ನಿವೃತ್ತ ಶಿಕ್ಷಣಾಧಿಕಾರಿ ತಮಣ್ಣಗೌಡರಿಗೆ ಸನ್ಮಾನ

KannadaprabhaNewsNetwork |  
Published : Dec 01, 2024, 01:30 AM IST
30ಎಚ್ಎಸ್ಎನ್13 :  | Kannada Prabha

ಸಾರಾಂಶ

ಜಿಲ್ಲಾ ವಸತಿ ಶಾಲೆಗಳ ಒಕ್ಕೂಟದಿಂದ ತಾಲೂಕಿನ ದೊಡ್ಡಮಗ್ಗೆ ಡಾ.ಬಿ.ಆರ್‌.ಅಂಬೇಡ್ಕರ್‌ ವಸತಿ ಶಾಲೆಯಲ್ಲಿ ಶುಕ್ರವಾರ ಹಮಿಕೊಂಡಿದ್ದ ಕನ್ನಡ ರಾಜ್ಯೋತ್ಸವದಲ್ಲಿ ನಿವೃತ್ತ ಶಿಕ್ಷಣಾಧಿಕಾರಿ ಜೆ.ಬಿ.ತಮಣ್ಣಗೌಡ ಅವರನ್ನು ಸನ್ಮಾನಿಸಲಾಯಿತು. ತಮಣ್ಣಗೌಡ ಅವರು ಶಿಕ್ಷಣ ಕ್ಷೇತ್ರದಲ್ಲಿ ಗುರುತರ ಸೇವೆ ಸಲ್ಲಿಸಿದ್ದು, ಮಕ್ಕಳಿಗಾಗಿ ತಮ ಜೀವನವನ್ನೇ ಸಮರ್ಪಣೆ ಮಾಡಿದ್ದಾರೆ. ಕಂದಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ೨೦ ವರ್ಷ ಪ್ರಾಂಶುಪಾಲರಾಗಿದ್ದ ಅವರು ತಮಗೆ ಬರುತ್ತಿದ್ದ ಸಂಬಳದ ಬಹುಪಾಲನ್ನು ವಿದ್ಯಾರ್ಥಿಗಳಿಗೆ ಮೀಸಲಿಟ್ಟಿದ್ದರು.

ಕನ್ನಡಪ್ರಭ ವಾರ್ತೆ ಅರಕಲಗೂಡು

ಜಿಲ್ಲಾ ವಸತಿ ಶಾಲೆಗಳ ಒಕ್ಕೂಟದಿಂದ ತಾಲೂಕಿನ ದೊಡ್ಡಮಗ್ಗೆ ಡಾ.ಬಿ.ಆರ್‌.ಅಂಬೇಡ್ಕರ್‌ ವಸತಿ ಶಾಲೆಯಲ್ಲಿ ಶುಕ್ರವಾರ ಹಮಿಕೊಂಡಿದ್ದ ಕನ್ನಡ ರಾಜ್ಯೋತ್ಸವದಲ್ಲಿ ನಿವೃತ್ತ ಶಿಕ್ಷಣಾಧಿಕಾರಿ ಜೆ.ಬಿ.ತಮಣ್ಣಗೌಡ ಅವರನ್ನು ಸನ್ಮಾನಿಸಲಾಯಿತು.

ತಮಣ್ಣಗೌಡ ಅವರು ಶಿಕ್ಷಣ ಕ್ಷೇತ್ರದಲ್ಲಿ ಗುರುತರ ಸೇವೆ ಸಲ್ಲಿಸಿದ್ದು, ಮಕ್ಕಳಿಗಾಗಿ ತಮ ಜೀವನವನ್ನೇ ಸಮರ್ಪಣೆ ಮಾಡಿದ್ದಾರೆ. ಕಂದಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ೨೦ ವರ್ಷ ಪ್ರಾಂಶುಪಾಲರಾಗಿದ್ದ ಅವರು ತಮಗೆ ಬರುತ್ತಿದ್ದ ಸಂಬಳದ ಬಹುಪಾಲನ್ನು ವಿದ್ಯಾರ್ಥಿಗಳಿಗೆ ಮೀಸಲಿಟ್ಟಿದ್ದರು. ಕಂದಲಿ ವಸತಿ ಶಾಲೆಯ ಪ್ರಾಂಶುಪಾಲರಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿ ಹಾಗು ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿಯಾಗಿದ್ದ ಅವರು ಆ. ೩೦ರಂದು ಸೇವಾ ನಿವೃತ್ತಿ ಹೊಂದಿದ್ದಾರೆ. ಜಿಲ್ಲೆಯ ಎಲ್ಲಾ ೩೮ ವಸತಿ ಶಾಲೆಗಳ ಪರವಾಗಿ ಅವರನ್ನು ಗೌರವಿಸಲಾಯಿತು.

ಬಿಸಿಎಂ ಅಧಿಕಾರಿ ಕುಮಾರ್‌, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್, ವಸತಿ ಶಾಲೆಗಳ ನೌಕರರ ಸಂಘದ ರಾಜ್ಯಾಧ್ಯಕ್ಷ ರವಿಚಂದ್ರನ್, ಜಿಲ್ಲಾಧ್ಯಕ್ಷ ಸಿ.ಎನ್.ಉಷಾ, ಜಿಲ್ಲಾ ಸಂಯೋಜನಾಧಿಕಾರಿ ಸುಮಂತ್, ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ರಾಜಾ ರವಿಚಂದ್ರನ್, ದೊಡ್ಡ ಮಗ್ಗೆ ಅಂಬೇಡ್ಕರ್‌ ವಸತಿ ಶಾಲೆ ಪ್ರಾಂಶುಪಾಲೆ ಸುಮಲತಾ, ಬರಗೂರು ಶಾಲೆ ಪ್ರಾಂಶುಪಾಲ ಗಿರೀಶ್, ಸಂಪತ್‌ರಾಜು, ತಾರಾನಾಥ್, ಶಂಕರ್‌, ಶೃತಿ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

4 ಜಿಲ್ಲೆಗಳಲ್ಲಿ 13 ಸಾವಿರ ಕೇಸ್‌ ಬಾಕಿ : ಸಚಿವ ತರಾಟೆ
ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ವಿವಾದ