ಕನ್ನಡಪ್ರಭ ವಾರ್ತೆ ಸರಗೂರುಸಮಾಜದ ಏಳಿಗೆಗಾಗಿ ಹೋರಾಡಿದ ಕಾಯಕಯೋಗಿ ಬಸವಣ್ಣನವರ ತತ್ವ, ಆದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಿದೆ ಎಂದು ದೇವನೂರು ತ್ರಿವಿಧ ದಾಸೋಹ ಶ್ರೀ ಗುರು ಮಲ್ಲೇಶ್ವರ ಮಹಾಸಂಸ್ಥಾನ ಮಠ ಶ್ರೀ ಮಹಾಂತ ಸ್ವಾಮೀಜಿ ತಿಳಿಸಿದರು.ಪಟ್ಟಣದ ಜೆಎಸ್ಎಸ್ ಶಾಲೆಯ ಆವರಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ವತಿಯಿಂದ, ಬಸವ ಬಳಗ ಮತ್ತು ಯುವ ಘಟಕದ ಸರಗೂರು ತಾಲೂಕು ಘಟಕದಿಂದ ನಡೆದ ಶ್ರೀ ಬಸವೇಶ್ವರ ಜಯಂತಿ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬಸವನ ಬಾಗೇವಾಡಿಯಲ್ಲಿ ಜನಿಸಿದ ಬಸವಣ್ಣ ಶಾಂತ ವಾತಾವರಣದಲ್ಲಿ ಬೆಳೆದು ರಾಜ ಬಿಜ್ಜಳನ ಆಸ್ಥಾನದಲ್ಲಿ ಕೆಲಸ ಮಾಡುತ್ತಾ ಆದರ್ಶ ಪೂರಕವಾದ ಸಮಾಜ ನಿರ್ಮಾಣಕ್ಕೆ ನಾಂದಿ ಹಾಡಿದರು. ಸಮಸಮಾಜಕ್ಕೆ ವಚನಗಳನ್ನು ಕೊಡುಗೆ ನೀಡಿದ ಅವರ ಬೋಧನೆಗಳು ಇಂದಿನ ಭಾರತದಲ್ಲಿಯೂ ಅವಶ್ಯಕವಾಗಿದ್ದು, ಎಲ್ಲರೂ ಅನುಸರಿಸಿ ಮುಂದುವರಿಸಿಕೊಂಡು ಹೋಗಬೇಕು” ಎಂದು ಅವರು ಹೇಳಿದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಮಹಿಳಾ ಘಟಕ ಅಧ್ಯಕ್ಷೆ ವೀಣಾ ಕಾಶಪ್ಪ ಮಾತನಾಡಿ, ಇಂತಹ ಕಾರ್ಯಕ್ರಮಗಳು ಒಂದೇ ದಿನಕ್ಕೆ ಸೀಮಿತವಾಗಬಾರದು, ವರ್ಷವಿಡಿ ಸಿದ್ದಾಂತಗಳನ್ನು ಪಾಲಿಸಿಕೊಂಡು ಹೋಗಬೇಕು ಎಂದರು.ಬಸವರಾಜು, ಕಾಂಗ್ರೆಸ್ ಮುಖಂಡ ಮಹೇಶ್,ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ಬಸವೇಶ್ವರ ಭಾವಚಿತ್ರಗಳ ಮೆರವಣಿಗೆಗೆ ಚಾಲನೆ ನೀಡಿದರು. ಬಿಡುಗಲು ಪಡುವಲು ವಿರಕ್ತ ಮಠದ ಶ್ರೀ ಮಹದೇವಸ್ವಾಮಿಗಳು, ಹಂಚೀಪುರ ಮಠದ ಶ್ರೀ ಚೆನ್ನಬಸವಸ್ವಾಮೀಜಿ, ದಡದಹಳ್ಳಿ ಮಠದ ಶ್ರೀ ಷಡಕ್ಷರಿ ಸ್ವಾಮೀಜಿ, ಹಂಚೀಪುರ ಮಠದ ಕಿರಿಯ ಶ್ರೀಗಳಾದ ತೋಂಟದಾರ್ಯ ಸ್ವಾಮಿಜಿ ಆಶೀರ್ವಚನ ನೀಡಿದರು. ಮಹಾಸಭಾ ಜಿಲ್ಲಾಧ್ಯಕ್ಷ ಬಸವರಾಜು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಅಧ್ಯಕ್ಷ ಕೆ.ಎಸ್ ವೀರಭದ್ರಪ್ಪ,ಜೆಡಿಎಸ್ ಮುಖಂಡ ಜಯಪ್ರಕಾಶ್, ಸಮಾಜ ಸೇವಕಿ ಹಾಗೂ ಸ್ತ್ರೀ ಶಕ್ತಿ ಮಹಿಳಾ ಸಂಘದ ಅಧ್ಯಕ್ಷೆ ಸುಧಾಮೃತ್ಯುಂಜಯಪ್ಪ, ತಹಸೀಲ್ದಾರ್ ಮೋಹನಕುಮಾರಿ, ವರುಣಾ ಮಹೇಶ್ ಮಾತನಾಡಿದರು.ಉದ್ಯಮಿ ಯು.ಎಸ್. ಶೇಖರ್, ಪಪಂ ಉಪಾಧ್ಯಕ್ಷ ಶಿವಕುಮಾರ್, ಕೆಎಂಎಫ್ ನಿರ್ದೇಶಕ ಎಸ್.ಸಿ. ಅಶೋಕ್, ಜೆಡಿಎಸ್ ಪಕ್ಷದ ಮುಖಂಡ ಕೃಷ್ಣನಾಯಕ,ಕೋಟೆ ಮಹಾಸಭಾ ಅಧ್ಯಕ್ಷ ರುದ್ರಪ್ಪ, ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಸದಾನಂದ ,ಮಾಜಿ ಜಿಲ್ಲಾಧ್ಯಕ್ಷ ಕಾನ್ಯ ಶಿವಮೂರ್ತಿ ಇದ್ದರು.