ಪ್ರತಿಭಾವಂತ ವಿದ್ಯಾರ್ಥಿನಿ ಎ.ಎಸ್. ಶ್ರೀಶಾಗೆ ಗೌರವ ಸಮರ್ಪಣೆ

KannadaprabhaNewsNetwork |  
Published : Nov 27, 2026, 02:45 AM IST
ಚಿತ್ರ.1: ಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಅತೀ ಅಂಕ ಪಡೆದ ವಿದ್ಯಾರ್ಥಿನಿ ಎ.ಎಸ್. ಶ್ರೀಶಾ ಅವರಿಗೆ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ಸರ್ಕಾರದ ಸಚಿವರಾದ ಈಶ್ವರ್ ಭೀಮಣ್ಣ ಖಂಡ್ರೆ ಸನ್ಮಾನಿಸಿ ಗೌರವಿಸಲಾಯಿತು. | Kannada Prabha

ಸಾರಾಂಶ

ರಾಜ್ಯಮಟ್ಟದ ಮಹಾಸಮಾವೇಶ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಂಚಾಯಿತಿ ಸಿಬ್ಬಂದಿಗಳ ಕೊಡಗಿನ ಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದು ಸಾಧನೆ ಮಾಡಿದ ವಿದ್ಯಾರ್ಥಿನಿ ಎ.ಎಸ್. ಶ್ರೀಶಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸುಂಟಿಕೊಪ್ಪ: ರಾಜ್ಯಮಟ್ಟದ ಮಹಾಸಮಾವೇಶ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಂಚಾಯಿತಿ ಸಿಬ್ಬಂದಿಗಳ ಕೊಡಗಿನ ಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದು ಸಾಧನೆ ಮಾಡಿದ ವಿದ್ಯಾರ್ಥಿನಿ ಎ.ಎಸ್. ಶ್ರೀಶಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಇತ್ತೀಚೆಗೆ ಕಲಬುರಗಿಯಲ್ಲಿ ಜರುಗಿದ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (ಬಿ -ಗ್ರೇಡ್ )ಹುದ್ದೆ ಉನ್ನತೀಕರಣ ಸಂಘ (ರಿ ) ಬೆಂಗಳೂರು ವತಿಯಿಂದ ಆಯೋಜಿಸಲಾದ "ಗ್ರಾಮ ವಿಕಾಸ ಸಂಗಮ 2026 " ಬದಲಾವಣೆಯ ಹೆಜ್ಜೆ, ಬಲವರ್ಧನೆಯ ಸಂಕಲ್ಪ "ಪಿ. ಡಿ. ಓ.ಹುದ್ದೆಗಳ ಉನ್ನತೀಕರಣಕ್ಕಾಗಿ ರಾಜ್ಯಮಟ್ಟದ ಮಹಾಸಮಾವೇಶದ ಪ್ರಯುಕ್ತ ಆಯೋಜಿಸಲಾದ "ಪ್ರತಿಭಾ ಪುರಸ್ಕಾರ " ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಪಂಚಾಯಿತಿ ಸಿಬ್ಬಂದಿಗಳ ಮಕ್ಕಳಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಪಟ್ಟಿಯಲ್ಲಿ ಕೊಡಗಿನ ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢ ಶಾಲೆ ವಿದ್ಯಾರ್ಥಿನಿ ಎ.ಎಸ್. ಶ್ರೀಶಾ 625 ಅಂಕಗಳಿಗೆ 612 ಅಂಕಗಳಿಸಿದ್ದು ಅವರನ್ನು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ಸರ್ಕಾರದ ಸಚಿವರಾದ ಈಶ್ವರ್ ಭೀಮಣ್ಣ ಖಂಡ್ರೆ ಸನ್ಮಾನಿಸಿ ಗೌರವಿಸಿದರು .

ಕಾರ್ಯಕ್ರಮದಲ್ಲಿ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮ ಪ್ರಭು ಪಾಟೀಲ್, ಪ. ಪೂ. ರಾಜಶೇಖರ ಶಿವಾಚಾರ್ಯರು ಚೌದಪುರಿ ಹಿರೇಮಠ ಕಲಬುರಗಿ, ಕಲಬುರಗಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯಿತಿ ರಾಹುಲ್ ಶರಣಪ್ಪ ಸಂಕನೂರ, ಹಾಗೂ ನಡಗೇರಿ ರಾಜ್ಯಾಧ್ಯಕ್ಷರು ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (ಬಿ. ಗ್ರೇಡ್ ) ಹುದ್ದೆ ಉನ್ನತೀಕರಣ ಸಂಘ ರಮೇಶ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜನಸಾಮಾನ್ಯರ ಕಲ್ಯಾಣಕ್ಕಾಗಿ ವಿವಿಧ ಜನಪರ ಕಾರ್ಯಕ್ರಮ: ರಿಜ್ವಾನ್ ಅರ್ಷದ್
ಬ್ಯಾಂಕುಗಳು ಆಹಾರ ಸಂಸ್ಕರಣೆಗೆ ಪ್ರೋತ್ಸಾಹ ನೀಡಿ: ಪ್ರತೀಕ್ ಬಾಯಲ್‌