ಗುಬ್ಬಿ ಪಟ್ಟಣದ ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಚೇರಿ ಆವರಣದಲ್ಲಿ ಕರ್ನಾಟಕ ದರ್ಶನ ಪ್ರವಾಸಕ್ಕೆ ಚಾಲನೆ
ಕರ್ನಾಟಕದ ಇತಿಹಾಸ, ಕಲೆ, ವಾಸ್ತುಶಿಲ್ಪ ಮತ್ತು ಸಂಸ್ಕೃತಿಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ದೃಷ್ಟಿಯಿಂದ ಕರ್ನಾಟಕ ದರ್ಶನ ಪ್ರವಾಸ ಕೈಗೊಳ್ಳಲಾಗುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್. ನಟರಾಜು ತಿಳಿಸಿದರು.
ಪಟ್ಟಣದ ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರವಾಸೋದ್ಯಮ ಇಲಾಖೆ ಹಾಗೂ ಶಿಕ್ಷಣ ಇಲಾಖೆಯಿಂದ ಶಾಲಾ ಮಕ್ಕಳಿಗೆ ಹಮ್ಮಿಕೊಂಡಿದ್ದ ಕರ್ನಾಟಕ ದರ್ಶನ ಪ್ರವಾಸಕ್ಕೆ ಹಸಿರು ಬಾವುಟ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಪ್ರವಾಸ ಕೈಗೊಳ್ಳುವುದು ಕೇವಲ ಮನರಂಜನೆಗೆ ಮಾತ್ರವಲ್ಲ. ಪಠ್ಯದಲ್ಲಿರುವಂತಹ ವಿಷಯ ಪ್ರತ್ಯಕ್ಷವಾಗಿ ನೋಡಿ ಅಭ್ಯಾಸ ಮಾಡಿ ಜ್ಞಾನದ ಮಟ್ಟ ಹೆಚ್ಚಿಸಿಕೊಳ್ಳಬೇಕು. ಪ್ರವಾಸದಲ್ಲಿ ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳು ಪ್ರವಾಸದ ಸಮಯದಲ್ಲಿ ನೋಡಿದ ಕಲಿತ ವಿಷಯಗಳನ್ನು ಪ್ರಬಂಧದ ರೂಪದಲ್ಲಿ ಬರೆದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ತಲುಪಿಸಬೇಕು ಎಂದು ತಿಳಿಸಿದರು.ಸರ್ಕಾರಿ ಶಾಲೆಯು ಖಾಸಗಿ ಶಾಲೆಗಳಿಗಿಂತ ಕಮ್ಮಿ ಇಲ್ಲ. ಇಲ್ಲಿ ಸರ್ಕಾರಿ ಶಾಲೆಯಲ್ಲಿ ನುರಿತ ಶಿಕ್ಷಕರು ಇರುವುದರಿಂದ ಉತ್ತಮ ಪಾಠಗಳು ನಡೆಯುತ್ತವೆ. ಸರ್ಕಾರವು ಸರ್ಕಾರಿ ಶಾಲೆ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ತಂದಿದೆ. ಅವುಗಳನ್ನು ವಿದ್ಯಾರ್ಥಿಗಳು ಪೋಷಕರು ಸದುಪಯೋಗಪಡಿಸಿಕೊಂಡು ಮಕ್ಕಳ ಬೆಳವಣಿಗೆಗೆ ಪೂರಕವಾಗುವ ನಿಟ್ಟಿನಲ್ಲಿ ಸಾಗಬೇಕು ಎಂದು ಹೇಳಿದರು.
ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಗೋವಿಂದರಾಜು, ಕಾರ್ಯದರ್ಶಿ ಎ.ಬಿ. ಜಗದೀಶ್, ನಾಗರತ್ನಮ್ಮ, ಶಾರದಮ್ಮ, ಇಸಿಒ ಲೊಕೇಶ್, ನಿಜನಂದಮುರ್ತಿ, ದಕ್ಷಿಣಮೂರ್ತಿ, ಶಾಂತಮ್ಮ, ಪವಿತ್ರ ಲೋಕೇಶ್, ಪ್ರವಾಸೋದ್ಯಮ ಇಲಾಖೆ ಪ್ರಶಾಂತ್, ಸಚ್ಚಿನ್, ಶಿಕ್ಷಕರಾದ ಜಯಣ್ಣ, ಪ್ರವಾಸಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು, ಪೋಷಕರು ಇತರರು ಇದ್ದರು.-------------
ಗುಬ್ಬಿ ಪಟ್ಟಣದ ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರವಾಸೋದ್ಯಮ ಇಲಾಖೆ ಹಾಗೂ ಶಿಕ್ಷಣ ಇಲಾಖೆಯಿಂದ ಶಾಲಾ ಮಕ್ಕಳಿಗೆ ಹಮ್ಮಿಕೊಂಡಿದ್ದ ಕರ್ನಾಟಕ ದರ್ಶನ ಪ್ರವಾಸಕ್ಕೆ ಹಸಿರು ಬಾವುಟ ತೋರಿಸುವ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್. ನಟರಾಜು ಚಾಲನೆ ನೀಡಿದರು.