ಪಟ್ಟಣದಲ್ಲಿ ಮಂಗಳವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಾಜ್ಯ ಪ್ರಶಸ್ತಿ ಪುರಸ್ಕೃತ ಸ್ಥಳೀಯ ಪತ್ರಕರ್ತ ಪ್ರಸನ್ನ ಕುಲಕರ್ಣಿ ಅವರನ್ನು ಶಾಸಕ ವಿಠ್ಠಲ ಹಲಗೇಕರ ಸತ್ಕರಿಸಿದರು.
ಕನ್ನಡಪ್ರಭ ವಾರ್ತೆ ಖಾನಾಪುರ
ಪಟ್ಟಣದಲ್ಲಿ ಮಂಗಳವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಾಜ್ಯ ಪ್ರಶಸ್ತಿ ಪುರಸ್ಕೃತ ಸ್ಥಳೀಯ ಪತ್ರಕರ್ತ ಪ್ರಸನ್ನ ಕುಲಕರ್ಣಿ ಅವರನ್ನು ಶಾಸಕ ವಿಠ್ಠಲ ಹಲಗೇಕರ ಸತ್ಕರಿಸಿದರು. ಈ ಸಂದರ್ಭದಲ್ಲಿ ತೋಪಿನಕಟ್ಟಿ ಶ್ರೀ ಮಹಾಲಕ್ಷ್ಮೀ ಸಹಕಾರಿ ಸಂಘದ ಉಪಾಧ್ಯಕ್ಷ ವಿಠ್ಠಲ ಕರಂಬಳಕರ, ನಿರ್ದೇಶಕರಾದ ಚಾಂಗಪ್ಪ ನಿಲಜಕರ, ಯಲ್ಲಪ್ಪ ತಿರವೀರ, ಮಹಾದೇವ ಬಾಂದಿವಾಡಕರ, ಶ್ರೀ ಮಹಾಲಕ್ಷ್ಮೀ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಭರತ ತೋಪಿನಕಟ್ಟಿ, ಕಾರ್ಯದರ್ಶಿ ರಾಜೇಂದ್ರ ಪಾಟೀಲ, ಲೈಲಾ ಶುಗರ್ಸ್ ಎಂಡಿ ಸದಾನಂದ ಪಾಟೀಲ, ಬೆಳಗಾವಿಯ ಕೆಎಲ್‌ಇ ಕಂಕನವಾಡಿ ಆಸ್ಪತ್ರೆಯ ಶರೀರ ರಚನಾ ಶಾಸ್ತ್ರದ ಪ್ರಾಧ್ಯಾಪಕ ಡಾ.ಮಹಾಂತೇಶ ರಾಮಣ್ಣವರ ಹಾಗೂ ಇತರರು ಇದ್ದರು.
ಖಾನಾಪುರ ತಾಲೂಕಿನ ಇತಿಹಾಸದಲ್ಲಿ ಮಾಧ್ಯಮ ಪ್ರತಿನಿಧಿಯೊಬ್ಬರಿಗೆ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿದ್ದು ಪ್ರಥಮ. ಅದರಲ್ಲೂ ಪ್ರಸನ್ನ ಅವರು ಬರೆದ ತಾಲೂಕಿನ ಕಾನನದೊಳಗಿನ ಗ್ರಾಮವೊಂದಕ್ಕೆ ಸಂಬಂಧಿಸಿದ ವಿಶೇಷ ಮಾನವೀಯ ವರದಿಗೆ ಪ್ರಶಸ್ತಿ ಲಭಿಸಿದ್ದು ಹೆಮ್ಮೆಯ ವಿಷಯ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.