ಮಂಗಳೂರು: ಅವಿಕಾ ಪ್ರೊಡಕ್ಷನ್ ಮತ್ತು ಬಿಆರ್‌ಬಿ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾಗಿರುವ ಅರ್ಜುನ್ ದೇವ್ ನಿರ್ದೇಶನ, ನಟನೆಯ ‘ಟಾಸ್’ ತುಳು ಸಿನಿಮಾ 18ರಂದು ರಾಜ್ಯಾದ್ಯಂತ ತೆರೆಕಾಣಲಿದೆ.
ನಿರ್ಮಾಪಕರು: ಪಿ ಆ್ಯಂಡ್ ವೈ ವಲ್ಡ್ ಟೂರ್ಸ್ ಎಲ್.ಎಲ್.ಪಿ. ಸಾಗರ್ ಪೂಜಾರಿ, ಕಥೆ-ಚಿತ್ರಕಥೆ-ಸಂಭಾಷಣೆ ಗೀತೆಗಳು, ಡಾ. ದೇವದಾಸ್ ಕಾಪಿಕಾಡ್, ನಿರ್ದೇಶಕರು ಅರ್ಜುನ್ ದೇವ್, ಸಹ ನಿರ್ದೇಶಕರು ಯಶಾಂತ್ ಕಲ್ಲಡ್ಕ, ರಾಕೇಶ್ ಬಿ.ಜೆ. ವಿಕ್ರಮ್ ದೇವಾಡಿಗ, ಸಹಾಯಕ ನಿರ್ದೇಶಕರು ಸೌರವ್ ರಾಮ್, ಸುಜಿತ್ ವಿನೋದ್, ಆಶಿಷ್ ರಾವ್ ಛಾಯಾಗ್ರಹಣ ಜೋಯೆಲ್ ಶಮನ್ ಡಿ’ಸೋಜಾ, ಸಹಾಯಕ ಛಾಯಾಗ್ರಾಹಕರು ಅಮನ್ ಪ್ರಖ್ಯಾತ್, ಕಲಾ ನಿರ್ದೇಶನ ರಾಜೇಶ್ ಕೊಳಕೆ ರಾಜೇಶ್ ಬಂದ್ಯೋಡು, ಸಂಕಲನ ಯಶ್ವಿನ್ ಕೆ. ಶೆಟ್ಟಿಗಾರ್, ಸಂಗೀತ ಮಣಿಕಾಂತ್ ಕದ್ರಿ, ಕಾರ್ಯಕಾರಿ ನಿರ್ಮಾಪಕರು ಸಂದೀಪ್ ಶೆಟ್ಟಿ, ವಸ್ತ್ರ ವಿನ್ಯಾಸ ಅನುಪ್ ಸಾಗರ್. ವಿತರಕರಾಗಿ ಸಚಿನ್ ಎಎಸ್ ಉಪ್ಪಿನಂಗಡಿ ಕೆಲಸ ಮಾಡಿದ್ದಾರೆ ಎಂದರು.
ಡಾ. ದೇವದಾಸ್ ಕಾಪಿಕಾಡ್, ಅರ್ಜುನ್ ದೇವ್, ನವೀನ್ ಡಿ ಪಡೀಲ್, ಭೋಜರಾಜ್ ವಾಮಂಜೂರ್, ಅರವಿಂದ್ ಬೋಳಾರ್, ಪ್ರಕಾಶ್ ತುಮಿನಾಡು, ದೀಪಕ್ ರೈ ಪಾಣಾಜೆ, ಪುಷ್ಪರಾಜ್ ಬೊಳ್ಳಾರ್, ಸುತೇಜ್ ಶೆಟ್ಟಿ, ಸಂಗೀತಾ ಶೆಟ್ಟಿ, ಶೋಭರಾಜ್ ಪಾವೂರ್, ಚೈತ್ರಾ ಶೆಟ್ಟಿ, ಕೃತಿ ಶೆಟ್ಟಿ ಅಭಿನಯಿಸಿದ್ದಾರೆ.‘ಟಾಸ್’ ತುಳು ಹಾಗೂ ಕನ್ನಡ ಭಾಷೆಯಲ್ಲಿ ತಯಾರಾಗಿದೆ. ಎರಡನ್ನೂ ಬೇರೆ ಬೇರೆಯಾಗಿ ಚಿತ್ರೀಕರಣ ಮಾಡಲಾಗಿದೆ. ಈ ಸಿನಿಮಾಗಳಿಗೆ ನಟ ಗಣೇಶ್ ಮತ್ತು ಶಿಲ್ಪಾ ಗಣೇಶ್ ಸಾಥ್ ನೀಡಿದ್ದಾರೆ ಎಂದು ಅವರು ತಿಳಿಸಿದರು.‘ಟಾಸ್’ ಸಿನಿಮಾ ಮಂಗಳೂರು, ಸುರತ್ಕಲ್, ಪಡುಬಿದ್ರೆ, ಉಡುಪಿ, ಮಣಿಪಾಲ, ಕುಂದಾಪುರ ಕಾರ್ಕಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಸಹಿತ ಬೇರೆ ಬೇರೆ ಕಡೆಗಳಲ್ಲಿ ಬಿಡುಗಡೆಗೊಳ್ಳಲಿದೆ. ಬೆಂಗಳೂರು, ಮೈಸೂರು ಮೊದಲಾದ ಕಡೆಗಳಲ್ಲೂ ಬಿಡುಗಡೆಯಾಗಲಿದೆ. ಹಣ ಕೊಟ್ಟು ಬರುವ ಪ್ರೇಕ್ಷಕರಿಗೆ ಏನೇನು ಬೇಕೋ ಎಲ್ಲವೂ ‘ಟಾಸ್’ ಸಿನಿಮಾದಲ್ಲಿದೆ ಎಂದು ನಿರ್ದೇಶಕ ಅರ್ಜುನ್ ದೇವ್ ತಿಳಿಸಿದರು.