ನಾನು ಗೆದ್ರೆ ಕ್ಷೇತ್ರದಲ್ಲಿ ತ್ರಿಬಲ್ ಎಂಜಿನ್ ಸರ್ಕಾರ: ಡಾ.ಪ್ರಭಾ

KannadaprabhaNewsNetwork |  
Published : Mar 30, 2024, 12:46 AM IST
29ಜೆಎಲ್ಆರ್ಚಿತ್ರ1: ಜಗಳೂರು ಪಟ್ಟಣದ ತರಳಬಾಳು ಕೇಂದ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಗೆಲುವಿಗಾಗಿ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಲಾಯಿತು. | Kannada Prabha

ಸಾರಾಂಶ

ಜಗಳೂರು ಪಟ್ಟಣದ ತರಳಬಾಳು ಕೇಂದ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಪರ ಕಾರ್ಯಕರ್ತರ ಸಭೆಗೆ ಚಾಲನೆ ನೀಡಲಾಯಿತು.

ಕನ್ನಡಪ್ರಭ ವಾರ್ತೆ ಜಗಳೂರು

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಡಬಲ್ ಎಂಜಿನ್ ಸರಕಾರ ಇತ್ತು. ಆದರೆ ರಾಜ್ಯ ಮತ್ತು ಕ್ಷೇತ್ರದಲ್ಲಿ ಅವರು ಏನು ಕೆಲಸ ಮಾಡಿದ್ದಾರೆ? ಈ ಬಾರಿ ನಾನು ಗೆದ್ದರೆ ನಮ್ಮ ಕ್ಷೇತ್ರದಲ್ಲಿ ತ್ರಿಬಲ್ ಎಂಜಿನ್ ಸರಕಾರ ಬಂದಂತಾಗುತ್ತದೆ. ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಕ್ಷೇತ್ರದಲ್ಲಿ ಶಾಸಕ ಬಿ.ದೇವೇಂದ್ರಪ್ಪ ಮತ್ತು ನಾನು ಸಂಸದೆ ಆದರೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗುತ್ತವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ಪಟ್ಟಣದ ತರಳಬಾಳು ಕೇಂದ್ರದಲ್ಲಿ ಶುಕ್ರವಾರ ಮುಖಂಡರು, ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುತ್ತಿರುವುದನ್ನು ನೋಡಿದರೆ ರಣಕಹಳೆ ಮೊಳಗಿದಂತೆ ಕಾಣುತ್ತದೆ. ಕಳೆದ 25 ವರ್ಷಗಳಿಂದ ಕಾಂಗ್ರೆಸ್ ಅಭ್ಯರ್ಥಿ ಗಳ ಗೆಲುವಿಗಾಗಿ ಇಡೀ ಕ್ಷೇತ್ರದಾದ್ಯಂತ ಸಂಚಾರ ಮಾಡಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತವಿದೆ, ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗುತ್ತವೆ. ನಾನು ಗೆದ್ದರೆ 57 ಕೆರೆ ತುಂಬಿಸುವ ಯೋಜನೆ, ಭದ್ರಾ ಮೇಲ್ದಂಡೆ ಯೋಜನೆ , ಸಮಗ್ರ ನೀರಾವರಿ, ಕೈಗಾರಿಕೋದ್ಯಮ, ಆರೋಗ್ಯ, ಮಹಿಳಾ ಸಬಲೀಕರಣ, ಯುವಕರಿಗೆ ಉದ್ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದು ವಿಶ್ವಾಸವಿತ್ತರು. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೊಟ್ಟ ಮಾತಿನಂತೆ 5 ಗ್ಯಾರಂಟಿಗಳನ್ನು ನಮ್ಮ ಸರಕಾರ ಈಡೇರಿಸಿದೆ. ನಾವೆಲ್ಲರೂ ಗ್ಯಾರಂಟಿಗಳನ್ನು ಮುಂದಿಟ್ಟು ಮತ ಕೇಳೋಣ ಎಂದರು. ಶಾಸಕ ಬಿ.ದೇವೇಂದ್ರಪ್ಪ ಮಾತನಾಡಿ, ಜಿಲ್ಲೆಯ ಈಶ್ಯಾನ್ಯ ದಿಕ್ಕಿನಿಂದ ಮತ ಪ್ರಚಾರ ಆರಂಭವಾಗಿದೆ. ನಮ್ಮ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಮುಖದಲ್ಲಿ ವಿಜಯದ ಕಳೆ ಕಾಣುತ್ತಿದೆ. ಅವರನ್ನು ಈ ಬಾರಿ ಚುನಾವಣೆಯಲ್ಲಿ ಗೆಲ್ಲಿಸಿ ಜೂನ್ 4 ರಂದು ದಿಲ್ಲಿಗೆ ಕಳುಹಿಸೋಣ ಎಂದು ಹೇಳಿದರು. ದೇಣಿಗೆ: ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಗೆಲುವಿಗೆ ತಾಲೂಕಿನ ಮೆದಗಿನಕೆರೆ ಗ್ರಾಮದ ವೀರಣ್ಣಗೌಡ ಮತ್ತು ಪುತ್ರ ಅರ್ಜುನ್ ಗೌಡ್ರು 1 ಲಕ್ಷ ರೂ ದೇಣಿಗೆ ನೀಡಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಂಜಪ್ಪ , ಕೆಪಿಸಿಸಿ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ,. ಕೆಪಿಸಿಸಿ ಎಸ್ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಡಿ.ಕೀರ್ತಿಕುಮಾರ್, ಕೆಪಿಸಿಸಿ ವಕ್ತಾರ ಬಸವರಾಜ್, ಕೊಟ್ರೇಶ್, ಕೆಪಿಸಿಸಿ ಸದಸ್ಯ ಕಲ್ಲೇಶ್ರಾಜ್ ಪಟೇಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಷಂಷೀರ್ ಅಹಮದ್, ಕಂಬತ್ತಹಳ್ಳಿ ಮಂಜುನಾಥ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಅರಸೀಕೆರೆ ಕೊಟ್ರೇಶ್, ಗುರುಸಿದ್ದಪ್ಪ, ಶಿವನಗೌಡ, ಯಶವಂತಗೌಡ, ಪಲ್ಲಾಗಟ್ಟೆ ಶೇಖರಪ್ಪ, ಬಿ.ಮಹೇಶ್ವರಪ್ಪ, ಸುರೇಶ್ ಗೌಡ್ರು, ತಿಪ್ಪೇಸ್ವಾಮಿಗೌಡ, ರಮೇಶ್ ರೆಡ್ಡಿ, ಯರಬಳ್ಳಿ ಉಮಾಪತಿ ಸೇರಿದಂತೆ ಅನೇಕರು ಇದ್ದರು.

PREV

Recommended Stories

3ನೇ ಮಹಡಿಯಿಂದ ಆಯತಪ್ಪಿಬಿದ್ದು ಪಿಯು ವಿದ್ಯಾರ್ಥಿನಿ ಸಾವು
ಜೈಲೊಳಗೆ ಡ್ರಗ್ಸ್ ಸಾಗಿಸಲುಯತ್ನ: ವಾರ್ಡನ್ ಬಂಧನ