ಉತ್ತಮ ಬದುಕು ರೂಪಿಸಿಕೊಳ್ಳುವ ಪ್ರಯತ್ನ ಆಗಲಿ: ಶಾಸಕ ಟಿ.ರಘುಮೂರ್ತಿ

KannadaprabhaNewsNetwork |  
Published : Aug 27, 2024, 01:32 AM IST
ಪೋಟೋ೨೬ಸಿಎಲ್‌ಕೆ೦೨ ಚಳ್ಳಕೆರೆ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕೃಷ್ಣಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಟಿ.ರಘುಮೂರ್ತಿಯವರನ್ನು ಸಮುದಾಯದಿಂದ ಸನ್ಮಾನಿಸಲಾಯಿತು. | Kannada Prabha

ಸಾರಾಂಶ

Try to create a better life: MLA T. Raghumurthy

-ಕೃಷ್ಣಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಟಿ.ರಘುಮೂರ್ತಿ ಅವರಿಗೆ ಸನ್ಮಾನ

-------

ಕನ್ನಡಪ್ರಭವಾರ್ತೆ ಚಳ್ಳಕೆರೆ

ಕಷ್ಟಗಳು ಬಂದಾಗ ದೇವರ ಮೊರೆಹೋಗಿ ಪರಿಹಾರ ಹುಡುಕಲು ಯತ್ನಿಸುತ್ತೇವೆ. ಇದು ಸಾವಿರಾರು ವರ್ಷಗಳಿಂದ ಬೆಳೆದು ಬಂದ ಪದ್ದತಿ. ವಿಶೇಷವಾಗಿ ಭಗವಾನ್ ಶ್ರೀಕೃಷ್ಣನ ಕೃಪಾಕಟಾಕ್ಷವನ್ನು ಪಡೆದು ಕಷ್ಟಗಳಿಂದ ವಿಮುಕ್ತಿ ಪಡೆಯುವ ಹಾದಿಯತ್ತ ಮುನ್ನಡೆಯೋಣ ಎಂದು ಶಾಸಕ, ಸಣ್ಣಕೈಗಾರಿಕೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಮ್ಮಿಕೊಂಡಿದ್ದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮಕ್ಕೆ ಕೃಷ್ಣ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ದಯಾಮಯಿಯಾದ ಶ್ರೀಕೃಷ್ಣ ಎಲ್ಲರಿಗೂ ಸುಖ, ಶಾಂತಿ, ನೆಮ್ಮದಿ ಬಾಳನ್ನು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

ತಹಶೀಲ್ದಾರ್ ರೇಹಾನ್ ಪಾಷ, ಪೌರಾಯುಕ್ತ ಜಗರೆಡ್ಡಿ, ಡಿವೈಎಸ್ಪಿ ಟಿ.ಬಿ.ರಾಜಣ್ಣ, ಪಶುವೈದ್ಯಾಧಿಕಾರಿ ರೇವಣ್ಣ, ಕೃಷಿ ಅಧಿಕಾರಿ ಜೆ.ಅಶೋಕ್, ಬಿಇಒ ಕೆ.ಎಸ್.ಸುರೇಶ್, ಶಿರಸ್ತೇದಾರ ಸದಾಶಿವಪ್ಪ ಗಿರೀಶ್, ನಗರಸಭಾ ಸದಸ್ಯರಾದ ಎಂ.ಸಾವಿತ್ರಮ್ಮ, ರಮೇಶ್‌ಗೌಡ, ಎಂ.ಜೆ.ರಾಘವೇಂದ್ರ, ಕೆ.ವೀರಭದ್ರಯ್ಯ, ನಾಮಿನಿ ಸದಸ್ಯ ಆರ್.ವೀರಭದ್ರಪ್ಪ, ಕಾಂಗ್ರೆಸ್ ಮುಖಂಡರಾದ ಟಿ.ರವಿಕುಮಾರ್, ಶಶಿಧರ, ಸಿರಿಯಪ್ಪ, ಮೂಡಲಗಿರಿಯಪ್ಪ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ಮಂಜಣ್ಣ ಉಪಸ್ಥಿತರಿದ್ದರು.

------

ಪೋಟೋ: ೨೬ಸಿಎಲ್‌ಕೆ೨ ಚಳ್ಳಕೆರೆ ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಮ್ಮಿಕೊಂಡಿದ್ದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಶಾಸಕ ಟಿ.ರಘುಮೂರ್ತಿ ಮಾತನಾಡಿದರು.

----

ಪೋಟೋ:೨೬ಸಿಎಲ್‌ಕೆ೦೨ ಚಳ್ಳಕೆರೆ ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕೃಷ್ಣಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಟಿ.ರಘುಮೂರ್ತಿ ಅವರನ್ನು ಸಮುದಾಯದಿಂದ ಸನ್ಮಾನಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿ, ಅನುದಾನ ಕಡಿತ ವಿರುದ್ಧ ಇಂದು ರಾಜ್ಯ ಸಂಪುಟದಲ್ಲಿ ನಿರ್ಣಯ?
ಹಸ್ತಕ್ಷೇಪ ನಿಲ್ಲಿಸಿ ಎಂದ ಸಿದ್ದು, ಡಿಕೆ ಕೇರಳ ಸಿಎಂ ತಿರುಗೇಟು