ಕನ್ನಡಪ್ರಭ ವಾರ್ತೆ ಹನೂರು ಈ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ರಾಜ್ಯದಲ್ಲೇ ಪ್ರಥಮ ಸ್ಥಾನವನ್ನು ಗಳಿಸುವ ನಿಟ್ಟಿನಲ್ಲಿ ಶ್ರಮಿಸಬೇಕೆಂದು ಶಾಸಕ ಎಂ.ಆರ್.ಮಂಜುನಾಥ್ ಸಲಹೆ ನೀಡಿದರು. ಪಟ್ಟಣದ ಜಿ.ವಿ.ಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಹನೂರು ತಾಲೂಕು ವತಿಯಿಂದ 2023-2024ನೇ ಸಾಲಿನ ಎಸ್ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಆಯೋಜಿಸಲಾಗಿದ್ದ ಭರವಸೆ ತುಂಬುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಾರ್ಷಿಕ ಪರೀಕ್ಷೆಗಳಿಗೆ ಇನ್ನು ಕೆಲವೇ ದಿನಗಳು ಉಳಿದಿದ್ದು ವಿದ್ಯಾರ್ಥಿಗಳು ಈಗಿನಿಂದಲೇ ಯಾವ್ಯಾವ ವಿಷಯಕ್ಕೆ ಎಷ್ಟು ಸಮಯ ಮತ್ತು ಆದ್ಯತೆಯನ್ನು ನೀಡಬೇಕೆಂದು ಮನಗಂಡು ಉತ್ತಮ ಫಲಿತಾಂಶಕ್ಕಾಗಿ ಕಾರ್ಯಪ್ರವೃತ್ತರಾಗಬೇಕು. ವಿದ್ಯಾರ್ಥಿಗಳು ತಂದೆ ತಾಯಿಗಳ ತ್ಯಾಗ, ಶಿಕ್ಷಕರ ಶ್ರಮ ಮತ್ತು ಮಾರ್ಗದರ್ಶನವನ್ನು ಅರಿತು ನಿರಂತರ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು. ನಗರ ಪ್ರದೇಶಗಳಿಗೆ ಹೋಲಿಕೆ ಮಾಡಿದರೆ ಉತ್ತಮವಾದ ಪರಿಸರ ವಾತಾವರಣವನ್ನು ಹೊಂದಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪ್ರಕೃತಿಯನ್ನೇ ಶಕ್ತಿಯನ್ನಾಗಿಸಿ ಮುನ್ನುಗ್ಗಬೇಕು. ಬರೆದಿರುವುದನ್ನು ಓದಿ, ಓದಿದ್ದನ್ನು ಮನನ ಮಾಡಿಕೊಂಡು ಉತ್ತಮ ರೀತಿಯಲ್ಲಿ ಪರೀಕ್ಷೆಯನ್ನು ಎದುರಿಸಬೇಕು. ನಮ್ಮ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಮತ್ತು ಗಣಿತ ವಿಷಯಗಳಲ್ಲಿ ಪ್ರಬುದ್ಧತೆ ಸಾಧಿಸುವ ನಿಟ್ಟಿನಲ್ಲಿ ಕಾರ್ಯಗಾರಗಳನ್ನು ಕೈಗೊಳ್ಳಬೇಕಾದ ಅವಶ್ಯಕತೆ ಇದೆ. ನನ್ನ ಮೊದಲ ಆದ್ಯತೆ ಶಿಕ್ಷಣ, ಆರೋಗ್ಯ, ರೈತ ಆಗಿದ್ದು, ಶಿಕ್ಷಣ ಇಲಾಖೆಗೆ ಬೇಕಾದ ಸಹಕಾರವನ್ನು ನಾನು ಸದಾ ಒದಗಿಸುತ್ತೇನೆ ಎಂದರು.ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ರಾಮಚಂದ್ರರಾಜೇ ಅರಸ್ ಮಾತನಾಡಿ, ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳು ವಿದ್ಯಾರ್ಥಿ ಜೀವನದ ತಿರುವಿನ ಘಟ್ಟವಾಗಿದ್ದು, ಅತ್ಯಂತ ಶ್ರದ್ಧೆ ಮತ್ತು ನಿರಂತರ ಅಧ್ಯಯನದಿಂದ ತಿರುವು ಪಡೆದುಕೊಳ್ಳಬೇಕು. ಹೀಗಾಗಲೇ ಶೇ.95 ರಷ್ಟು ಭಾಗ ಪಠ್ಯಗಳು ಮುಗಿದಿವೆ. ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬಲು ಮೂರು ಹಂತದಲ್ಲಿ ಪರೀಕ್ಷೆಗಳನ್ನು ನೀಡಲಾಗಿದೆ. ವಿದ್ಯಾರ್ಥಿಗಳು ಮೂರು ಮತ್ತು ಅಂತಿಮ ವಾರ್ಷಿಕ ಪರೀಕ್ಷೆಗೆ ಕಾಯದೆ ಮೊದಲ ಹಂತದಲ್ಲಿ ಯಶಸ್ಸನ್ನು ಸಾಧಿಸಬೇಕು. ನಿರಂತರ ಅಧ್ಯಯನ ಉತ್ತಮ ಬರವಣಿಗೆಗೆ ಹೆಚ್ಚು ಗಮನ ನೀಡಬೇಕು. ಶಿಕ್ಷಣದ ಜೊತೆಗೆ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಗಮನಹರಿಸಬೇಕು ಎಂದರು.ಶಾಸಕರ ಕಾರ್ಯವೈಖರಿಗೆ ಮೆಚ್ಚುಗೆ: