ಯುವ ಜನತೆಗೆ ತುಳು ಪ್ರೀತಿ ಮೂಡಿಸಿ : ರೂಪಕಲಾ ಆಳ್ವ

KannadaprabhaNewsNetwork |  
Published : Jul 24, 2026, 01:45 AM IST
ರೂಪಕಲಾ ಆಳ್ವ ಮಾತನಾಡುತ್ತಿರುವುದು  | Kannada Prabha

ಸಾರಾಂಶ

ತುಳು ಸಾಹಿತ್ಯ ಅಕಾಡೆಮಿ ಹಾಗೂ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ತುಳು ವಿಭಾಗದ ಸಹಯೋಗದಲ್ಲಿ ನಡೆದ ‘ಅಕಾಡೆಮಿಡ್ ಒಂಜಿ ದಿನ ಬಲೆ’ ತುಳು ಓದುಗ ಸರಣಿಯ 15ನೇ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಂಗಳೂರು: ಮುಂದಿನ ತಲೆಮಾರಿಗೆ ತುಳುವನ್ನು ದಾಟಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ತುಳು ಭಾಷೆಯ ಮೇಲೆ ಪ್ರೀತಿ ಮೂಡಿಸುವ ಹಾಗೂ ತುಳುವಿನ ಜ್ಞಾನವನ್ನು ಬಿತ್ತುವ ಕೆಲಸ ನಡೆಯಬೇಕಾಗಿದೆ ಎಂದು ಲೇಖಕಿ ಹಾಗೂ ತುಳು ಅಕಾಡೆಮಿ ಮಾಜಿ ಸದಸ್ಯೆ ರೂಪಕಲಾ ಆಳ್ವ ಅವರು ಹೇಳಿದರು.ತುಳು ಸಾಹಿತ್ಯ ಅಕಾಡೆಮಿ ಹಾಗೂ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ತುಳು ವಿಭಾಗದ ಸಹಯೋಗದಲ್ಲಿ ನಡೆದ ‘ಅಕಾಡೆಮಿಡ್ ಒಂಜಿ ದಿನ ಬಲೆ’ ತುಳು ಓದುಗ ಸರಣಿಯ 15ನೇ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಟ್ರಸ್ಟಿ ವೇಣಿ ಮರೋಳಿ ಮಾತನಾಡಿ, ತಾವು 30 ವರ್ಷಗಳ ಕಾಲ ಗಲ್ಫ್ ದೇಶದಲ್ಲಿ ಇದ್ದಂತ ಸಂದರ್ಭದಲ್ಲಿ ಸಕ್ರಿಯವಾಗಿ ತುಳು ಕಾರ್ಯಕ್ರಮವನ್ನು ನಡೆಸಿದ ಬಗ್ಗೆ ನೆನಪಿಸಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, ಓದುವ ಸಲುವಾಗಿ ನಡೆಯುವ ಈ ವಿಶಿಷ್ಟ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಂಭ್ರಮದಿಂದ ಭಾಗವಹಿಸುತ್ತಾರೆ ಹಾಗೂ ಆಸಕ್ತಿಯಿಂದ ಓದುತ್ತಾರೆ ಎಂದರು.

ಸಂತ ಅಲೋಶಿಯಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಪ್ರಶಾಂತಿ ಶೆಟ್ಟಿ ಇರುವೈಲು ಶುಭ ಕೋರಿ ಮಾತನಾಡಿದರು.

ವಿದ್ಯಾರ್ಥಿ ಸಂಚಾಲಕರಾದ ದಶ್ವಿತ್ ಕೋಟ್ಯಾನ್, ಪ್ರಸ್ತುತಿ ಶೆಟ್ಟಿ ಇದ್ದರು.

ಸಂಜೆಯ ಸಮಾರೋಪದಲ್ಲಿ ವಿದ್ಯಾರ್ಥಿಗಳು ತಾವು ಓದಿದ ಪುಸ್ತಕದ ಬಗ್ಗೆ ವಿಚಾರ ವಿನಿಮಯ ನಡೆಸಿದರು. ತುಳು ಅಕಾಡೆಮಿ ಸದಸ್ಯ ಸಂಚಾಲಕ ಬೂಬ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿಮ್ಮಲ್ಲಿ ಧಮ್ ಇದ್ದರೆ ನನ್ನೊಂದಿಗೆ ನೇರವಾಗಿ ಹೋರಾಡಿ: ಮುಶ್ರೀಫ್‌
ಎಸ್‌ಐಆರ್; 1,52,389 ಗಣತಿ ನಮೂನೆಗಳ ಡಿಜಿಟೈಜೇಷನ್