ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ ಪುಣ್ಯಸ್ಮರಣೆ

KannadaprabhaNewsNetwork |  
Published : Jan 30, 2026, 01:15 AM IST
ನಡೆದಾಡುವ ದೇವರ 7ನೇ ಪುಣ್ಯಸ್ಮರಣೆ: ಅರಸೀಕೆರೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಹಾಗೂ ಅನ್ನದಾಸೋಹ | Kannada Prabha

ಸಾರಾಂಶ

ತುಮಕೂರಿನ ಸಿದ್ಧಗಂಗಾ ಜಗದ್ಗುರುಗಳು ಇಂದು ದೈಹಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ, ಅವರು ಅನುಷ್ಠಾನಗೊಳಿಸಿದ ತ್ರಿವಿಧ ದಾಸೋಹ, ಮಾನವೀಯ ಸೇವೆ ಹಾಗೂ ಧಾರ್ಮಿಕ ಕಾರ್ಯಗಳು ಇಂದಿಗೂ ಸಮಾಜಕ್ಕೆ ದಿಕ್ಕು ತೋರಿಸುತ್ತಿವೆ. ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿದ್ದ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥವಾಗಿ ನಡೆಯುವ ಈ ಕಾರ್ಯಕ್ರಮದಲ್ಲಿ ಶ್ರೀಗಳ ಭಾವಚಿತ್ರಕ್ಕೆ ವಿವಿಧ ಮಠಾಧೀಶರು, ಜನಪ್ರತಿನಿಧಿಗಳು ಹಾಗೂ ಭಕ್ತವೃಂದದಿಂದ ಪುಷ್ಪಾರ್ಚನೆ ನೆರವೇರಲಿದೆ ಎಂದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳ 7ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಇದೇ ಜ.31ರ ಶನಿವಾರ ನಗರದ ಶ್ರೀ ಗುರು ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಧಾರ್ಮಿಕ ಕಾರ್ಯಕ್ರಮ ಹಾಗೂ ಅನ್ನದಾಸೋಹವನ್ನು ಆಯೋಜಿಸಲಾಗಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಸಿದ್ದೇಶ್ ಜೆ.ಆರ್. ತಿಳಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಮಕೂರಿನ ಸಿದ್ಧಗಂಗಾ ಜಗದ್ಗುರುಗಳು ಇಂದು ದೈಹಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ, ಅವರು ಅನುಷ್ಠಾನಗೊಳಿಸಿದ ತ್ರಿವಿಧ ದಾಸೋಹ, ಮಾನವೀಯ ಸೇವೆ ಹಾಗೂ ಧಾರ್ಮಿಕ ಕಾರ್ಯಗಳು ಇಂದಿಗೂ ಸಮಾಜಕ್ಕೆ ದಿಕ್ಕು ತೋರಿಸುತ್ತಿವೆ. ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿದ್ದ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥವಾಗಿ ನಡೆಯುವ ಈ ಕಾರ್ಯಕ್ರಮದಲ್ಲಿ ಶ್ರೀಗಳ ಭಾವಚಿತ್ರಕ್ಕೆ ವಿವಿಧ ಮಠಾಧೀಶರು, ಜನಪ್ರತಿನಿಧಿಗಳು ಹಾಗೂ ಭಕ್ತವೃಂದದಿಂದ ಪುಷ್ಪಾರ್ಚನೆ ನೆರವೇರಲಿದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಸನ ಜಿಲ್ಲಾಧ್ಯಕ್ಷ ನವಿಲೆ ಎನ್. ಪರಮೇಶ್ ವಹಿಸಲಿದ್ದಾರೆ. ದಿವ್ಯ ಸಾನ್ನಿಧ್ಯವನ್ನು ಯಳನಾಡು ಕಡೂರು ಮಾಡಾಳು ಶ್ರೀ ರುದ್ರಮುನಿ ಮಹಾಸ್ವಾಮಿಗಳು, ಅರಕಲಗೂಡು ದೊಡ್ಡ ಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಹಳೇಬೀಡು ಪುಷ್ಪಗಿರಿಯ ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿ, ತಣ್ಣೀರುಹಳ್ಳ ಶ್ರೀ ವಿಜಯಕುಮಾರ ಮಹಾಸ್ವಾಮಿ, ಕೋಳಗುಂದ ಕೇದಿಗೆ ಮಠದ ಶ್ರೀ ಜಯಚಂದ್ರಶೇಖರ ಮಹಾಸ್ವಾಮಿ, ದೊಡ್ಡ ಮೇಟಿಕುರ್ಕೆ ಶ್ರೀ ಶಶಿಶೇಖರ ಸಿದ್ಧಬಸವ ಸ್ವಾಮೀಜಿ, ಮಾರಗೊಂಡನಹಳ್ಳಿ ಶ್ರೀ ಅಭಿನವ ಬಸವಲಿಂಗ ಮಹಾಸ್ವಾಮಿ, ಮಾಡಾಳು ಶ್ರೀ ಅಭಿನವ ಶಿವಲಿಂಗಸ್ವಾಮಿ ವಹಿಸಲಿದ್ದಾರೆ.ಬೆಳಿಗ್ಗೆ 10.30ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ನಡೆಯುವ ಈ ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ 1.30 ಗಂಟೆಗೆ ಅನ್ನದಾಸೋಹವನ್ನು ಆಯೋಜಿಸಲಾಗಿದ್ದು, ಶ್ರೀ ಸಿದ್ಧಗಂಗಾ ಶಿವಕುಮಾರ ಸ್ವಾಮಿಗಳ ಅಪಾರ ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಿದ್ದೇಶ್ ಜೆ.ಆರ್‌. ಮನವಿ ಮಾಡಿದರು.ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಜಿಲ್ಲಾ ಯುವ ಘಟಕದ ಜಿಲ್ಲಾ ಕಾರ್ಯದರ್ಶಿ ನಿರಂಜನ್ ಬಿ.ಆರ್‌, ನಿರ್ದೇಶಕರಾದ ಪಂಚಾಕ್ಷರಿ ಡಿ.ಕೆ., ನವೀನ್ ಕೆ.ಎಲ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸ್ತೆಗೆ ಕಾಲಿಟ್ಟಿರೋ ಹುಷಾರ್‌, ಕಚ್ಲಿಕ್ಕೆ ಕಾಯ್ತಿವೆ ಬೀದಿ ನಾಯಿ
ನಗರದಲ್ಲಿ ಡ್ರಗ್ಸ್ ಮಾರಾಟಕ್ಕೆಯತ್ನಿಸಿದ ಮೂವರ ಬಂಧನ