ಕನ್ನಡಪ್ರಭ ವಾರ್ತೆ ಸಿರಿಗೆರೆ
ಇಲ್ಲಿಗೆ ಸಮೀಪದ ಭೀಮಸಮುದ್ರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಮಕ್ಕಳ ಗ್ರಾಮಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಯಲ್ಲಿಯೂ ಅಬ್ದುಲ್ ಕಲಾಂ ಅವರಂತಹ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯವಿದೆ. ಅಂತಹ ಸಾಧನೆ ಮಾಡಲು ಮಕ್ಕಳು ಮುಂದಾಗಬೇಕು ಎಂದರು.
ಮುಖ್ಯ ಶಿಕ್ಷಕಿ ಸೌಮ್ಯ ರೆಡ್ಡಿ ಮಾತನಾಡಿ, ಶಾಲಾ ಕಟ್ಟಡಕ್ಕೆ ಕಾಂಪೌಂಡ್ ಇಲ್ಲದ ಕಾರಣ ಗ್ರಾಮದ ದನಕರುಗಳು ಆವರಣಕ್ಕೆ ನುಗ್ಗಿ ಶಾಲಾವನ ಹಾಳುಮಾಡುತ್ತವೆ. ರಾತ್ರಿವೇಳೆ ಕೆಲವು ದುಷ್ಕರ್ಮಿಗಳು ಅನೈತಿಕ ಚಟುವಟಿಕೆಗಳ ತಾಣವನ್ನಾಗಿ ಮಾಡಿಕೊಂಡಿದ್ದಾರೆ. ಆದ್ದರಿಂದ ಶಾಲೆಗೆ ಕಾಂಪೌಂಡ್ ನಿರ್ಮಾಣ ಮಾಡಿಕೊಡಬೇಕು. ಮಕ್ಕಳ ಮಧ್ಯಾಹ್ನದ ಊಟಕ್ಕೆ ಅಗತ್ಯವಾದ ನೀರು ಹಾಗೂ ಶೌಚಾಲಯ ವ್ಯವಸ್ಥೆ ಮಾಡುವುದು ಅಗತ್ಯ ಎಂದರು.ಗ್ರಾಪಂ ಉಪಾಧ್ಯಕ್ಷ ಉಮೇಶ್ ಮಾತನಾಡಿ, ಶಾಲೆ ಆವರಣದಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತವೆ ಎಂದು ಮುಖ್ಯ ಶಿಕ್ಷಕರು ತಿಳಿಸಿದ್ದಾರೆ. ಈ ವಿಚಾರವಾಗಿ ಉದಾಸೀನ ಮಾಡದೇ ಪೊಲೀಸ್ ಇಲಾಖೆ ಮೂಲಕ ಅಗತ್ಯ ಕ್ರಮ ತೆಗೆದುಕೊಳ್ಳಲು ಮುಂದಾಗಬೇಕು. ಶಾಲೆಯಲ್ಲಿ ಮಕ್ಕಳಿಗೆ ನೀರು, ಕಾಂಪೌಂಡ್ ಮತ್ತು ಶಾಲಾ ಆವರಣದ ಸ್ವಚ್ಛತೆ ಸಮಸ್ಯೆಗಳಿಗೆ ಗ್ರಾಪಂ ವತಿಯಿಂದ ಪರಿಹಾರ ಮಾಡಿಕೊಡಲಾಗುವುದು ಎಂದರು.