ಜಯಕಿರಣ ಫಿಲಂಸ್ ಲಾಂಛನದಲ್ಲಿ ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಕೆ. ಸೂರಜ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾಗಿರುವ ‘ನಾನ್ ವೆಜ್’ ತುಳು ಸಿನಿಮಾ ಭಾರತ್ ಸಿನಿಮಾಸ್‌ನಲ್ಲಿ ಶುಕ್ರವಾರ ಬಿಡುಗಡೆ
ಮಂಗಳೂರು: ಜಯಕಿರಣ ಫಿಲಂಸ್ ಲಾಂಛನದಲ್ಲಿ ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಕೆ. ಸೂರಜ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾಗಿರುವ ‘ನಾನ್ ವೆಜ್’ ತುಳು ಸಿನಿಮಾ ಭಾರತ್ ಸಿನಿಮಾಸ್‌ನಲ್ಲಿ ಶುಕ್ರವಾರ ಬಿಡುಗಡೆಗೊಂಡಿತು.
ದೀಪ ಬೆಳಗಿಸಿ ಮಾತನಾಡಿದ ಹಿರಿಯ ವಕೀಲ ಮಯೂರಕೀರ್ತಿ ಅವರು, ನನಗೆ ಸಿನಿಮಾ ಬಿಡುಗಡೆಗೆ ಅವಕಾಶ ನೀಡಿರುವುದು ಒಬ್ಬ ನೈಜ ತುಳು ಸಿನಿಮಾ ಪ್ರೇಕ್ಷಕನಿಗೆ ಸಂದ ದೊಡ್ಡ ಗೌರವ. ನಾನು ಬಹುತೇಕ ಎಲ್ಲ ತುಳು ಸಿನಿಮಾಗಳನ್ನು ನೋಡುತ್ತೇನೆ. ಈ ಹಿಂದೆ ‘ಚಾಲಿಪೋಲಿಲು’ ಅನ್ನುವ ತುಳು ಚಿತ್ರ ನಿರ್ಮಿಸಿ ದಾಖಲೆ ಬರೆದಿದ್ದ ಆತ್ಮೀಯ ಮಿತ್ರ ಪ್ರಕಾಶ್ ಪಾಂಡೇಶ್ವರ್ ನಿರ್ಮಾಣ ಮಾಡಿರುವ ಈ ಸಿನಿಮಾ ಕೂಡ ಶತದಿನ ಆಚರಿಸಲಿ ಎಂದರು. ತುಳು ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ಕಿಶೋರ್ ಡಿ. ಶೆಟ್ಟಿ ಮಾತಾಡಿ, ಎಲ್ಲರೂ ನೋಡಿ ಚಿತ್ರತಂಡವನ್ನು ಗೆಲ್ಲಿಸಿ ಎಂದರು. ಕುಸೇಲ್ದರಸೆ ನವೀನ್ ಡಿ. ಪಡೀಲ್ ಮಾತಾಡಿ, ನಾನ್ ವೆಜ್ ಸಿನಿಮಾ ಇಡೀ ಕುಟುಂಬ ಕೂತು ನೋಡಬಹುದಾದ ಫ್ಯಾಮಿಲಿ ಒರಿಯೆಂಟೆಡ್ ಚಿತ್ರ. ತುಳು ಚಿತ್ರಾಭಿಮಾನಿಗಳು ಸಿನಿಮಾ ನೋಡಿ ಆಶೀರ್ವಾದ ಮಾಡಿ ಎಂದರು. ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್. ಧನರಾಜ್, ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್, ವಿರಾಟ್ ಗೌಡ, ಅರ್ಜುನ್ ಕಾಪಿಕಾಡ್, ನಿರ್ಮಾಪಕ ಮುಖೇಶ್ ಹೆಗ್ಡೆ, ಭೋಜರಾಜ್ ವಾಮಂಜೂರ್, ಕ್ಯಾಟ್ಕದ ಮಾಜಿ ಅಧ್ಯಕ್ಷ ಪಮ್ಮಿ ಕೊಡಿಯಾಲ್ ಬೈಲ್, ಅಶ್ವಿನಿ ಪ್ರಕಾಶ್, ಇಸ್ಮಾಯಿಲ್ ಮೂಡುಶೆಡ್ಡೆ, ನಿರ್ದೇಶಕ ಸೂರಜ್ ಶೆಟ್ಟಿ, ನಟ ಅಥರ್ವ ಪ್ರಕಾಶ್ ಮತ್ತಿತರರು ಇದ್ದರು.ಇಡೀ ಸಿನಿಮಾದ ಕಥೆ ಹಾಗೂ ಸಂದೇಶವನ್ನು ಹಾಸ್ಯದಲ್ಲೇ ತೆಗೆದುಕೊಂಡಿರುವ ಹೋಗಿರುವುದು ಒಂದು ದೊಡ್ಡ ಪ್ಲಸ್ ಪಾಯಿಂಟ್. ಯುವಜನತೆಯ ತಳಮಳ, ಗೊಂದಲ, ಕುತೂಹಲಗಳನ್ನು ಮನಸ್ಪರ್ಶಿಯಾಗಿ ಚಿತ್ರಿಸಲಾಗಿದೆ. ಅದಕ್ಕೊಂದು ಸುಂದರ ಕಥೆಯ ರೂಪ, ಸಮಾಜಕ್ಕೊಂದು ಒಳ್ಳೆಯ ಸಂದೇಶವನ್ನೂ ನೀಡಲಾಗಿದೆ ಎಂದು ಸಿನಿಮಾದ ನಿರ್ದೇಶಕ ಸೂರಜ್ ಶೆಟ್ಟಿ ಹೇಳಿದರು. ಯುವಜನತೆಯ ತಳಮಳವನ್ನು ಕೇಂದ್ರೀಕರಿಸಿಕೊಂಡು ಸಿದ್ಧಪಡಿಸಲಾಗಿರುವ ಈ ಸಿನಿಮಾವು ಕಾಲೇಜು ವಿದ್ಯಾರ್ಥಿಗಳು ಸಹಿತ ಯುವಜನಾಂಗದ ಮನ ಗೆಲ್ಲ ಬಹುದೆಂದು ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.