತ ಸಮುದಾಯದ ಹೆಣ್ಣುಮಕ್ಕಳು ವಿಮಾನಯಾನದಲ್ಲಿ ಗಗನಸಖಿಯರಾಗಿ, ಆಸ್ಪತ್ರೆಗಳಲ್ಲಿ ಶುಶ್ರೂಷಕಿಯರಾಗಿಕರ್ತವ್ಯ ನಿರ್ವಹಿಸುವ ಅನುಕೂಲವನ್ನು ಒದಗಿಸಿದವರು. ಅವರ ಅವಧಿಯಲ್ಲಿ ಬೀದರ್, ಧಾರವಾಡ ಸೇರಿದಂತೆ ಇನ್ನಿತರಡೆ ಅತ್ಯುತ್ತಮವಾಗಿ ಕೆಲಸ ನಿರ್ವಹಿಸಿದ್ದಾರೆ. ಇಂತಹ ಮೇರು ವ್ಯಕ್ತಿ ಮತ್ತೊಂದಷ್ಟು ಕಾಲ ನಮ್ಮೊಡನೆ ಇರಬೇಕಾಯಿತು. ಅವರ ಆತ್ಮಕ್ಕೆ ಭಗವಾನ್ ಬುದ್ಧ ಶಾಂತಿ ನೀಡಲಿ ಅವರ ನಿಧನದ ದುಃಖವನ್ನು ಬರಿಸುವ ಶಕ್ತಿಯನ್ನು ಕುಟುಂಬದವರಿಗೆ ನೀಡಲಿ ಎಂದರು. ಈ ವೇಳೆ ಸಮಿತಿಯ ತಾಲೂಕು ಕಾರ್ಯದರ್ಶಿ ಮಾದೇಶ್, ಶಿವಸ್ವಾಮಿ, ದೊಡ್ಡಯ್ಯ, ಹಿಂಡಯ್ಯ, ಭಾಗ್ಯಮ್ಮ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ
ರೈಲ್ವೆ ಯೋಜನೆಗೆ ಭೂಮಿ ನೀಡಲು ರಾಜ್ಯ ಹಿಂದೇಟು