ಭಿಕ್ಷುಕರನ್ನು ಮುಖ್ಯವಾಹಿನಿಗೆ ತರಲು ಯತ್ನಿಸಿ: ಪದ್ಮಾವತಿ

KannadaprabhaNewsNetwork |  
Published : Oct 24, 2025, 01:00 AM IST
23ಡಿಡಬ್ಲೂಡಿ9ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ. ಪದ್ಮಾವತಿ ಅಧ್ಯಕ್ಷತೆಯಲ್ಲಿ ಗುರುವಾರ ತಾಲೂಕು ಪಂಚಾಯತ ಸಭಾಂಗಣದಲ್ಲಿ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ಜರುಗಿತು. | Kannada Prabha

ಸಾರಾಂಶ

ಭಿಕ್ಷಾಟನೆ ಮಾಡುವವರು ಕಂಡುಬಂದಲ್ಲಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಅಧಿಕಾರಿಗಳು ಗಮನ ಹರಿಸಿ ಸ್ವಯಂ ಉದ್ಯೋಗ ಮಾಡಲು ಉತ್ತೇಜಿಸಬೇಕು. ಮಾಜಿ ದೇವದಾಸಿಯರ ಮರು ಸಮೀಕ್ಷೆ, ದೇವದಾಸಿಯರ ಮಕ್ಕಳು ಸಹ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸ್ವಾವಲಂಬನೆಯನ್ನು ಹೊಂದಬೇಕು.

ಧಾರವಾಡ:

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪದ್ಮಾವತಿ ಅಧ್ಯಕ್ಷತೆಯಲ್ಲಿ ಗುರುವಾರ ತಾಲೂಕು ಪಂಚಾಯಿತಿಯಲ್ಲಿ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ಜರುಗಿತು.

ಉದ್ಯೋಗಿನಿ ಯೋಜನೆಯಡಿಯಲ್ಲಿ ದೇವದಾಸಿರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಯಾರೇ ಸಾಲ ಪಡೆಯಲು ಬ್ಯಾಂಕ್‌ಗಳಿಗೆ ಬಂದಲ್ಲಿ ಮೊದಲು ಆದ್ಯತೆ ನೀಡಬೇಕು ಹಾಗೂ ಅರ್ಜಿ ಭರ್ತಿ ಮಾಡಲು ಅಧಿಕಾರಿಗಳು ಸಹಾಯ ಮಾಡಬೇಕು. ಯಾವುದೇ ಕಾರಣಕ್ಕೂ ಬ್ಯಾಂಕಿಗೆ ಅಲೆದಾಡದಂತೆ ಅನುಕೂಲ ಮಾಡಿಕೊಡಲು ಲೀಡ್ ಬ್ಯಾಂಕ್‌ ಮುಖ್ಯಸ್ಥರಿಗೆ ಸೂಚಿಸಿದರು.

ಭಿಕ್ಷಾಟನೆ ಮಾಡುವವರು ಕಂಡುಬಂದಲ್ಲಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಅಧಿಕಾರಿಗಳು ಗಮನ ಹರಿಸಿ ಸ್ವಯಂ ಉದ್ಯೋಗ ಮಾಡಲು ಉತ್ತೇಜಿಸಬೇಕು. ಮಾಜಿ ದೇವದಾಸಿಯರ ಮರು ಸಮೀಕ್ಷೆ, ದೇವದಾಸಿಯರ ಮಕ್ಕಳು ಸಹ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸ್ವಾವಲಂಬನೆಯನ್ನು ಹೊಂದಬೇಕು. ಅದಕ್ಕಾಗಿ ಅಂತಹವರನ್ನು ಗುರುತಿಸಿ ಅವರಿಗೆ ಸರ್ಕಾರದ ಯೋಜನೆ ತಲುಪಿಸಬೇಕು ಎಂಬ ಉದ್ದೇಶದಿಂದ ಸಮೀಕ್ಷೆ ಮಾಡಲಾಗುತ್ತಿದೆ ಎಂದು ಹೇಳಿದರು.

ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಯಲ್ಲಿ ಜಿಲ್ಲೆ ನಿಧಾನಗತಿಯಲ್ಲಿ ಸಾಗುತ್ತಿದೆ. ಅಧಿಕಾರಿಗಳು, ಎನ್‌ಜಿಒ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಆದಷ್ಟು ಬೇಗನೆ ಸಮೀಕ್ಷೆ ಪೂರ್ಣಗೊಳಿಸಬೇಕೆಂದು ತಿಳಿಸಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಡಾ. ಎಚ್.ಎಚ್. ಕುಕನೂರ ಸ್ವಾಗತಿಸಿದರು. ಅಭಿವೃದ್ಧಿ ನಿರೀಕ್ಷಕಿ ನಂದಿನಿ ಕುಂಬಾರ ವಂದಿಸಿದರು. ಸಭೆಯಲ್ಲಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕಿ ಅಕ್ಕಮಹಾದೇವಿ, ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕ ಬಸವರಾಜ ಗಡಾದ್, ಡಾ. ಕಮಲಾ ಬೈಲೂರ, ವಿಜಯಲಕ್ಷ್ಮಿ ಪಾಟೀಲ, ವಿವಿಧ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು, ದೇವದಾಸಿಯರ ಪ್ರತಿನಿಧಿಗಳು, ಲಿಂಗತ್ವ ಅಲ್ಪಸಂಖ್ಯಾತರ ಪ್ರತಿನಿಧಿಗಳಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!