25ರಂದು ಕ್ಷಯರೋಗ ದಿನಾಚರಣೆ: ಡಾ.ಮುರಳೀಧರ

KannadaprabhaNewsNetwork |  
Published : Mar 22, 2025, 02:03 AM IST
21ಕೆಡಿವಿಜಿ62-ದಾವಣಗೆರೆಯಲ್ಲಿ ಶುಕ್ರವಾರ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಪಿ.ಡಿ.ಮುರುಳೀಧರ, ಡಿಎಚ್‌ಓ ಡಾ.ಎಸ್.ಷಣ್ಮುಖಪ್ಪ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ನಗರದ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದ ಆಶ್ರಯದಲ್ಲಿ ಮಾ.24ರಂದು ವಿಶ್ವ ಕ್ಷಯರೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಪಿ.ಡಿ. ಮುರಳೀಧರ ಹೇಳಿದ್ದಾರೆ.

- ಜಿಲ್ಲೆಯಲ್ಲಿ 2188 ಟಿಬಿ ಕೇಸ್ ಪತ್ತೆ, 1841 ಗುಣಮುಖ

- - - ಕನ್ನಡಪ್ರಭ ವಾರ್ತೆ ದಾವಣಗೆರೆ

ನಗರದ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದ ಆಶ್ರಯದಲ್ಲಿ ಮಾ.24ರಂದು ವಿಶ್ವ ಕ್ಷಯರೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಪಿ.ಡಿ. ಮುರಳೀಧರ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಜಿಪಂ ಸಿಇಒ ಸುರೇಶ ಬಿ.ಇಟ್ನಾಳ್, ಜಿಲ್ಲಾ ಎಸ್‌ಪಿ ಉಮಾ ಪ್ರಶಾಂತ ಮತ್ತಿತರ ಗಣ್ಯರು, ಅತಿಥಿಗಳು ಭಾಗವಹಿಸುವರು ಎಂದರು.

ಜಿಲ್ಲೆಯ 194 ಗ್ರಾಪಂಗಳ ಪೈಕಿ 40 ಗ್ರಾಪಂಗಳನ್ನು ಸಮಾರಂಭದಲ್ಲಿ ಟಿ.ಬಿ.ಮುಕ್ತ ಗ್ರಾಮಗಳೆಂದು ಘೋಷಿಸಲಾಗುವುದು. ದೇಶದಲ್ಲಿ ಕ್ಷಯರೋಗವು ವಯಸ್ಕರಲ್ಲಿ ಮರಣವನ್ನುಂಟು ಮಾಡುವ ಗಂಭೀರ ಕಾಯಿಲೆಗಳಲ್ಲಿ ಮೊದಲ ಸ್ಥಾನದಲ್ಲಿದೆ. ಪ್ರತಿ 5 ನಿಮಿಷಕ್ಕೆ ಇಬ್ಬರಂತೆ ಕ್ಷಯರೋಗದಿಂದ ಸಾವನ್ನಪ್ಪುತ್ತಿದ್ದಾರೆ. 2025ನೇ ಇಸ್ವಿಗೆ ಭಾರತವನ್ನು ಕ್ಷಯಮುಕ್ತವಾಗಿಸಲು ಆರೋಗ್ಯ ಇಲಾಖೆ ಸಂಕಲ್ಪ ಮಾಡಿದೆ. ಈ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ವಿವರಿಸಿದರು.

ಜಿಲ್ಲೆಯಲ್ಲಿ 2024ರಲ್ಲಿ ಒಟ್ಟು 2188 ಕ್ಷಯರೋಗ ಪ್ರಕರಣ ಪತ್ತೆಯಾಗಿವೆ. ಚನ್ನಗಿರಿ ತಾಲೂಕಿನಲ್ಲಿ 317, ದಾವಣಗೆರೆ ಗ್ರಾಮಾಂತರ 316, ದಾವಣಗೆರೆ ನಗರ 878, ಹರಿಹರ 277, ಹೊನ್ನಾಳಿ 188, ಜಗಳೂರಿನಲ್ಲಿ 212 ಪ್ರಕರಣ ಪತ್ತೆಯಾಗಿವೆ. ಒಟ್ಟು 1841 ಪ್ರಕರಣ ಗುಣಪಡಿಸಿದ್ದು, ಮರಣ ಪ್ರಮಾಣ ಶೇ.15ರಿಂದ ಶೇ.9ಕ್ಕೆ ಇಳಿದಿದೆ ಎಂದು ಡಾ.ಮುರುಳೀಧರ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಷಣ್ಮುಖಪ್ಪ ಇದ್ದರು.

- - -

-21ಕೆಡಿವಿಜಿ62:

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ