‘ಧರ್ಮದೈವ’ ತುಳು ಚಲನಚಿತ್ರ ಕರಾವಳಿಯಲ್ಲಿ ತೆರೆಗೆ

KannadaprabhaNewsNetwork |  
Published : Jul 06, 2024, 12:50 AM IST
111 | Kannada Prabha

ಸಾರಾಂಶ

ಭಾಗವತ ಪಟ್ಲ ಸತೀಶ್ ಶೆಟ್ಟಿ ಮಾತಾಡಿ, ಸಿನಿಮಾದಲ್ಲಿ ನಾನು ಟೈಟಲ್ ಹಾಡನ್ನು ಹಾಡಿದ್ದೇನೆ. ತುಳುನಾಡಿನ ಜನರು ಸಿನಿಮಾವನ್ನು ಗೆಲ್ಲಿಸುತ್ತಾರೆಂಬ ವಿಶ್ವಾಸವಿದೆ ಎಂದರು.

ಕನ್ನಡಪ್ರಭ ವಾರ್ತೆ ಮಂಗಳೂರುಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನದಲ್ಲಿ ಬಿಳಿಯಾರು ರಾಕೇಶ್ ಭೋಜರಾಜ ಶೆಟ್ಟಿಯವರ ನಿರ್ಮಾಣದಲ್ಲಿ ತಯಾರಾದ ‘ಧರ್ಮದೈವ’ ತುಳು ಸಿನಿಮಾ ಮಂಗಳೂರಿನ ಭಾರತ್ ಸಿನಿಮಾಸ್‌ನಲ್ಲಿ ಶುಕ್ರವಾರ ತೆರೆಕಂಡಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಸಿನಿಮಾ ಬಿಡುಗಡೆ ಮಾಡಿ ಶುಭ ಹಾರೈಸಿದರು.

ಬಳಿಕ ಮಾತಾಡಿದ ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್, ಧರ್ಮದೈವ ಈಗಾಗಲೇ ದೇಶ ವಿದೇಶಗಳಲ್ಲಿ ಪ್ರೀಮಿಯರ್ ಶೋ ಪ್ರದರ್ಶನ ಕಂಡಿದೆ. ನೋಡಿದವರೆಲ್ಲರೂ ಸಿನಿಮಾ ಕುರಿತು ಮುಕ್ತವಾಗಿ ಶ್ಲಾಘಿಸಿದ್ದಾರೆ. ಬಹಳ ಕಠಿಣ ಪರಿಶ್ರಮದಿಂದ ಸಿನಿಮಾ ಮಾಡಿದ್ದಾರೆ ಎಂದರು.ಮುಂಬೈ ಹೇರಂಭ ಇಂಡಸ್ಟ್ರಿಸ್ ಸಿಎಂಡಿ ಕನ್ಯಾನ‌ ಸದಾಶಿವ ಶೆಟ್ಟಿ ಮಾತನಾಡಿ, ಧರ್ಮದೈವ ತುಳುನಾಡಿನ ಕಾರಣಿಕ ಶಕ್ತಿಗಳ ಕುರಿತಾದ ಸಿನಿಮಾ. ಸಿನಿಮಾ ಗೆಲ್ಲಲು ಪ್ರೇಕ್ಷಕರ ಬೆಂಬಲ ಬೇಕೇ ಬೇಕು ಎಂದರು.ದೇವದಾಸ್ ಕಾಪಿಕಾಡ್ ಮಾತನಾಡಿ, ಧರ್ಮದೈವ ಸಿನಿಮಾ ದೈವಗಳ ಕುರಿತು ಯಾವುದೇ ವಿಡಂಬನೆ ಇಲ್ಲದೆ ತುಳುನಾಡಿನ ದೈವಗಳ ಶಕ್ತಿಯನ್ನು ಜಗತ್ತಿಗೆ ಪರಿಚಯಿಸುವ ಸಿನಿಮಾ. ಇಂದು ಮಲಯಾಳಂ ಸಿನಿಮಾಗಳು ಸಾಲು ಸಾಲು ಗೆಲ್ಲುತ್ತಿವೆ. ತುಳು ಸಿನಿಮಾ ರಂಗದಲ್ಲೂ ಅಂಥ ವಿಭಿನ್ನ ಸಿನಿಮಾಗಳು ಬರಬೇಕು ಎಂದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮಾತನಾಡಿ, ದೈವದ ಇಚ್ಛೆಯಿಲ್ಲದೆ ಏನೂ ನಡೆಯುವುದಿಲ್ಲ. ಇಂಥ ಉತ್ತಮ ಪ್ರಯತ್ನಕ್ಕೂ ದೈವಗಳೇ ಕಾರಣ. ಮುಂದೆಯೂ ತುಳು ಚಿತ್ರರಂಗದಲ್ಲಿ ಉತ್ತಮ ಸಿನಿಮಾಗಳು ಬರಲಿ ಎಂದರು. ಭಾಗವತ ಪಟ್ಲ ಸತೀಶ್ ಶೆಟ್ಟಿ ಮಾತಾಡಿ, ಸಿನಿಮಾದಲ್ಲಿ ನಾನು ಟೈಟಲ್ ಹಾಡನ್ನು ಹಾಡಿದ್ದೇನೆ. ತುಳುನಾಡಿನ ಜನರು ಸಿನಿಮಾವನ್ನು ಗೆಲ್ಲಿಸುತ್ತಾರೆಂಬ ವಿಶ್ವಾಸವಿದೆ ಎಂದರು. ಉದ್ಯಮಿ ಕೆ. ಕೆ. ಶೆಟ್ಟಿ, ತುಳು ಚಲನ‌ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್. ಧನರಾಜ್ ಪಟ್ಲ, ಪ್ರಕಾಶ್ ಪಾಂಡೇಶ್ವರ್, ಸ್ವರಾಜ್ ಶೆಟ್ಟಿ, ರಮೇಶ್ ರೈ ಕುಕ್ಕುವಳ್ಳಿ, ಚೇತನ್ ರೈ ಮಾಣಿ, ಭೋಜರಾಜ್ ವಾಮಂಜೂರ್, ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕಳ, ಇಸ್ಮಾಯಿಲ್ ಮೂಡುಶೆಡ್ಡೆ, ಪ್ರದೀಪ್ ಆಳ್ವ ಕದ್ರಿ, ಭಾಸ್ಕರ್ ರೈ ಕುಕ್ಕುವಳ್ಳಿ, ಕೆ. ಕೆ. ಪೇಜಾವರ, ದಯಾನಂದ ಕತ್ತಲ್ ಸಾರ್, ಸುಹಾನ್ ಆಳ್ವ, ರೂಪಾ ವರ್ಕಾಡಿ, ಚಂದ್ರಹಾಸ ಆಳ್ವ, ಹೇಮಂತ್ ಸುವರ್ಣ, ನಿರ್ಮಾಪಕ ಬಿಳಿಯಾರು ರಾಕೇಶ್ ಭೋಜರಾಜ ಶೆಟ್ಟಿ, ನಿರ್ದೇಶಕ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ಮತ್ತಿತರರಿದ್ದರು.

ಲಿಖಿತ್ ರೈ ಕಾರ್ಯಕ್ರಮ‌ ನಿರ್ವಹಿಸಿದರು.‌------------------

PREV

Recommended Stories

KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?