ಕ್ಷಯ ಗುಣವಾಗಬಲ್ಲ ರೋಗ: ಜಿಲ್ಲಾಧಿಕಾರಿ

KannadaprabhaNewsNetwork |  
Published : Mar 25, 2025, 12:51 AM IST
ಕ್ಯಾಪ್ಷನ24ಕೆಡಿವಿಜಿ42 ದಾವಣಗೆರೆಯಲ್ಲಿ ನಡೆದ ವಿಶ್ವ ಕ್ಷಯ ರೋಗ ದಿನ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಟಿಬಿ, ಕ್ಷಯರೋಗ ಎಂದಾಕ್ಷಣ ಹೆದರುವ ಅವಶ್ಯಕತೆ ಇಲ್ಲ. ಬೇರೆ ರೋಗಗಳಂತೆ ಕ್ಷಯ ಕೂಡ ಚಿಕಿತ್ಸೆ ಮೂಲಕ ಗುಣಪಡಿಸಬಹುದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದರು.

- ಕುವೆಂಪು ಕನ್ನಡ ಭವನದಲ್ಲಿ ''''ವಿಶ್ವ ಕ್ಷಯ ರೋಗ ದಿನ'''' ಕಾರ್ಯಕ್ರಮ

- - - ಕನ್ನಡಪ್ರಭ ವಾರ್ತೆ ದಾವಣಗೆರೆ ಟಿಬಿ, ಕ್ಷಯರೋಗ ಎಂದಾಕ್ಷಣ ಹೆದರುವ ಅವಶ್ಯಕತೆ ಇಲ್ಲ. ಬೇರೆ ರೋಗಗಳಂತೆ ಕ್ಷಯ ಕೂಡ ಚಿಕಿತ್ಸೆ ಮೂಲಕ ಗುಣಪಡಿಸಬಹುದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದರು.

ನಗರದ ಕುವೆಂಪು ಕನ್ನಡ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕ್ಷಯರೋಗ ನಿರ್ಮೂಲನ ಕೇಂದ್ರದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ''''ವಿಶ್ವ ಕ್ಷಯ ರೋಗ ದಿನ'''' ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದಿನ ದಿನಗಳಲ್ಲಿ ಕ್ಷಯರೋಗಕ್ಕೆ ತುತ್ತಾದವರನ್ನು ನೋಡುವ ರೀತಿಯೇ ಬೇರೆ ಇತ್ತು, ಆದರೆ ಪರಿಸ್ಥಿತಿ ಈಗ ಬದಲಾಗಿದೆ. ವೈದ್ಯಕೀಯ ಕ್ಷೇತ್ರ ಬೆಳೆದಿದ್ದು, ಸುಧಾರಿತ ಔಷಧಿಗಳು, ಲಸಿಕೆಗಳು ಲಭ್ಯವಿದೆ. ಜನರಲ್ಲಿ ಸಾಕಷ್ಟು ಜಾಗೃತಿ ಮೂಡಿದೆ. ರೋಗ ಲಕ್ಷಣ ಕಂಡ ಕೂಡಲೇ ವೈದ್ಯರನ್ನು ಸಂಪರ್ಕಿಸಿ, ಸೂಕ್ತ ಹಾಗೂ ನಿಯಮಿತ ಚಿಕಿತ್ಸೆ ಪಡೆದಲ್ಲಿ ಕ್ಷಯರೋಗದಿಂದ ಸಂಪೂರ್ಣ ಗುಣಮುಖರಾಗಬಹುದು ಎಂದು ಹೇಳಿದರು.

ಜಿಪಂ ಸಿಇಒ ಸುರೇಶ ಬಿ. ಇಟ್ನಾಳ್ ಮಾತನಾಡಿ, ಕ್ಷಯರೋಗ ನಿಮೂರ್ಲನೆ ಹಳ್ಳಿಗಳಿಂದ ಆಗಬೇಕು. ಈ ದಿನ ಜಿಲ್ಲೆಯ 40 ಗ್ರಾಮ ಪಂಚಾಯಿತಿಗಳು ಕ್ಷಯಮುಕ್ತ ಗ್ರಾಮ ಪಂಚಾಯಿತಿಗಳಾಗಿವೆ. ಇದಕ್ಕೆ ಶ್ರಮ ವಹಿಸಿದ ಗ್ರಾಪಂ ಸದಸ್ಯರು, ಪಿಡಿಒ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಪಿ.ಡಿ. ಮುರಳೀಧರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷಯ ಮುಕ್ತ 40 ಗ್ರಾಪಂ ಅಧ್ಯಕ್ಷರು, ಪಿಡಿಒ ಹಾಗೂ ವೈದ್ಯಾಧಿಕಾರಿಗಳನ್ನು ವೇದಿಕೆಗೆ ಆಹ್ವಾನಿಸಿ, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಡಿಎಚ್‌ಒ ಡಾ. ಎಸ್.ಷಣ್ಮುಖಪ್ಪ, ಜಿಲ್ಲಾ ಸರ್ಜನ್ ಡಾ. ಎಂ.ಬಿ. ನಾಗೇಂದ್ರಪ್ಪ, ಡಾ.ಅಸ್ಮಾ ಬಾನು, ಡಾ. ಎಸ್.ಪಿ.ಮಧು, ಡಾ.ಯೋಗೇಂದ್ರ ಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಜಿ.ಡಿ.ರಾಘವನ್, ಡಾ. ಎಂ.ಕೆ.ರುದ್ರಸ್ವಾಮಿ, ಡಾ.ಸುರೇಶ್ ಬಾರ್ಕಿ ಇತರರು ಇದ್ದರು.

- - - -24ಕೆಡಿವಿಜಿ42:

ದಾವಣಗೆರೆಯಲ್ಲಿ ನಡೆದ ವಿಶ್ವ ಕ್ಷಯರೋಗ ದಿನ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಉದ್ಘಾಟಿಸಿದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ