
ಕನ್ನಡಪ್ರಭ ವಾರ್ತೆ. ತುಮಕೂರು
ನಗರದ ಶ್ರೀಸಿದ್ದಗಂಗಾ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಿಳಾ ಪದವಿ ಕಾಲೇಜಿನ ಎನ್.ಎಸ್.ಎಸ್., ಎನ್.ಸಿ.ಸಿ., ಕ್ರೀಡೆ, ಸಾಂಸ್ಕೃತಿಕ ಘಟಕ, ರೆಡ್ ಕ್ರಾಸ್, ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದ ಅವರು ಹೆಣ್ಣು ಮಕ್ಕಳ ಸಬಲೀಕರಣಕ್ಕೆ ಡಾ. ಶಿವಕುಮಾರಸ್ವಾಮೀಜಿಗಳ ಕಂಡ ಕನಸು ನನಸಾಗಿದೆ. ವಿದ್ಯಾರ್ಥಿ ದಿಸೆಯಲ್ಲಿ ಪದವಿ ಎಂಬುದು ಒಂದು ಮಹತ್ವದ ಘಟ್ಟ. ಇಲ್ಲಿ ನೀವು ವಿದ್ಯೆಗೆ ಕಲಿಯುಲು ನೀಡುವ ನಿರಂತರ ಪರಿಶ್ರಮ,ಗುರಿ ಮುಟ್ಟಲು ಆಯ್ಕೆ ಮಾಡಿಕೊಳ್ಳುವ ದಾರಿ ಎರಡು ಬಹಳ ಮುಖ್ಯವಾಗಿರುತ್ತದೆ.ಅದು ನಿಜ ಜೀವನದಲ್ಲಿ ಬರುವ ಅಡ್ಡಿ ಆತಂಕಗಳನ್ನು ಸಮರ್ಥವಾಗಿ ಎದುರಿಸಲು ಸಹಾಯಕಾರಿಯಾಗುತ್ತವೆ. ನಾವು ಆಯ್ಕೆ ಮಾಡಿಕೊಳ್ಳುವ ಕ್ಷೇತ್ರದ ಬಗ್ಗೆ ಸರಿಯಾದ ಜ್ಞಾನ ಇಲ್ಲದಿದ್ದರೆ ಬದುಕು ಕಟ್ಟಿಕೊಳ್ಳುವುದು ಕಷ್ಟ. ವಿಜ್ಞಾನ, ತಂತ್ರಜ್ಞಾನ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಯಾದರೂ ಬದಲಾವಣೆಗೆ ತಕ್ಕಂತೆ ನಾವು ಸಹ ಬದಲಾದಾಗ ಮಾತ್ರ ಇಂದಿನ ಯುಗದಲ್ಲಿ ಉಳಿಯಲು ಸಾಧ್ಯ ಎಂದು ನುಡಿದರು. ಗಾಯಕಿ ಶಶಿಕಲಾ ಸುನೀಲ್ ಮಾತನಾಡಿ, ಹೆಣ್ಣು ಎಂದರೆ ಆದಿ ಶಕ್ತಿಯ ಸ್ವರೂಪ. ಆಕೆಗೆ ಸರಿಯಾದ ಮಾರ್ಗದರ್ಶರನ ದೊರೆತರೆ ಅಸಾಧ್ಯವಾದುದ್ದನ್ನು ಸಾಧಿಸಬಲ್ಲಳು ಎಂಬುದಕ್ಕೆ ನಮ್ಮ ನಡುವೆಯೇ ಹಲವಾರು ಉದಾಹರಣೆಗಳಿವೆ. ಸಾಧನೆಗೆ ಅಡ್ಡದಾರಿಗಳಿಲ್ಲ. ದೌರ್ಬಲ್ಯಗಳನ್ನು ಮೆಟ್ಟಿನಿಂತರೆ, ಸಾಧನೆ ನಿಮ್ಮೆದುರು ನಿಲ್ಲುತ್ತದೆ ಎಂದರು.
ಪ್ಯಾರಾ ಬ್ಯಾಡ್ಮಿಂಟನ್ ಆಟಗಾರ ಪೂರ್ಣರಾವ್ ಮಾತನಾಡಿ, ಜೀವನದಲ್ಲಿ ನಾವು ಊಹಿಸಲಾರದ ಸವಾಲುಗಳು ನಮ್ಮ ಕಣ್ಣೆದುರು ಬರುತ್ತವೆ. ಆದರೆ ಅವುಗಳನ್ನು ಮೆಟ್ಟಿ ನಿಂತರೆ ನೀವು ಈ ಜಗತ್ತಿನಲ್ಲಿ ಉಳಿಯಲು ಸಾಧ್ಯ ಎಂದರು.ಸಿದ್ದಗಂಗಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಟಿ.ಕೆ.ನಂಜುಂಡಪ್ಪ ಮಾತನಾಡಿ, ಸಾಹಿತ್ಯ, ಸಂಗೀತ, ಕ್ರೀಡೆ ಎಲ್ಲವೂ, ಶಿಕ್ಷಣದಷ್ಟು ಮುಖ್ಯವಾದವು.ಪಠ್ಯಗಳು ಜ್ಞಾನ ನೀಡಿದರೆ, ಪಠ್ಯೇತರ ಚಟುವಟಿಕೆಗಳು ನಾಯಕತ್ವದ ಗುಣ ನೀಡುತ್ತದೆ ಎಂದರು.ಅಧ್ಯಕ್ಷತೆ ವಹಿಸಿದ್ದ ಸಿದ್ದಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಎಂ.ದಕ್ಷಿಣಮೂರ್ತಿ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಜಗದೀಶ್.ಎಂ., ಸಿದ್ದಗಂಗಾ ಪದವಿ ಕಾಲೇಜುಗಳ ಸಂಯೋಜಕ ಡಾ.ಡಿ.ಎನ್.ಯೋಗೀಶ್ವರಪ್ಪ ಮಾತನಾಡಿದರು.