ಕೈಗಾರಿಕಾ ಹಬ್ ತುಮಕೂರು ಚಿತ್ರಣ ಶೀಘ್ರ ಬದಲು: ಸಚಿವ ಸೋಮಣ್ಣ

KannadaprabhaNewsNetwork |  
Published : Oct 10, 2026, 01:15 AM IST
000 | Kannada Prabha

ಸಾರಾಂಶ

ರಾಜ್ಯ ಸರ್ಕಾರ ಹೇಳಿದ ಸುಳ್ಳನ್ನೇ ಪದೇ ಪದೇ ಜನರ ಮುಂದೆ ಹೇಳುತ್ತಿದೆ. ಒಂದು ಸುಳ್ಳನ್ನು ನೂರು ಬಾರಿ ಹೇಳಿದರೂ ಅದು ಸುಳ್ಳೇ. ಯಾವುದೇ ಕಾರಣಕ್ಕೂ ಸತ್ಯವಾಗುವುದಿಲ್ಲ. ಆದ್ದರಿಂದ ರಾಜ್ಯ ಸರ್ಕಾರದ ಯಾವುದೇ ಪೊಳ್ಳು ಭರವಸೆಗಳಿಗೆ ಕಿವಿಗೊಡದೇ ಆಗ್ನೇಯ ಪದವೀಧರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್‌ರವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ, ತುಮಕೂರು

ತುಮಕೂರು ಕೈಗಾರಿಕಾ ಹಬ್ ಆಗಿ ಬೆಳವಣಿಗೆಯಾಗುತ್ತಿದೆ. ಮುಂದಿನ 3-4 ವರ್ಷದಲ್ಲಿ ತುಮಕೂರು ಚಿತ್ರಣವೇ ಬದಲಾಗಲಿದ್ದು, ತುಮಕೂರು-ಬೆಂಗಳೂರು ರೈಲು ಮಾರ್ಗವನ್ನು ನಾಲ್ಕು ಪಥಕ್ಕೆ ಅಭಿವೃದ್ಧಿಪಡಿಸಲಾಗುವುದು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅವರು ಹೇಳಿದರು.

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಪರ ವಿದ್ಯಾವಾಹಿನಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ದೇಶದ ವ್ಯವಸ್ಥೆಯಲ್ಲಿ ಕರ್ನಾಟಕವೂ ಒಂದು ಭಾಗ. ನಾನು 6 ಬಾರಿ ರಾಜ್ಯ ಸರ್ಕಾರದ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಈಗ ಕೇಂದ್ರ ಸರ್ಕಾರದಲ್ಲಿ ಸಚಿವನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಅನಿರೀಕ್ಷಿತವಾಗಿ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಂದು ಸ್ಪರ್ಧಿಸಿ ಗೆದ್ದಿದ್ದೇನೆ. ಇದಕ್ಕೆಲ್ಲಾ ಪ್ರಧಾನಿ ಮೋದಿಯವರೇ ಪ್ರಮುಖ ಕಾರಣ ಎಂದರು.ದೇಶದ ಅಭಿವೃದ್ಧಿಯ ಸಂಕೇತವಾಗಿರುವ ಮಹಿಳೆಯರಿಗೆ ಉತ್ತಮ ಭವಿಷ್ಯ ರೂಪಿಸಲು ಪ್ರಧಾನಿ ನರೇಂದ್ರ ಮೋದಿಯವರು ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ ಎಂದರು.ರಾಜ್ಯ ಸರ್ಕಾರ ಹೇಳಿದ ಸುಳ್ಳನ್ನೇ ಪದೇ ಪದೇ ಜನರ ಮುಂದೆ ಹೇಳುತ್ತಿದೆ. ಒಂದು ಸುಳ್ಳನ್ನು ನೂರು ಬಾರಿ ಹೇಳಿದರೂ ಅದು ಸುಳ್ಳೇ. ಯಾವುದೇ ಕಾರಣಕ್ಕೂ ಸತ್ಯವಾಗುವುದಿಲ್ಲ. ಆದ್ದರಿಂದ ರಾಜ್ಯ ಸರ್ಕಾರದ ಯಾವುದೇ ಪೊಳ್ಳು ಭರವಸೆಗಳಿಗೆ ಕಿವಿಗೊಡದೇ ಆಗ್ನೇಯ ಪದವೀಧರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್‌ರವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.ಶಾಸಕ ಜ್ಯೋತಿಗಣೇಶ್ ಮಾತನಾಡಿ, ಅ. 23 ರಂದು ನಡೆಯಲಿರುವ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ರವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡುವ ಮೂಲಕ ಬೆಂಬಲಿಸಬೇಕು ಎಂದರು.ವಿದ್ಯಾವಾಹಿನಿ ಸಂಸ್ಥೆ ಕೆ.ಬಿ. ಜಯಣ್ಣನವರು ಸ್ಥಾಪಿಸಿರುವ ಸಂಸ್ಥೆ. ಪ್ರದೀಪ್‌ರವರು ಈ ಸಂಸ್ಥೆಯನ್ನು ಮುನ್ನಡೆಸುತ್ತಾ ಅತ್ಯಂತ ಉತ್ತುಂಗಕ್ಕೆ ಕೊಂಡೊಯ್ದಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರದೀಪ್‌ಕುಮಾರ್ ಮಾತನಾಡಿ, ಆಗ್ನೇಯ ಪದವೀಧರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯಾಗಿರುವ ಸುರೇಶ್ ಅವರನ್ನು ಅ. 23 ರಂದು ನಡೆಯಲಿರುವ ಚುನಾವಣೆಯಲ್ಲಿ ಗೆಲ್ಲಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ನಾವೆಲ್ಲಾ ಒಟ್ಟಾಗಿ ಕೆಲಸ ಮಾಡಿ ಸುರೇಶ್ ಅವರನ್ನು ಗೆಲ್ಲಿಸಬೇಕು ಎಂದು ಹೇಳಿದರು.ಅಭ್ಯರ್ಥಿ ಕೆ.ಎಂ. ಸುರೇಶ್ ಮಾತನಾಡಿ, ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿರುವ ನನಗೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಪಕ್ಷ ಅವಕಾಶ ಮಾಡಿ ಕೊಟ್ಟಿದೆ. ಟಿಕೆಟ್ ಘೋಷಣೆ ವೇಳೆ ಆಕಾಂಕ್ಷಿಯಾಗಿದ್ದ ಪ್ರದೀಪ್‌ಕುಮಾರ್ ಹಾಗೂ ನಾನು ಯಾರಿಗೆ ಟಿಕೆಟ್ ದೊರೆತರೂ ಅವರ ಪರ ಕೆಲಸ ಮಾಡುವುದಾಗಿ ಹೇಳಿದ್ದೆವು. ಅದರಂತೆ ಪ್ರದೀಪ್‌ಕುಮಾರ್ ತಮ್ಮ ಪರ ಕೆಲಸ ಮಾಡುತ್ತಿದ್ದಾರೆ ಎಂದರು.ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿಶಂಕರ್, ಮುಖಂಡರಾದ ವೈ.ಹೆಚ್. ಹುಚ್ಚಯ್ಯ, ತುಮಕೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಟಿ.ಎಸ್. ಸುನೀಲ್ ಪ್ರಸಾದ್, ಭೈರಣ್ಣ, ಸುಬ್ರಹ್ಮಣ್ಯ ವಿದ್ಯಾವಾಹಿನಿ ಕಾಲೇಜಿನ ಪ್ರಾಂಶುಪಾಲ ಸಿದ್ದೇಶ್ವರಸ್ವಾಮಿ ಮತ್ತಿತರರು ಭಾಗವಹಿಸಿದ್ದರು.

---ಬಾಕ್ಸ---

ಸಿದ್ದಗಂಗಾ ಮಠದಿಂದ ಚುನಾವಣಾ ಪ್ರಚಾರಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಹಾಗೂ ಶಾಸಕ ಜ್ಯೋತಿಗಣೇಶ್ ಅವರು ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಪರ ಸಿದ್ದಗಂಗಾ ಮಠದಿಂದ ಚುನಾವಣಾ ಪ್ರಚಾರ ಕೈಗೊಂಡು ಮತಯಾಚಿಸಿದರು.

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಚಿವ ಸೋಮಣ್ಣ, ಅಭ್ಯರ್ಥಿ ಕೆ.ಎಂ. ಸುರೇಶ್, ಶಾಸಕ ಜ್ಯೋತಿಗಣೇಶ್ ಹಾಗೂ ಎನ್‌ಡಿಎ ಮುಖಂಡರು ಶ್ರೀಮಠದ ಶಿಕ್ಷಣ ಸಂಸ್ಥೆಗಳಲ್ಲಿರುವ ಪದವೀಧರ ಶಿಕ್ಷಕರನ್ನು ಭೇಟಿ ಮಾಡಿ, ಅ.23ರಂದು ನಡೆಯಲಿರುವ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಬೆಂಬಲಿಸುವಂತೆ ಮನವಿ ಮಾಡಿದರು.

ಶ್ರೀಮಠದಿಂದ ಆರಂಭವಾದ ಚುನಾವಣಾ ಪ್ರಚಾರ ಎಸ್‌ಐಟಿ ಕಾಲೇಜು, ಎಪಿಎಂಸಿ ಯಾರ್ಡ್ ಆವರಣದಲ್ಲಿರುವ ಚೇಂಬರ್ ಆಫ್ ಕಾಮರ್ಸ್, ತುಮಕೂರು ವಿಶ್ವವಿದ್ಯಾನಿಲಯ ಕಾಲೇಜು, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆಗಳು ಸೇರಿ ವಿವಿಧ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಧಾರ್ ತಿದ್ದುಪಡಿಗಾಗಿ ಅಂಚೆ ಕಚೇರಿ ಎದುರು ಜನರ ಪರದಾಟ
ಕಲಬುರಗಿ: ಜಿಪಂ ಮೀಸಲಾತಿ ಪ್ರಕಟ