ಮನಮೋಹನ ಸಿಂಗ್ಎ ನಿಧನಕ್ಕೆ ಎಚ್.ಜಿ. ರಾಮುಲು ನಿವಾಸದಲ್ಲಿ ಶ್ರದ್ಧಾಂಜಲಿ

KannadaprabhaNewsNetwork |  
Published : Dec 28, 2024, 01:02 AM IST
27ಉ‍ಳ6 | Kannada Prabha

ಸಾರಾಂಶ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ನಗರದ ಮಾಜಿ ಸಂಸದ ಎಚ್.ಜಿ. ರಾಮುಲು ಅವರ ನಿವಾಸದಲ್ಲಿ ಮೇಣದ ಬತ್ತಿ ಹಚ್ಚುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಗಂಗಾವತಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ನಗರದ ಮಾಜಿ ಸಂಸದ ಎಚ್.ಜಿ. ರಾಮುಲು ಅವರ ನಿವಾಸದಲ್ಲಿ ಮೇಣದ ಬತ್ತಿ ಹಚ್ಚುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.ವಿಧಾನಪರಿಷತ್ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ ಮಾತನಾಡಿ, ಮನಮೋಹನ್ ಸಿಂಗ್ ಎರಡು ಬಾರಿ ಪ್ರಧಾನಿಯಾಗಿ ದೇಶದ ಆರ್ಥಿಕತೆ ಭದ್ರಗೊಳಿಸಿದ ಮಹಾನ್ ನಾಯಕರಾಗಿದ್ದರು. ಅವರ ಅಧಿಕಾರಾವಧಿಯಲ್ಲಿ ಎನ್ಆರ್‌ಜಿ ಜಾರಿಗೆ ತಂದಿದ್ದರು ಎಂದು ಸ್ಮರಿಸಿದರು.

ನಗರಸಭೆ ಮಾಜಿ ಅಧ್ಯಕ್ಷ ಜೋಗದ ಹನುಮಂತಪ್ಪ ನಾಯಕ ಅವರು ಮನಮೋಹನ್ ಸಿಂಗ್ ಅವರ ಅಧಿಕಾರಾವಧಿಯಲ್ಲಿ ಜಾರಿಗೆ ಬಂದಿರುವ ಯೋಜನೆಗಳು ಬಡವರಿಗೆ, ರೈತರಿಗೆ ವರದಾನವಾಗಿದೆ ಎಂದರು.

ಈ ಸಂದರ್ಭದಲ್ಲಿ ಸುರೇಶ ಗೌರಪ್ಪ, ರಮೇಶ ಗೌಳಿ, ಹನುಮಂತರಾಯ, ತುಳಸಪ್ಪ, ಡಾ. ಶಿವಕುಮಾರ, ಲಿಂಗಪ್ಪ, ಶರಣೇಗೌಡ, ಸೈಯದ್ ಅಲಿ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.

ಭಾರತದ ಆರ್ಥಿಕ ಪಥ ರೂಪಿಸಿದ ಧೀಮಂತ ನಾಯಕಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸಂತಾಪ

ಕುಕನೂರು:

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಭಾರತಥ ಆರ್ಥಿಕ ಪಥವನ್ನು ರೂಪಿಸಿದರು ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಅವರು, ಸಿಂಗ್ ಅವರ ಭಾರತದ ಆರ್ಥಿಕ ವಲಯದ ನೀತಿಗಳು ಉದ್ಯಮಶೀಲತೆ ಮತ್ತು ಆಧುನೀಕರಣದ ಹೊಸ ಯುಗಕ್ಕೆ ನಾಂದಿ ಹಾಡಿದವು. ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಗಳಲ್ಲಿ ಒಂದಾಗಿ ಭಾರತ ಹೊರಹೊಮ್ಮಲು ದಾರಿ ಮಾಡಿಕೊಟ್ಟಿತು. ಅವರ ಕೊಡುಗೆ ಐತಿಹಾಸಿಕ ಮೈಲುಗಲ್ಲು ಎಂದರು.

ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದು ಯಾರೂ ಹಸಿವೆಯಿಂದ ಬಳಲದಂತೆ ಮಾಡಿದರು. ರೈತರ ಸಾಲಮನ್ನಾ ಮಾಡಿದರು. ಸಿಂಗ್ ಅವರ ಅವಧಿಯಲ್ಲಿ ಸರ್ಕಾರ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಹಕ್ಕು-ಆಧಾರಿತ ಸಮಗ್ರ ಅಭಿವೃದ್ಧಿಯ ಗುರಿಯನ್ನು ಹೊಂದಿರುವ ಹಲವಾರು ಸಾಮಾಜಿಕ ಕಲ್ಯಾಣ ಕಾರ್ಯ ಕೈಗೊಂಡಿತು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ