ತುಮಕೂರು ಜಿ.ಪಂಗೆ ಜೆ.ಎಸ್.ಜೆ.ಬಿ. ರಾಷ್ಟ್ರಪ್ರಶಸ್ತಿ

KannadaprabhaNewsNetwork |  
Published : Nov 20, 2025, 12:00 AM IST

ಸಾರಾಂಶ

ತುಮಕೂರು ಜಿಲ್ಲಾ ಪಂಚಾಯಿತಿಯು 2024-25ನೇ ಸಾಲಿನಲ್ಲಿ 9,885 ಜಲ ಸಂರಕ್ಷಣಾ ಕಾಮಗಾರಿಗಳನ್ನು ಕೈಗೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಜಲ ಶಕ್ತಿ ಇಲಾಖೆ ನೀಡುವ ಜಲ ಸಂಚಾಯಿ- ಜನ ಭಾಗಿದಾರಿ (ಜೆ.ಎಸ್.ಜೆ.ಬಿ) ರಾಷ್ಟ್ರ ಪ್ರಶಸ್ತಿಗೆ ಭಾಜನವಾಗಿದೆ.

ಕನ್ನಡಪ್ರಭ ವಾರ್ತೆ, ತುಮಕೂರು

ತುಮಕೂರು ಜಿಲ್ಲಾ ಪಂಚಾಯಿತಿಯು 2024-25ನೇ ಸಾಲಿನಲ್ಲಿ 9,885 ಜಲ ಸಂರಕ್ಷಣಾ ಕಾಮಗಾರಿಗಳನ್ನು ಕೈಗೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಜಲ ಶಕ್ತಿ ಇಲಾಖೆ ನೀಡುವ ಜಲ ಸಂಚಾಯಿ- ಜನ ಭಾಗಿದಾರಿ (ಜೆ.ಎಸ್.ಜೆ.ಬಿ) ರಾಷ್ಟ್ರ ಪ್ರಶಸ್ತಿಗೆ ಭಾಜನವಾಗಿದೆ.

ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರ ಉಪಸ್ಥಿತಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರು ನೀಡಿದ ಪ್ರಶಸ್ತಿಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಜಿ. ಪ್ರಭು ಅವರು ಸ್ವೀಕರಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ಅವರ ಮಾರ್ಗದರ್ಶನ ಮತ್ತು ನಿರ್ದೇಶನದಲ್ಲಿ ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ 2738 ಗ್ರಾಮಗಳಲ್ಲಿ 9,885 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.

ಜಿಲ್ಲೆಯಲ್ಲಿ ಜಲ ಮೂಲದ ಸಂರಕ್ಷಣೆಯಡಿ ಅಂತರ್ಜಲ ವೃದ್ಧಿಗಾಗಿ, ನೀರು ಸಂರಕ್ಷಣೆಗೆ ಆದ್ಯತೆ ನೀಡಲಾಗಿದ್ದು, ಕಂದಕ ಬದು, ಕೆರೆ ಹೂಳೆತ್ತುವುದು, ಕಟ್ಟೆ ಅಭಿವೃದ್ಧಿ, ಕಾಲುವೆ ಅಭಿವೃದ್ಧಿ, ಬೆಟ್ಟಗಳಲ್ಲಿ ಸಮಪಾತಳಿ ಕಂದಕ ಬದುಗಳ ನಿರ್ಮಾಣ, ಕಲ್ಯಾಣಿಗಳ ಅಭಿವೃದ್ಧಿ, ಚೆಕ್ ಡ್ಯಾಮ್ ನಿರ್ಮಾಣ, ಇಂಗು ಗುಂಡಿ ಸೇರಿದಂತೆ ಹಲವು ಕಾಮಗಾರಿಗಳಿಂದ ನೀರು ಶೇಖರಣೆಗೊಂಡು ಅಂತರ್ಜಲ ಮಟ್ಟ ಹೆಚ್ಚಲು ಕಾರಣವಾಗಿದೆ.

ಜಿಲ್ಲೆಯಲ್ಲಿ ವಿಶೇಷವಾಗಿ ನರೇಗಾ ಯೋಜನೆಯಡಿ ಗ್ರಾಮ ಪಂಚಾಯಿತಿ ಮಿಷನ್-500 ಅಭಿಯಾನ ಕೈಗೊಂಡು ರೈತರ ಜಮೀನುಗಳಲ್ಲಿ ಬದು ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ. ಈ ಎಲ್ಲಾ ಕಾಮಗಾರಿಗಳ ಪರಿಣಾಮವಾಗಿ ಜಲ ಸಂರಕ್ಷಣೆ-ಜನರ ಭಾಗವಹಿಸುವಿಕೆ ಅಭಿಯಾನ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಗೆ ಈ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿ ಸಮಾರಂಭದಲ್ಲಿ ಕೊರಟಗೆರೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಪೂರ್ವ ಭಾಗಿಯಾಗಿದ್ದರು. ಈ ಸಂತಸದ ವಿಷಯವನ್ನು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರೊಂದಿಗೆ ಹಂಚಿಕೊಳ್ಳಲಾಯಿತು.

PREV

Recommended Stories

ಪೌರಾಯುಕ್ತ ಜಿ.ಎನ್.ಛಲಪತಿ ನೇತೃತ್ವದಲ್ಲಿ ಅಕ್ರಮ ಶೆಡ್ ಗಳ ತೆರವು
ಜಲ ಸಂರಕ್ಷಣೆಯಲ್ಲಿ ಕೋಲಾರ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ, ೨೫ ಲಕ್ಷ ರು.ನಗದು ಬಹುಮಾನ