ಯುವಕರಲ್ಲಿ ರಾಷ್ಟ್ರೀಯತೆ ಮೂಡಿಸಲು ತ್ರಿವರ್ಣ ಯಾತ್ರೆ

KannadaprabhaNewsNetwork |  
Published : Aug 10, 2026, 02:15 AM IST
ಹರ್‌ ಘರ್‌ ತಿರಂಗಾ ಅಂಗವಾಗಿ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಬೈಕ್‌ ರ‍್ಯಾಲಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಪಾಲ್ಗೊಂಡರು. | Kannada Prabha

ಸಾರಾಂಶ

ರಾಷ್ಟ್ರಧ್ವಜವು ದೇಶದ ಸ್ವಾತಂತ್ರ್ಯ, ಹೆಮ್ಮೆ ಹಾಗೂ ಏಕತೆಯ ಸಂಕೇತವಾಗಿದೆ. ಪ್ರತಿಯೊಬ್ಬ ಭಾರತೀಯನ ಮನಸ್ಸಿನಲ್ಲಿ ದೇಶಭಕ್ತಿ ಮತ್ತು ರಾಷ್ಟ್ರೀಯತೆಯ ಭಾವನೆ ಬೆಳೆಸಲು ಇಂತಹ ಅಭಿಯಾನಗಳು ಅತ್ಯಂತ ಅಗತ್ಯ.

ಹುಬ್ಬಳ್ಳಿ:

ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಹಾಗೂ ಕಲ್ಪನೆಯ ಫಲವಾಗಿ ರೂಪುಗೊಂಡಿರುವ ‘ಹರ್ ಘರ್ ತಿರಂಗಾ’ ಅಭಿಯಾನವು ದೇಶದ ಪ್ರತಿಯೊಂದು ಮನೆ-ಮನೆಯಲ್ಲೂ ದೇಶಪ್ರೇಮದ ಜಾಗೃತಿ ಮೂಡಿಸುತ್ತಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹಾಗೂ ‘ಹರ್ ಘರ್ ತಿರಂಗಾ’ ಅಭಿಯಾನದ ಭಾಗವಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವಮೋರ್ಚಾ ಘಟಕದ ವತಿಯಿಂದ ನಗರದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ‘ತ್ರಿವರ್ಣ ಯಾತ್ರೆ’ ಬೈಕ್ ರ‍್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದರು.

ರಾಷ್ಟ್ರಧ್ವಜವು ದೇಶದ ಸ್ವಾತಂತ್ರ್ಯ, ಹೆಮ್ಮೆ ಹಾಗೂ ಏಕತೆಯ ಸಂಕೇತವಾಗಿದೆ. ಪ್ರತಿಯೊಬ್ಬ ಭಾರತೀಯನ ಮನಸ್ಸಿನಲ್ಲಿ ದೇಶಭಕ್ತಿ ಮತ್ತು ರಾಷ್ಟ್ರೀಯತೆಯ ಭಾವನೆ ಬೆಳೆಸಲು ಇಂತಹ ಅಭಿಯಾನಗಳು ಅತ್ಯಂತ ಅಗತ್ಯ. ತ್ರಿವರ್ಣ ಯಾತ್ರೆಯು ಯುವಜನರಲ್ಲಿ ದೇಶದ ಬಗ್ಗೆ ಗೌರವ ಹೆಚ್ಚಿಸುವುದರ ಜತೆಗೆ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ-ಬಲಿದಾನ ಸ್ಮರಿಸಲು ಸ್ಫೂರ್ತಿ ನೀಡುತ್ತದೆ ಎಂದು ಹೇಳಿದರು.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಯುವಮೋರ್ಚಾ ಅಧ್ಯಕ್ಷ ಮುತ್ತು ಹೆಬ್ಬಳ್ಳಿ ನೇತೃತ್ವದಲ್ಲಿ ಬೈಕ್ ರ‍್ಯಾಲಿ ನಡೆಯಿತು. ವಿಧಾನ ಪರಿಷತ್ ಸದಸ್ಯ ಲಿಂಗರಾಜ ಪಾಟೀಲ್, ಕ್ಷೇತ್ರದ ಅಧ್ಯಕ್ಷ ರಾಜು ಕಾಳೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಸಂತ ನಾಡಜೋಶಿ, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಪ್ರೀತಮ್ ಅರಕೇರಿ ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೆಹರು ಕಾಲದಿಂದ ನಾಗೇಂದ್ರ ಕಾಲದ ವರೆಗೆ ಕೈ ಭ್ರಷ್ಟಾಚಾರ: ಸಚಿವ ಬಿ. ಶ್ರೀರಾಮುಲು
ಪಂಚಮಸಾಲಿ ರಾಜ್ಯಾಧ್ಯಕ್ಷ ಸೋಮನಗೌಡ ಮಾಲಿಪಾಟೀಲ್ ಪದಚ್ಯುತಿಗೆ ನಿರ್ಣಯ