ಮಡಿಕೇರಿ : ವಿವಿಧ ಸಂಘಟನೆಗಳ ವತಿಯಿಂದ ನಗರದಲ್ಲಿ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಯಿತು. ಕೊಡಗು ಹಿಂದು ಜಾಗರಣ ವೇದಿಕೆ, ಮಡಿಕೇರಿ ಮಾಜಿ ಸೈನಿಕರ ಸಂಘ ಸೇರಿದಂತೆ ವಿವಿಧ ಸಂಘಟನೆಗಳಿಂದ ನಗರದ ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಪುಷ್ಪ ನಮನ ಸಲ್ಲಿಸಲಾಯಿತು.ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಹಾಗೂ ವಕೀಲರಾದ ಮೇಜರ್ ಓ.ಎಸ್.ಚಿಂಗಪ್ಪ ಕಾರ್ಗಿಲ್ ಯುದ್ಧದಲ್ಲಿ ದಿಗ್ವಿಜಯ ಸಾಧಿಸಿದ ಭಾರತೀಯ ಯೋಧರ ತ್ಯಾಗ ಬಲಿದಾನಗಳನ್ನು ಸ್ಮರಿಸಿದರು.
ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ನಗರದ ಜಿಲ್ಲಾಸ್ಪತ್ರೆಯ ರಕ್ತ ನಿಧಿ ಕೇಂದ್ರದಲ್ಲಿ ರಕ್ತದಾನ ಶಿಬಿರ ನಡೆಯಿತು.