ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಚಿತ್ರದುರ್ಗ ತಾಲೂಕಿನ ಹಿರೇಗುಂಟನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಜಾನ್ ಮೈನ್ಸ್ ಆಫ್ ಆರ್.ಪ್ರವೀಣ್ ಚಂದ್ರ ವಲಯದಲ್ಲಿ ಆರೋಗ್ಯ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದ ಉಚಿತ ಕ್ಷಯರೋಗ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಕಾರ್ಮಿಕರು ಹಾಗೂ ಸಿಬ್ಬಂದಿಗೆ ಜಾಗೃತಿ ಮೂಡಿಸಿ ಮಾತನಾಡಿದರು.
ಸಿರಿಗೆರೆಯ ಹೆರಿಗೆ ಮತ್ತು ಸ್ತ್ರೀರೋಗ ತಜ್ಞರಾದ ಡಾ.ಎಸ್.ಪವಿತ್ರ ಮಾತನಾಡಿ, ಪೋಷಕಾಂಶಯುಕ್ತ ಆಹಾರ ಸೇವನೆ ಮಾಡುವ ಮೂಲಕ ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ರೋಗ ಬಂದ ಮೇಲೆ ಕಷ್ಟಪಡುವುದಕ್ಕಿಂತ, ಅದು ಬಾರದಂತೆ ಮುನ್ನೆಚ್ಚರಿಕೆ ವಹಿಸುವುದು ಬಹು ಮುಖ್ಯ. ನಮ್ಮ ಆರೋಗ್ಯ ನಮ್ಮ ಕೈಯಲ್ಲೇ ಇದೆ. ಈ ಹಿಂದೆ ಕ್ಷಯರೋಗಿಗಳಿಗೆ ಪೌಷ್ಟಿಕಾಂಶದ ಆಹಾರ ಕಿಟ್‍ಗಳನ್ನು ಒದಗಿಸಿದ ಮಾದರಿಯಲ್ಲೇ, ಮುಂದಿನ ದಿನಗಳಲ್ಲೂ ತಾಲೂಕಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಪೌಷ್ಟಿಕಾಂಶದ ಕಿಟ್‍ಗಳನ್ನು ಒದಗಿಸಲಾಗುವುದೆಂದರು.ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಮಾತನಾಡಿ, ಜನರು ತಮ್ಮ ಜೀವನಶೈಲಿಯನ್ನು ಬದಲಾಯಿಸಿಕೊಳ್ಳಬೇಕು. ಜಂಕ್ ಫುಡ್, ತಂಪು ಪಾನೀಯಗಳು ಮತ್ತು ಸಂಸ್ಕರಿಸಿದ ಆಹಾರ ಸೇವನೆಗೆ ಕಡಿವಾಣ ಹಾಕಬೇಕು. ಪೌಷ್ಟಿಕಾಂಶಯುಕ್ತ ಆಹಾರ ಪದಾರ್ಥಗಳನ್ನು ಸೇವಿಸುವ ಮೂಲಕ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಂಡು ಉತ್ತಮ ಆರೋಗ್ಯ ಹೊಂದಬೇಕು ಎಂದರು.